Crime News: ಕಾಸರಗೋಡು ವಿಭಾಗದ ಅಪರಾಧ ಸುದ್ದಿಗಳು
Team Udayavani, May 28, 2024, 9:50 PM IST
ಬಾವಿಗೆ ಬಿದ್ದ ಕೋಳಿಯನ್ನು ರಕ್ಷಿಸಲು ಇಳಿದ ಯುವಕ ಮೇಲಕ್ಕೇರುತ್ತಿದ್ದಾಗ ಬಿದ್ದು ಸಾವು
ಮುಳ್ಳೇರಿಯ: ಬಾವಿಗೆ ಬಿದ್ದ ಕೋಳಿಯನ್ನು ರಕ್ಷಿಸಲೆಂದು ಇಳಿದ ಯುವಕ ಮೇಲಕ್ಕೇರುತ್ತಿದ್ದಾಗ ಆಯ ತಪ್ಪಿ ಬಿದ್ದು ಸಾವಿಗೀಡಾದ ಘಟನೆ ನೆಟ್ಟಣಿಗೆಯಲ್ಲಿ ನಡೆದಿದೆ.
ನೆಟ್ಟಣಿಗೆ ಪಡೈಮೂಲೆ ನಿವಾಸಿ ಸುಂದರ ಅವರ ಪುತ್ರ ಸತೀಶ(30) ಸಾವಿಗೀಡಾದರು.
ನೆಟ್ಟಣಿಗೆ ಕಲ್ಲಗದ ರವಿ ಅವರ ಬಾವಿಗೆ ಮೇ 27 ರಂದು ಸಂಜೆ ಕೋಳಿ ಬಿದ್ದಿತ್ತು. ಅದನ್ನು ಮೇಲಕ್ಕೆತ್ತಲೆಂದು ಸತೀಶ ಹಗ್ಗದ ಮೂಲಕ ಬಾವಿಗೆ ಇಳಿದಿದ್ದರು. ಬಳಿಕ ಮೇಲೇರುತ್ತಿದ್ದಂತೆ ಆಯ ತಪ್ಪಿ ಬಾವಿಗೆ ಬಿದ್ದಿದ್ದು, ಕೂಡಲೇ ಕಾಸರಗೋಡಿನಿಂದ ತಲುಪಿದ ಅಗ್ನಿಶಾಮಕ ದಳ ಮೇಲಕ್ಕೆತ್ತಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ.
———————————————————————————–
ಬಸ್‌ನಲ್ಲಿ ದಾಖಲೆ ಪತ್ರಗಳಿಲ್ಲದೆ ಸಾಗಿಸುತ್ತಿದ್ದ 10 ರೂ. ಪತ್ತೆ ; ಕೊಯಿಪ್ಪಾಡಿ ನಿವಾಸಿ ವಶಕ್ಕೆ
ಬದಿಯಡ್ಕ: ಬೆಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ ಸರಿಯಾದ ದಾಖಲೆ ಪತ್ರಗಳಿಲ್ಲದೆ ಸಾಗಿಸುತ್ತಿದ್ದ 10 ಲಕ್ಷ ರೂ. ಯನ್ನು ಅಬಕಾರಿ ತಂಡ ಪತ್ತೆಹಚ್ಚಿದ್ದು, ಈ ಸಂಬಂಧ ಕುಂಬಳೆ ಕೊಯಿಪ್ಪಾಡಿ ಕುಚ್ಯಾಳಂದ ಕೆ.ಅಬ್ದುಲ್ ಸಮದ್(35)ನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದೆ.
ಈತನನ್ನು ಹಣ ಸಹಿತ ಆದೂರು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ವಾಹನ ತಪಾಸಣೆ ಮಾಡುತ್ತಿದ್ದಾಗ ಹಣ ಪತ್ತೆಯಾಯಿತು.
———————————————————————————-
ಮಂಜೇಶ್ವರದ ಚುನಾವಣಾ ತಕರಾರು ಪ್ರಕರಣ : ವಿಚಾರಣೆ ಮುಂದೂಡಿಕೆ
ಕಾಸರಗೋಡು: ಕಳೆದ ಬಾರಿ ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಲಂಚ ನೀಡಿರುವುದಾಗಿ ಆರೋಪಿಸಿ ನೀಡಲಾದ ದೂರಿನಂತೆ ದಾಖಲಾದ ಪ್ರಕರಣದ ವಿಚಾರಣೆಯನ್ನು ಕಾಸರಗೋಡು ಪ್ರಿನ್ಸಿಪಲ್ ಜಿಲ್ಲಾ ಸೆಶನ್ಸ್ ನ್ಯಾಯಾಲಯ ಜುಲೈ 11 ಕ್ಕೆ ಮುಂದೂಡಿದೆ.
ಬಿಜೆಪಿ ಅಭ್ಯರ್ಥಿ ಬಿಜೆಪಿ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್ ಸಹಿತ ಬಿಜೆಪಿಯ ಆರು ಮಂದಿ ನೇತಾರರನ್ನು ಪ್ರಕರಣದಲ್ಲಿ ಸೇರ್ಪಡೆಗೊಳಿಸಲಾಗಿದೆ. ಬಿಎಸ್‌ಪಿ ಅಭ್ಯರ್ಥಿ ಕೆ.ಸುಂದರ ಅವರಿಗೆ ಎರಡು ಲಕ್ಷ ರೂ. ನಗದು ಮತ್ತು ಮೊಬೈಲ್ ಫೋನ್ ನೀಡಿ ಅವರ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಮಾಡಲಾಯಿತೆಂದು ಆರೋಪಿಸಿ ನೀಡಲಾದ ದೂರಿನಂತೆ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಆ ಬಳಿಕ ಕ್ರೈಂಬ್ರಾಂಚ್ ವಿಭಾಗ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.
———————————————————————————–
ಹೊಳೆಯಲ್ಲಿ ಮುಳುಗಿ ಬಾಲಕನ ಸಾವು
ಕಾಸರಗೋಡು: ಅರಯಿ ಹೊಳೆಯ ಕಾರ್ತಿಕದಲ್ಲಿ ಸ್ನಾನ ಮಾಡಲು ಇಳಿದ ಕಾಂಞಂಗಾಡ್ ಬಾಂಗೋಡು ಹೊಸ್ ಅರಯಿಲ್ ವಟ್ಟತ್ತೋಡ್‌ನ ಅಬ್ದುಲ್ ಕುಂಞಿ ಬಿ.ಕೆ. ಅವರ ಪುತ್ರ ಮುಹಮ್ಮನ್ ಸಿನಾನ್(16) ಸಾವಿಗೀಡಾದರು. ಜೊತೆಯಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Madikeri: ದೇಗುಲದಲ್ಲಿ ಸಮಾನತೆಯೇ ಉದ್ದೇಶ ; ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ವಿವಾದ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Kodagu: ಯೋಧ ದಿವಿನ್ ಪಂಚಭೂತಗಳಲ್ಲಿ ಲೀನ
Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.