Kaadaadi Movie: ಹೆಸರು ಬದಲಿಸಿಕೊಂಡ ಶಶಿಕುಮಾರ್ ಪುತ್ರ ಅಕ್ಷಿತ್
Team Udayavani, May 31, 2024, 12:56 PM IST
ನಾಯಕ-ನಾಯಕಿಯರು ತಮ್ಮ ಮೂಲ ಹೆಸರು ಬದಲಿಸಿಕೊಂಡು ಆಗಾಗ ಅದೃಷ್ಟ ಪರೀಕ್ಷೆಗಿಳಿಯುತ್ತಾರೆ. ಈಗ ನಟ ಶಶಿಕುಮಾರ್ ಪುತ್ರ ಕೂಡಾ ತಮ್ಮ ಹೆಸರು ಬದಲಿಸಿಕೊಂಡಿದ್ದಾರೆ. ಅಕ್ಷಿತ್ ಎಂಬ ಹೆಸರನ್ನು ಆದಿತ್ಯ ಎಂದು ಬದಲಿಸಿಕೊಂಡಿದ್ದಾರೆ. ಈ ಹೆಸರಿನೊಂದಿಗೆ ಈಗ ತೆರೆಮೇಲೆ ಬರಲು ಸಜ್ಜಾಗಿದ್ದಾರೆ. ಅದು “ಕಾದಾಡಿ’ ಮೂಲಕ. ಇದು ಅದಿತ್ಯ ನಟನೆಯ ಹೊಸ ಸಿನಿಮಾ.
ಕನ್ನಡ, ತೆಲುಗು,ಹಿಂದಿ ಮತ್ತು ತಮಿಳು ಭಾಷೆಯಲ್ಲಿ ತಯಾರಾಗಿರುವ ಈ ಸಿನಿಮಾವನ್ನು ಸತೀಶ್ ಮಾಲೆಂಪಾಟಿ ನಿರ್ದೇಶಿಸಿ, ಅರುಣಂ ಫಿಲಂಸ್ ಮುಖಾಂತರ ನಿರ್ಮಾಣ ಮಾಡಿದ್ದಾರೆ.
ನಾಯಕನ ಪರಿಚಯದ ಎರಡನೇ ಲಿರಿಕಲ್ ವಿಡಿಯೋ ಹಾಡನ್ನು ಬಿಡುಗಡೆ ಮಾಡಿದೆ ತಂಡ. ಎನ್.ಮಾರುತಿ ಸಾಹಿತ್ಯದ “ಕಲೆಯು ಇರಬೇಕು, ಮನೆಯು ಇರಬೇಕು, ಗುಡಿಯು ಇರಬೇಕು, ಕುಲವೂ ಇರಬೇಕು. ಸಹನೆಯು ಇರಬೇಕು, ಸಾಧನೆಯು ಇರಬೇಕು, ಗೆಲುವು ಇರಬೇಕು, ಸೋತರೂ ಗೆಲ್ಲುವ ಛಲವು ಇರಬೇಕು’ ಹಾಡಿಗೆ ಶಶಾಂಕ್ ಶೇಷಗಿರಿ ಧ್ವನಿಯಾಗಿದ್ದಾರೆ.
ಜೀವನದ ಅಂತ್ಯದಲ್ಲಿ ಪ್ರತಿಯೊಬ್ಬರು ತ್ಯಾಗಮಯಿರಾಗುತ್ತಾರೆ. ನಾವೆಲ್ಲರೂ ಕಾದಾ ಡುತ್ತಾ ಒಂದು ದಿನ ಸಾಯುತ್ತೇವೆ. ಆದರೆ ನಮ್ಮ ಜೀವನವನ್ನು ತ್ಯಾಗ ಮಾಡುವ ಮೂಲಕ ಸಮಾಜಕ್ಕೆ ಏನನ್ನಾದರೂ ಕೊಡಬೇಕು. ಮಕ್ಕಳು ನೋಡಿ ಕಲಿಯುವಂತಾ ಗಬೇಕು. ನಾವು ದಿನದಿಂದ ದಿನಕ್ಕೆ ಹೋರಾಟ ನಡೆಸುತ್ತಿದ್ದೇವೆ. ಇಂತಹ ಅಂಶಗಳನ್ನು ಥ್ರಿಲ್ಲರ್ ಮೂಲಕ ತೋರಿಸುವ ಪ್ರಯತ್ನ ಮಾಡಲಾಗಿದೆಯಂತೆ.
ಲಾವಣ್ಯ ಸಾಹುಕಾರ, ಚಾಂದಿನಿ ತಮಿಳರಸನ್ ನಾಯಕಿ ಯರು. ಉಳಿದಂತೆ ಪೋಸಾನಿ, ರವಿಕಾಳೆ, ಮಾರಿಮುತ್ತು, ಶ್ರವಣ್ ರಾಘವೇಂದ್ರ ಮುಂತಾದವರು ನಟಿಸಿದ್ದಾರೆ. ಆರು ಹಾಡುಗಳಿಗೆ ಭೀಮ್ಸ್ ಸಿಸಿರಿಲಿಯೋ ಸಂಗೀತ ಸಂಯೋಜಿಸಿದ್ದಾರೆ. ಡಿ.ಯೋಗಿ ಪ್ರಸಾದ್ ಛಾಯಾಗ್ರಹಣವಿದೆ. ಗೋವಾ, ಚಿಕ್ಕಮಗಳೂರು, ಹೈದರಬಾದ್, ಚೆನ್ನೈ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.