ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪರ್ಯಾಯವಾಗಿ ಕನ್ನಡ ಫಿಲಂ ಚೇಂಬರ್ ರಚನೆ
Team Udayavani, May 31, 2024, 12:06 PM IST
ದಾವಣಗೆರೆ: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪರ್ಯಾಯವಾಗಿ ಕನ್ನಡ ಫಿಲಂ ಚೇಂಬರ್ ರಚಿಸಲಾಗಿದೆ ಎಂದು ಚೇಂಬರ್ ನೂತನ ಅಧ್ಯಕ್ಷ ಎಂ.ಎಸ್. ರವೀಂದ್ರ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಈಗಾಗಲೇ ಕಳೆದ 80 ವರ್ಷದಿಂದ ಅಸ್ತಿತ್ವದಲ್ಲಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕೇವಲ ನಿರ್ಮಾಪಕರು, ವಿತರಕರು, ಹಂಚಿಕೆದಾರರಿಗೆ ಮಾತ್ರವೇ ಸದಸ್ಯತ್ವ ನೀಡಲಾಗುತ್ತದೆ. ಅದು ವರ್ಷಕ್ಕೆ ಒಂದು ಲಕ್ಷ ಸದಸ್ಯತ್ವ ಶುಲ್ಕ ನೀಡಬೇಕು ಮತ್ತು ನವೀಕರಣ ಮಾಡಿಕೊಳ್ಳಬೇಕು. ಹಾಗಾಗಿ ಪರ್ಯಾಯ ಚೇಂಬರ್ ಅನ್ನು ಅಸ್ತಿತ್ವಕ್ಕೆ ತರಲಾಗಿದೆ. ಈವರೆಗೆ 384 ಜನರು ಸದಸ್ಯತ್ವ ಪಡೆದಿದ್ದಾರೆ ಅಲ್ಲದೆ 19 ಚಿತ್ರಗಳ ಹೆಸರು ನೋಂದಣಿಯಾಗಿದೆ ಎಂದು ತಿಳಿಸಿದರು.
ಒಂದು ಚಿತ್ರವಾಗಬೇಕಾದರೆ ನಟ, ನಟಿ, ಪೋಷಕ ನಟರು, ತಂತ್ರಜ್ಞರು ಎಲ್ಲರೂ ಬೇಕು. ಆದರೆ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸದಸ್ಯತ್ವವನ್ನೇ ನೀಡುವುದಿಲ್ಲ. ಮಂಡಳಿಯ ಪದಾಧಿಕಾರಿ ಆಗಲು ತಮಗೆ ಅನುಕೂಲ ಆಗುವಂತೆ ಬೈಲಾ ರಚಿಸಿಕೊಳ್ಳಲಾಗಿದೆ. ಚಿತ್ರರಂಗದ ಎಲ್ಲರಿಗೂ ಮುಕ್ತ ಅವಕಾಶ ದೊರೆಯಬೇಕು ಎಂಬ ಸದುದ್ದೇಶದಿಂದ ಪ್ರತ್ಯೇಕ ಮಂಡಳಿ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.