Badiyadka ನಾಪತ್ತೆಯಾಗಿದ್ದ ಮಹಿಳೆ ಶವ ಹೊಳೆಯಲ್ಲಿ ಪತ್ತೆ
Team Udayavani, May 31, 2024, 10:32 PM IST
ಬದಿಯಡ್ಕ: ಔಷಧ ಖರೀದಿಸಲೆಂದು ಮನೆಯಿಂದ ಹೋಗಿ ನಾಪತ್ತೆಯಾಗಿದ್ದ ನಾರಂಪಾಡಿ ನಿವಾಸಿ ದಿ| ನಾರಾಯಣ ಅವರ ಪತ್ನಿ ಲೀಲಾವತಿ (60) ಅವರ ಮೃತದೇಹ ಕುಂಬಳೆ ಹೊಳೆಯಲ್ಲಿ ಪತ್ತೆಯಾಗಿದೆ.
ಪುತ್ರ ಪ್ರಮೋದ್ ಅವರ ಜತೆ ವಾಸಿಸುತ್ತಿದ್ದ ಲೀಲಾವತಿ ಅವರು ಸೋಮವಾರ ಬೆಳಗ್ಗೆ ಔಷಧ ತರಲೆಂದು ಮನೆಯಿಂದ ಹೊರಟಿದ್ದರು. ಆದರೆ ಸಂಜೆಯಾದರೂ ಮನೆಗೆ ವಾಪಸಾಗಲಿಲ್ಲ. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿತ್ತು.
ಪೊಲೀಸರು ತನಿಖೆ ನಡೆಸುತ್ತಿದ್ದಂತೆ ಲೀಲಾವತಿ ಅವರ ಆಟೋ ರಿಕ್ಷಾವೊಂದರಲ್ಲಿ ಕುಂಬಳೆ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸಮೀಪಕ್ಕೆ ತೆರಳಿದ್ದು ತಿಳಿದು ಬಂದಿತ್ತು. ಈ ಹಿನ್ನೆಲೆಯಲ್ಲಿ ಶೋಧ ನಡೆಸುತ್ತಿದ್ದಂತೆ ಮೃತದೇಹ ಹೊಳೆಯಲ್ಲಿ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು
Kasaragodu: ನಾಪತ್ತೆಯಾಗಿದ್ದ ಯುವಜೋಡಿ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.