Arrested: ಜನರನ್ನು ಅಡ್ಡಗಟ್ಟಿ ಮೊಬೈಲ್ ಕಸಿಯುತ್ತಿದ್ದ ಇಬ್ಬರ ಬಂಧನ
Team Udayavani, Jun 1, 2024, 11:17 AM IST
ಬೆಂಗಳೂರು: ಒಂಟಿಯಾಗಿ ಓಡಾಡುವ ಸಾರ್ವ ಜನಿಕರನ್ನು ಅಡ್ಡಗಟ್ಟಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ರಾಮಮೂರ್ತಿನಗರದ ಮೌಲಾಲಿ ಅಲಿಯಾಸ್ ಮೊಹಮದ್ ಅಲಿ(19) ಮತ್ತು ಮುತ್ತಮ್ಮ ಲೇಔಟ್ ನಿವಾಸಿ ಮೊಹಮದ್ ಜುನೈದ್(19) ಬಂಧಿತರು.
ಅರೋಪಿಗಳಿಂದ 1 ಮೊಬೈಲ್ ಮತ್ತು ಕೃತ್ಯಕ್ಕೆ ಬಳಸಿದ್ದ 1 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು. ಕಳೆದ ಫೆ.5ರ ರಾತ್ರಿ ಸುಮಾರು 9.30ಕ್ಕೆ ಬಾಣಸವಾಡಿಯ 100 ಅಡಿ ರಸ್ತೆಯ ಕಾಫಿ ಬ್ರೇವರಿ ಬಳಿ ಬೆನ್ನಿಗಾನಹಳ್ಳಿ ನಿವಾಸಿ ವಿದ್ಯಾರ್ಥಿ ಅಜಮ್ ಅಹಮದ್ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಆರೋಪಿಗಳು ಅಜಮ್ ಅಹಮದ್‌ನನ್ನು ಅಡ್ಡಗಟ್ಟಿ ಮೊಬೈಲ್ ಸುಲಿಗೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.