HD Revanna ಜಾಮೀನು ರದ್ದುಪಡಿಸುವಂತೆ ಹೈಕೋರ್ಟ್ ಮೊರೆ
ವಿಶೇಷ ತನಿಖಾ ದಳದಿಂದ ಹೈಕೋರ್ಟ್‌ಗೆ ಅರ್ಜಿ ;ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ
Team Udayavani, May 29, 2024, 6:45 AM IST
ಬೆಂಗಳೂರು: ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಾರೆ ಎನ್ನಲಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ್ದ ಆರೋಪದಲ್ಲಿ ಶಾಸಕ ಎಚ್.ಡಿ. ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನನ್ನು ರದ್ದುಪಡಿಸಬೇಕು ಎಂದು ವಿಶೇಷ ತನಿಖಾ ದಳ (ಎಸ್‌ಐಟಿ) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ಅಪಹರಣ ಪ್ರಕರಣವು ಗಂಭೀರ ಸ್ವರೂಪದಿಂದ ಕೂಡಿದೆ. ಪ್ರಕರಣದಲ್ಲಿ ರೇವಣ್ಣ ಅವರ ಪಾತ್ರವೂ ಇದೆ. ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ. ಆರೋಪಿಗಳ ಹಾಗೂ ಸಾಕ್ಷಿಗಳ ಹೆಚ್ಚಿನ ವಿಚಾರಣೆ ನಡೆಸಬೇಕಿದೆ. ಆರೋಪಿಗೆ ಜಾಮೀನು ಲಭ್ಯವಾಗಿರುವುದರಿಂದ ತನಿಖೆ ಮೇಲೆ ಪ್ರಭಾವ ಬೀರಬಹುದು. ಹಾಗಾಗಿ ರೇವಣ್ಣ ಅವರಿಗೆ ನೀಡಲಾಗಿರುವ ಜಾಮೀನು ರದ್ದುಪಡಿಸಬೇಕು ಎಂದು ಎಸ್‌ಐಟಿ ಪೊಲೀಸರು ಕೋರಿದ್ದಾರೆ. ಈ ಅರ್ಜಿಯಲ್ಲಿ ಆರೋಪಿ ಎಚ್.ಡಿ. ರೇವಣ್ಣ ಅವರನ್ನು ಪ್ರತಿವಾದಿ ಮಾಡಲಾಗಿದೆ.
ಎರಡು ಪ್ರಕರಣಗಳಲ್ಲಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2024ರ ಮೇ 13ರಂದು ಜಾಮೀನು ಮಂಜೂರು ಮಾಡಿತ್ತು. ಇದೀಗ ಎರಡೂ ಪ್ರಕರಣಗಳಲ್ಲಿ ವಿಶೇಷ ನ್ಯಾಯಾಲಯ ಮಂಜೂರು ಮಾಡಿದ್ದ ಜಾಮೀನನ್ನು ರದ್ದು ಮಾಡುವಂತೆ ಸರಕಾರ ಹೈಕೋರ್ಟ್ ಮೆಟ್ಟಿಲೇರಿದೆ.
ನನ್ನ ಮೇಲಿನ ಎಫ್ಐಆರ್ ಕಟ್ಟುಕತೆ: ರದ್ದುಪಡಿಸಿ
ಬೆಂಗಳೂರು: ಲೈಂಗಿಕ ಕಿರುಕುಳ, ಅತ್ಯಾಚಾರ ಮತ್ತು ಮನೆಕೆಲಸದಾಕೆಯನ್ನು ಅಪಹರಿಸಿದ ಆರೋಪ ಸಂಬಂಧ ಮೈಸೂರು ಜಿಲ್ಲೆಯ ಕೆ.ಆರ್. ನಗರ ಮತ್ತು ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಗಳಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎರಡು ಪ್ರತ್ಯೇಕ ಎಫ್ಐಆರ್‌ಗಳನ್ನು ರದ್ದುಪಡಿಸುವಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಈ ಸಂಬಂಧ ಎರಡು ಪ್ರತ್ಯೇಕ ಕ್ರಿಮಿನಲ್ ಅರ್ಜಿಗಳನ್ನು ಸಲ್ಲಿಸಿರುವ ಅವರು ಮಹಿಳೆಯ ಅಪಹರಣ ಪ್ರಕರಣದಲ್ಲಿ ವಿಶೇಷ ತನಿಖಾ ದಳ, ಕೆ.ಆರ್. ನಗರ ಠಾಣೆಯ ಪೊಲೀಸರು ಮತ್ತು ದೂರುದಾರ ಎಚ್.ಡಿ. ರಾಜು ಅವರನ್ನು ಪ್ರತಿವಾದಿ ಮಾಡಿದ್ದಾರೆ. ಹಾಗೆಯೇ, ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿರುವ ಹೊಳೆನರಸಿಪುರ ಠಾಣೆಯ ಪೊಲೀಸರು, ಸಿಟ್ ಮತ್ತು ದೂರುದಾರ ಮಹಿಳೆಯನ್ನು ಪ್ರತಿವಾದಿ ಮಾಡಿದ್ದಾರೆ.
ತಾವು ಯಾವುದೇ ಅಪರಾಧ ಎಸಗಿಲ್ಲ. ರಾಜಕೀಯ ಪ್ರೇರಿತ ಮತ್ತು ದುರುದ್ದೇಶದಿಂದ ತಮ್ಮ ವಿರುದ್ಧ ದೂರು ದಾಖಲಿಸಲಾಗಿದೆ. ಪ್ರಕರಣದಲ್ಲಿ ಯಾವುದೇ ಹುರಳಿಲ್ಲ. ದೂರಿನ ಅಂಶಗಳು ಕಟ್ಟುಕತೆಯಂತಿದೆ. ಆದ್ದರಿಂದ ಎಫ್ಐಆರ್ ರದ್ದುಪಡಿಸಬೇಕು. ಅರ್ಜಿ ಇತ್ಯರ್ಥವಾಗುವರೆಗೂ ಎಫ್ಐಆರ್, ಪ್ರಕರಣದ ತನಿಖೆ ಹಾಗೂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆಗೆ ತಡೆಯಾಜ್ಞೆ ನೀಡಬೇಕು ಎಂದು ರೇವಣ್ಣ ಮಧ್ಯಾಂತರ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.