Uppunda: ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು
ಬಲೆ ಬೀಸಿ ಮೀನು ಹಿಡಿಯುವ ವೇಳೆ ದುರ್ಘಟನೆ
Team Udayavani, May 28, 2024, 3:59 PM IST
ಉಪ್ಪುಂದ: ನದಿ ದಡದ ಮೇಲೆ ನಿಂತು ಬಲೆ ಬೀಸಿ ಮೀನು ಹಿಡಿಯುವ ಸಮಯದಲ್ಲಿ ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ನಾಡ ಗ್ರಾಮದ ಬಡಾಕೆರೆ ಸೌಪರ್ಣಿಕಾ ನದಿ ದಡದಲ್ಲಿ ಸಂಭವಿಸಿದೆ.
ಮಂಜು (57) ಮೃತಪಟ್ಟ ವ್ಯಕ್ತಿ.
ಘಟನೆ ವಿವರ: ಮೀನುಗಾರಿಕೆ ವೃತ್ತಿ ಮಾಡಿಕೊಂಡಿರುವ ಮಂಜು ಎಂದಿನಂತೆ ಸೋಮವಾರ ಮಧ್ಯಾಹ್ನ 3.30 ಸುಮಾರಿಗೆ ನದಿಯಲ್ಲಿ ಮೀನು ಹಿಡಿಯಲೆಂದು ಮನೆಯಿಂದ ತೆರಳಿದ್ದರು. ಸೌಪರ್ಣಿಕಾ ನದಿ ದಡದ ಮೇಲೆ ನಿಂತು ಬಲೆ ಬೀಸಿ ಮೀನುಗಾರಿಕೆ ಮಾಡುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ನಾಪತ್ತೆಯಾಗಿದ್ದರು.
ಸ್ಥಳೀಯರು ನದಿಯಲ್ಲಿ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ, ನೀರಿನ ಒಳ ಹರಿವು ಹೆಚ್ಚಾಗಿರುವುದರಿಂದ ಸಮಸ್ಯೆಯಾಗಿತ್ತು. ಮಂಗಳವಾರ ಸೌಪರ್ಣಿಕಾ ನದಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಬೈಂದೂರು ಠಾಣಾಧಿಕಾರಿ ಡಾ.ಹರ್ಷ ಐಪಿಎಸ್ ಮತ್ತು ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿದರು. ಈ ಸಂಬಂಧ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.