Pangala ಶರತ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ಯೋಗೀಶ್ ಪೊಲೀಸ್ ಕಸ್ಟಡಿಗೆ
Team Udayavani, May 29, 2024, 6:55 AM IST
ಕಾಪು:ಕಳೆದ ವರ್ಷ ಫೆ. 5ರಂದು ಪಾಂಗಾಳದಲ್ಲಿ ಡ್ರ್ಯಾಗನ್ ಇರಿತಕ್ಕೊಳಗಾಗಿ ಹತ್ಯೆಗೀಡಾಗಿದ್ದ ಪಾಂಗಾಳ ಮಂಡೇಡಿಯ ಶರತ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಯೋಗೀಶ್ ಆಚಾರ್ಯನನ್ನು ಮೇ 30ರ ವರೆಗೆ ಕಾಪು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.
ಒಂದು ವರ್ಷ ಮೂರು ತಿಂಗಳಿನಿಂದ ತಲೆ ಮರೆಸಿಕೊಂಡಿದ್ದ ಯೋಗೀಶ್ ಆಚಾರ್ಯ ಮೇ 23ರಂದು ಉಡುಪಿಯ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಹಾಜರಾಗಿ ಶರಣಾಗಿದ್ದನು. ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಪ್ರಕರಣದ ಪ್ರಸ್ತುತ ತನಿಖಾಧಿಕಾರಿ ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ ಆರೋಪಿಯನ್ನು ನ್ಯಾಯಾಂಗ ಬಂಧನದಿಂದ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.
ವಿವಿಧೆಡೆ ಮಹಜರು
ಯೋಗೀಶನನ್ನು ಪೊಲೀಸರು ವಿವಿಧೆಡೆ ತನಿಖೆಗಾಗಿ ಕರೆದೊಯ್ದಿದ್ದು ಆತನ ಮನೆ, ಹತ್ಯೆ ನಡೆದಿದ್ದ ಪರಿಸರ, ಪಾಂಗಾಳ ಹೊಳೆ ಸಹಿತವಾಗಿ ವಿವಿಧೆಡೆ ಸ್ಥಳ ಮಹಜರು ನಡೆಸಿದ್ದಾರೆ. ಆರೋಪಿಯು ಹತ್ಯೆಗೆ ಸಂಬಂಧಪಟ್ಟು ಮಹತ್ವದ ಮಾಹಿತಿಗಳನ್ನು ನೀಡಿದ್ದಾನೆ ಎಂದು ತಿಳಿದು ಬಂದಿದೆ.
ಪೊಲೀಸರ ಮುಂದೆ ನಿಲ್ಲಿಸುವೆ ಎಂದಿದ್ದ ದೈವ!
ಶರತ್ ಶೆಟ್ಟಿ ಕೊಲೆ ಬಳಿಕ ತಲೆ ಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿರುವಂತೆಯೇ ಮನೆಯವರು ಕುಟುಂಬದ ದೈವದ ಮೊರೆ ಹೋಗಿದ್ದರು. ಆರೋಪಿ ಎಲ್ಲೇ ಇದ್ದರೂ ಪೊಲೀಸರ ಮುಂದೆತಂದು ನಿಲ್ಲಿಸುತ್ತೇನೆ ಎಂದು ದೈವ ಮನೆಯವರಿಗೆ ಅಭಯ ನೀಡಿತ್ತು. ಅದರಂತೆ ಆತ ಮೇ 23ರಂದು ತಾನಾಗಿಯೇ ನ್ಯಾಯಾಲಯದ ಮುಂದೆ ಹಾಜರಾಗಿರುವುದು ವಿಶೇಷವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ
Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.