ಬಿತ್ತನೆ ಬೀಜ ದರ ಏರಿಕೆ ಸರ್ಕಾರದ ಘನ ಕಾರ್ಯ: ಎಚ್ಡಿಕೆ ಟೀಕೆ
ಒಂದು ಕೈಯ್ಯಲ್ಲಿ ಗ್ಯಾರಂಟಿ, ಇನ್ನೊಂದು ಕೈಯ್ಯಲ್ಲಿ ಸುಲಿಗೆ
Team Udayavani, May 28, 2024, 9:54 PM IST
ಬೆಂಗಳೂರು: ಬಿತ್ತನೆ ಬೀಜದ ದರ ಶೇ.60ರಷ್ಟು ಹೆಚ್ಚಳವಾಗಿದ್ದು, ಇದು ಪಂಚ ಗ್ಯಾರಂಟಿ ಕೊಟ್ಟು ಜನರನ್ನು ಉದ್ಧಾರ ಮಾಡಿದೆ ಎಂದು ಬೀಗುವ ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡಿರುವ ಘನಕಾರ್ಯ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ತಮ್ಮ “ಎಕ್ಸ್’ ಖಾತೆಯಲ್ಲಿ ಈ ಬಗ್ಗೆ ಬರೆದಿರುವ ಕುಮಾರಸ್ವಾಮಿ, ಒಂದು ಕೈಯ್ಯಲ್ಲಿ ಗ್ಯಾರಂಟಿ, ಇನ್ನೊಂದು ಕೈಯ್ಯಲ್ಲಿ ಸುಲಿಗೆ ಮಾಡುತ್ತಿರುವ ಸರ್ಕಾರವಿದು. ಕೊಟ್ಟ ಹಾಗೆ ಕೊಟ್ಟು ಜನರಿಗೆ ಗೊತ್ತೇ ಆಗದಂತೆ ಜೇಬಿಗೆ ಕೈ ಹಾಕಿ ಪಿಕ್ ಪಾಕೆಟ್ ಮಾಡುತ್ತಿರುವ ಕಿಡಿಗೇಡಿ ಕೆಲಸ ಇದು ಹರಿಹಾಯ್ದಿದ್ದಾರೆ.
ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಲಭ್ಯವಿದ್ದ ಬಿತ್ತನೆ ಬೀಜದ ಬೆಲೆ ಏರಿಕೆ ಪರಿಣಾಮ, ಮುಕ್ತ ಮಾರುಕಟ್ಟೆಯಲ್ಲಿಯೂ ದರ ದುಪ್ಪಟ್ಟಾಗಿದೆ. ತಕ್ಷಣವೇ ಸರ್ಕಾರ ಬಿತ್ತನೆ ಬೀಜದ ದರ ಇಳಿಕೆಗೆ ಕ್ರಮ ಕೈಗೊಳ್ಳಬೇಕು ಮತ್ತು ಮುಕ್ತ ಮಾರುಕಟ್ಟೆಯಲ್ಲಿ ದರ ಏರಿಕೆಗೆ ನಿಯಂತ್ರಣ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ. ಹಾಗೆಯೇ ಕೃಷಿ ಸಚಿವರೇ, ಎಲ್ಲಿದ್ದೀರಪ್ಪ? ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.