Ragini dwivedi; ಡಬ್ಬಿಂಗ್ ಮುಗಿಸಿದ ಬಿಂಗೋ
Team Udayavani, May 29, 2024, 4:37 PM IST
ಶಂಭೋ ಶಿವ ಶಂಕರ ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ನಿರ್ದೇಶನದಲ್ಲಿ, ಆರ್.ಕೆ ಚಂದನ್ ಹಾಗೂ ರಾಗಿಣಿ ದ್ವಿವೇದಿ ನಾಯಕ – ನಾಯಕಿಯಾಗಿ ನಟಿಸಿರುವ ಬಿಂಗೊ ಚಿತ್ರದ ಡಬ್ಬಿಂಗ್ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೋದಲ್ಲಿ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಜಾನರ್‌ನ ಈ ಚಿತ್ರಕ್ಕೆ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆದಿದೆ.
ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
ರಾಗಿಣಿ ದ್ವಿವೇದಿ, ಆರ್.ಕೆ. ಚಂದನ್, ರಾಜೇಶ್ ನಟರಂಗ, ಪವನ್, ಮುರಳಿ ಪೂರ್ವಿಕ್, ಅಪೂರ್ವ, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಹಿತನ್ ಹಾಸನ್ ಸಂಗೀತ ನೀಡಿರುವ ಮೂರು ಹಾಡುಗಳು ಈ ಚಿತ್ರದಲ್ಲಿದೆ. ಸದ್ಯದಲ್ಲೇ ಹಾಡುಗಳು ಹಾಗೂ ಟೀಸರ್ ಬಿಡುಗಡೆಯಾಗಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.
ನಟರಾಜ್ ಮುದ್ದಾಲ್ ಅವರ ಛಾಯಾಗ್ರಹಣವಿರುವ ಈ ಚಿತ್ರದಲ್ಲಿ ಸಾಹಸ ಸನ್ನಿವೇಶಗಳಿದ್ದು, ನರಸಿಂಹ ಸಾಹಸ ನಿರ್ದೇಶನ ಮಾಡಿದ್ದಾರೆ. ಕಂಬಿ ರಾಜು ಅವರ ನೃತ್ಯ ನಿರ್ದೇಶನ ಹಾಗೂ ವೆಂಕಿಸಂಕಲನ ಬಿಂಗೊ ಚಿತ್ರಕ್ಕಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.