CM, ಸಚಿವ ನಾಗೇಂದ್ರ ತಲೆದಂಡಕ್ಕೆ ವಿಪಕ್ಷ ಪಟ್ಟು !
ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ
Team Udayavani, May 29, 2024, 6:53 AM IST
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 87 ಕೋಟಿ ರೂ.ಗಳ ಹಗರಣ ಹಾಗೂ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣವೀಗ ಸಚಿವ ಬಿ. ನಾಗೇಂದ್ರ ಕೊರಳಿಗೆ ಉರುಳಾಗಿ ಪರಿಣಮಿಸಿದ್ದು, ಸಿಎಂ ಹಾಗೂ ಸಚಿವರ ತಲೆದಂಡಕ್ಕೆ ವಿಪಕ್ಷಗಳು ಪಟ್ಟು ಹಿಡಿದಿವೆ.
ಜತೆಗೆ ಯಾವುದೇ ಅಧಿಕಾರಿಗಳು ಆತ್ಮಹತ್ಯೆಯಂತಹ ದಾರಿ ಹಿಡಿಯಬಾರದು. ಅಧಿಕಾರಿಗಳ ಜತೆಗೆ ಜವಾಬ್ದಾರಿಯುತ ವಿಪಕ್ಷವಾಗಿ ನಾವು ನಿಲ್ಲುತ್ತೇವೆ ಎಂದು ಧೈರ್ಯ ಹೇಳಿವೆ. ಪ್ರಕರಣದಲ್ಲಿ ಅನ್ಯಾಯವಾಗಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್‌ನಲ್ಲಿ ಸಚಿವರಾದ ನಾಗೇಂದ್ರ ಹಾಗೂ ಡಾ| ಎಚ್. ಸಿ. ಮಹದೇವಪ್ಪ ಹೆಸರು ಪ್ರಸ್ತಾವಿಸಿದ್ದಾರೆ. ಹೀಗಾಗಿ ಇಡೀ ಸರಕಾರ ಈ ಪ್ರಕರಣದ ಹೊಣೆ ಹೊರಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ರಾಜೀನಾಮೆ ಸಲ್ಲಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ರಾಜ್ಯಾದ್ಯಂತ ಹೋರಾಟ; ಬಿಜೆಪಿ ಎಚ್ಚರಿಕೆ
ಸಚಿವ ನಾಗೇಂದ್ರ ಅವರ ಮೌಖಿಕ ಆದೇಶದ ಮೇರೆಗೆ ಕೋಟ್ಯಂತರ ರೂ. ವರ್ಗಾವಣೆ ಆಗಿದ್ದು, ತತ್‌ಕ್ಷಣವೇ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು. ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ಮೂಲಕ ಪ್ರಕ ರಣದ ತನಿಖೆ ನಡೆಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಬಿಜೆಪಿ ಎಚ್ಚರಿಕೆ ನೀಡಿದೆ.
ಜೆಡಿಎಸ್ ಕೂಡ ಸಚಿವರ ವಜಾಕ್ಕೆ ಒತ್ತಾಯಿಸಿದ್ದು, ಅಧಿಕಾರಿಗಳ ಆತ್ಮಹತ್ಯೆಯಂತಹ ಘಟನೆಗಳು ರಾಜ್ಯ ಸರಕಾರದ ಕಾರ್ಯವೈಖರಿ ಬಗ್ಗೆ ಭಯ ಹುಟ್ಟಿಸುತ್ತಿದೆ. ರಾಜ್ಯದಲ್ಲಿ ಇಂತಹ ಘಟನೆ ನಡೆದರೂ ಏನೂ ನಡೆದೇ ಇಲ್ಲ ಎನ್ನುವಂತೆ ಸರಕಾರ ವರ್ತಿಸುತ್ತಿದೆ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.
ಸಚಿವರ ಮೌಖಿಕ ಆದೇಶದಂತೆ ಕೋಟ್ಯಂತರ ರೂ. ವರ್ಗಾವಣೆ ಆಗಿದೆ. ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಬೇಕು. ಹೈಕೋರ್ಟ್ ನ್ಯಾಯಮೂರ್ತಿಗಳ ಮೂಲಕ ತನಿಖೆ ನಡೆಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡ ಬೇಕಾಗುತ್ತದೆ.
– ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ
ವಾಲ್ಮೀಕಿ ನಿಗಮದಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದಿದೆ. ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಡೆತ್ ನೋಟ್‌ನಲ್ಲಿ ಸಚಿವರು, ನಿಗಮದ ಅಧಿಕಾರಿ ಗಳ ಹೆಸರಿದೆ. ಇದಕ್ಕಿಂತ ಸಾಕ್ಷಿ ಬೇಕೇ ಸಿಎಂ ಅವರೇ? ನಿಮಗೆ ಮಾನ ಮರ್ಯಾದೆ ಇದ್ದರೆ, ಸಿಎಂ ಸ್ಥಾನಕ್ಕೆ ಬೆಲೆ ಇದ್ದರೆ ಇಂದೇ ರಾಜೀನಾಮೆ ಕೊಡಿ.
– ಆರ್. ಅಶೋಕ್,
ವಿಧಾನಸಭೆ ವಿಪಕ್ಷ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.