ಚಂದ್ರಶೇಖರ್‌ ಆತ್ಮಹತ್ಯೆ ಪ್ರಕರಣ: ರಾಜೀನಾಮೆ ಮಾತೇ ಇಲ್ಲ; ಸಚಿವ ನಾಗೇಂದ್ರ

ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ನನ್ನ ಹೆಸರು ಏಕೆ ಬರೆದರೋ ಗೊತ್ತಿಲ್ಲ

Team Udayavani, May 29, 2024, 6:45 AM IST

ರಾಜೀನಾಮೆ ಮಾತೇ ಇಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 87 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಎಸ್‌ಟಿ ಕಲ್ಯಾಣ ಸಚಿವ ಬಿ.ನಾಗೇಂದ್ರ ಹೇಳಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಅವರು, ಆತ್ಮಹತ್ಯೆ ಮಾಡಿಕೊಂಡಿರುವ ನಿಗಮದ ಅಧಿಕಾರಿ ಚಂದ್ರಶೇಖರ್‌ ಮರಣ ಪತ್ರದಲ್ಲಿ ನನ್ನ ಹೆಸರು ಏಕೆ ಬರೆದಿದ್ದಾರೆಂದು ಗೊತ್ತಿಲ್ಲ. ಇದರಲ್ಲಿ ನನ್ನ ಪಾತ್ರವೇನೂ ಇಲ್ಲ ಎಂದು ತಮಗೆ ತಾವೇ ಪ್ರಮಾಣೀಕರಿಸಿಕೊಂಡರು.ನಿಗಮದಲ್ಲಿ ಇಂತಹದೊಂದು ಘಟನೆ ನಡೆದಿದೆ ಎನ್ನುವುದು ನನ್ನ ಗಮನಕ್ಕೆ ಬಂದಿರಲಿಲ್ಲ. ನಾವೆಲ್ಲರೂ ಲೋಕಸಭೆ, ವಿಧಾನಪರಿಷತ್‌ ಚುನಾವಣಾ ಕಾರ್ಯದಲ್ಲಿದ್ದೆವು. ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಇಲಾಖೆ ಹಾಗೂ ನಿಗಮದ ವ್ಯವಹಾರಗಳಲ್ಲಿ ತಲೆ ಹಾಕಿಲ್ಲ. ನಾನು ಯಾವುದೇ ಆದೇಶ ನೀಡುವುದಾದರೂ ದಾಖಲೆ ಸಮೇತ ಸಹಿ ಮಾಡಿಯೇ ಕೊಡುತ್ತೇನೆ. ಮೌಖೀಕ ಆದೇಶಗಳನ್ನೆಲ್ಲಾ ಕೊಡುವವನಲ್ಲ. ಆದರೂ ನನ್ನ ಹೆಸರು ಹೇಗೆ ಥಳಕು ಹಾಕಿಕೊಂಡಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ ಎಂದು ಸಮರ್ಥಿಸಿಕೊಂಡರು.

ಎರಡೂ ತಿಂಗಳಾದರೂ ನನ್ನ ಗಮನಕ್ಕೆ ಬಂದಿಲ್ಲ:
ನಿಗಮದ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಯೂನಿಯನ್‌ ಬ್ಯಾಂಕ್‌ ಆಫ್ ಇಂಡಿಯಾದಲ್ಲಿ ಒಟ್ಟು 187 ಕೋಟಿ ರೂ. ಹಣವಿಡಲಾಗಿತ್ತು. ಈ ಪೈಕಿ 87 ಕೋಟಿ ರೂ.ಗಳು ಎಂ.ಜಿ. ರಸ್ತೆಯ ಯೂನಿಯನ್‌ ಬ್ಯಾಂಕ್‌ನಲ್ಲಿನ ಅನಧಿಕೃತ ಖಾತೆಗೆ ವರ್ಗಾವಣೆ ಆಗಿದೆ. ಮಾರ್ಚ್‌ 30 ರಂದು ಈ ಘಟನೆ ನಡೆದಿದ್ದು, ಇದುವರೆಗೆ ನನ್ನ ಗಮನಕ್ಕೆ ಬಂದಿರಲಿಲ್ಲ. ಮಾಧ್ಯಮಗಳ ವರದಿ ನೋಡಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜೆ.ಪದ್ಮನಾಭ ಅವರನ್ನು ವಿಚಾರಿಸಿದಾಗ ಈ ಬಗ್ಗೆ ವಿವರಿಸಿದರು.

ಸೋಮವಾರ ಸಂಜೆಯೊಳಗೆ ಅಷ್ಟೂ ಹಣ ಬ್ಯಾಂಕ್‌ ಖಾತೆಯಲ್ಲಿ ಇರಬೇಕು ಎಂದು ಸೂಚಿಸಿದ್ದೆ. ಅಷ್ಟರಲ್ಲಿ ಲೆಕ್ಕಾಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿವರಿಸಿದರು.

