ವಾಲ್ಮೀಕಿ ಅಕ್ರಮ: ಎಸ್ಐಟಿ ತನಿಖೆ; ರಾಜ್ಯ ಸರಕಾರದಿಂದ ತನಿಖೆಗೆ ವಿಶೇಷ ತಂಡ
ಅಕ್ರಮ ಹಣ ವರ್ಗಾವಣೆ: ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಅನಂತರ ರಾಜ್ಯಾದ್ಯಂತ ಭಾರೀ ವಿವಾದ
Team Udayavani, Jun 1, 2024, 1:52 AM IST
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಸಮಗ್ರ ತನಿಖೆಗಾಗಿ ರಾಜ್ಯ ಸರಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿದೆ.
ಸಿಐಡಿಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮನೀಶ್ ಖರ್ಬೀಕರ್ ನೇತೃತ್ವದಲ್ಲಿ ದಕ್ಷಿಣ ಸಂಚಾರ ವಿಭಾಗದ ಡಿಸಿಪಿ ಶಿವಪ್ರಕಾಶ್ ದೇವರಾಜ್, ರಾಜ್ಯ ಗುಪ್ತಚರ ವಿಭಾಗದ ಎಸ್ಪಿ ಹರಿರಾಮ್ ಶಂಕರ್, ಸಿಐಡಿಯ ಎಸ್ಪಿ ರಾಘವೇಂದ್ರ ಕೆ. ಹೆಗಡೆ ತನಿಖೆ ನಡೆಸಲಿದ್ದಾರೆ. ಸಿಐಡಿಯ ಪೊಲೀಸ್ ಮಹಾನಿರ್ದೇಶಕ ಡಾ| ಎಂ.ಎ. ಸಲೀಂ ಮಾರ್ಗದರ್ಶನದಲ್ಲಿ ಈ ವಿಶೇಷ ತನಿಖಾ ತಂಡ ಕಾರ್ಯನಿರ್ವಹಿಸಲಿದೆ.
ಮೇ 26ರಂದು ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರು ನಿಗಮದಲ್ಲಿ ಕೋಟ್ಯಾಂತರ ರೂ. ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಶಿವಮೊಗ್ಗದ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮತ್ತೊಂದೆಡೆ ನಿಗಮದಲ್ಲಿ 94 ಕೋಟಿ ರೂ. ಅವ್ಯಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಮುಖ್ಯ ನಿಬಂಧಕ ರಾದ ಎ. ರಾಜಶೇಖರ್ ಬ್ಯಾಂಕ್ನ ಕೆಲವು ಅಧಿಕಾರಿಗಳ ವಿರುದ್ದ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.