ಸಿಐಡಿ ತನಿಖೆಗೆ ವಹಿಸಿ ಆದೇಶ:
ಇಷ್ಟೆಲ್ಲಾ ನಡೆದರೂ ನಿಗಮದ ಎಂಡಿಯಾಗಲೀ, ಯಾವ ಸಿಬ್ಬಂದಿಯೂ ನನ್ನ ಗಮನಕ್ಕೆ ತಂದಿಲ್ಲ. ಇದರ ಸಲುವಾಗಿಯೇ ಸೋಮವಾರ ಸಿಎಂ ಮತ್ತು ಡಿಸಿಎಂ ಅವರ ಗಮನಕ್ಕೂ ತಂದಿದ್ದು ತಕ್ಷಣವೇ ಇದನ್ನು ಸಿಐಡಿ ತನಿಖೆಗೂ ವಹಿಸಲಾಗಿದೆ. ನಿಗಮದ ಎಂಡಿ ಪದ್ಮನಾಭ, ಮತ್ತೋರ್ವ ಅಧಿಕಾರಿ ದುರ್ಗಣ್ಣ ಪ್ರಶಾಂತ್‌ ಮತ್ತು ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕಿ ಶುಚಿಸ್ಮಿತಾ ರಾಹುಲ್‌ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಸಿಐಡಿ ಅಧಿಕಾರಿಗಳು ಶಿವಮೊಗ್ಗಕ್ಕೂ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ ಎಂದರು.

ನಿಗಮದ ಎಂಡಿ ಸಹಿಯೂ ನಕಲು:
ಇದೆಲ್ಲದರ ಮಧ್ಯೆ ನಿಗಮದ ಎಂಡಿ ಪದ್ಮನಾಭ ಕೂಡ ಪೊಲೀಸರಿಗೆ ಮತ್ತೊಂದು ದೂರು ಕೊಟ್ಟಿದ್ದು, ತಮ್ಮ ಸಹಿಯನ್ನು ನಕಲು ಮಾಡಿ ಯಾರೋ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದು ಅದರ ವರದಿಗಾಗಿ ಕಾಯುತ್ತಿದ್ದೇವೆ. ನಿಗಮ ಹಾಗೂ ಬ್ಯಾಂಕ್‌ ಸಿಬ್ಬಂದಿ ಸೇರಿಯೇ ಈ ಕೃತ್ಯ ಎಸಗಿರುವಂತಿದೆ. 87 ಕೋಟಿ ರೂ.ಗಳಲ್ಲಿ 26 ಕೋಟಿ ರೂ. ವಾಪಸ್‌ ಬಂದಿದ್ದು ಉಳಿದ ಹಣ ವಾಪಸ್‌ ತರುವ ಜವಾಬ್ದಾರಿಯನ್ನು ನಿಗಮದ ಎಂಡಿಗೆ ವಹಿಸಿದ್ದೇವೆ. ಹೀಗಾಗಿ ಅವರ ವಿರುದ್ಧ ಇದುವರೆಗೆ ಯಾವುದೇ ಕ್ರಮ ಜರುಗಿಸಿಲ್ಲ. ಸಿಐಡಿ ತನಿಖಾ ವರದಿ ಹಾಗೂ ಎಫ್ಎಸ್‌ಎಲ್‌ ವರದಿ ಬಂದ ಬಳಿಕ ಯಾರೇ ತಪ್ಪಿತಸ್ಥರಿದ್ದರೂ ಕ್ರಮ ಜರುಗಿಸದೇ ಬಿಡುವುದಿಲ್ಲ. ಎಂಡಿಯನ್ನು ಸೇವೆಯಿಂದ ವಜಾ ಮಾಡಲೂ ಹಿಂಜರಿಯುವುದಿಲ್ಲ ಎಂದು ಹೇಳಿದರು.

ಎಲ್ಲದಕ್ಕೂ ವಿರೋಧ ಪಕ್ಷದವರು ಇದೇ ರೀತಿಯ ಹೇಳಿಕೆ ಕೊಡುತ್ತಲೇ ಇದ್ದಾರೆ. ಏಕೆ ಆತ್ಮಹತ್ಯೆ ಆಯಿತು ಇತ್ಯಾದಿಗಳನ್ನು ತಿಳಿದು ಮಾತನಾಡಬೇಕು. ಅತಿರೇಕದ ಹೇಳಿಕೆಗಳನ್ನೇ ಕೊಡುತ್ತಿದ್ದಾರೆ. ಅವರ ಕಾಲದಲ್ಲಿ ಯಾವ ರೀತಿ ಆಡಳಿತ ಮಾಡಿದ್ದಾರೆ ಎಂಬುದನ್ನು ನೋಡಿದ್ದೇವೆ. ವಿಷಯ ತಿಳಿದು ಮಾತನಾಡಿದರೆ ಒಳ್ಳೆಯದು ಅವರು.
-ದಿನೇಶ್‌ ಗುಂಡೂರಾವ್‌, ಆರೋಗ್ಯ ಸಚಿವ

ಟಾಪ್ ನ್ಯೂಸ್

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.