Desi Swara: ಇಪ್ಪತ್ತರ ಸಂಭ್ರಮದಲ್ಲಿ “ಮೊಗವೀರ್ಸ್‌ ಬಹ್ರೈನ್‌” ಸಂಘಟನೆ

 ನೂತನ ಅಧ್ಯಕ್ಷರಾಗಿ ಶಿಲ್ಪಾ ಶಮಿತ್‌ ಕುಂದರ್‌ ಆಯ್ಕೆ

Team Udayavani, Jun 1, 2024, 11:47 AM IST

Desi Swara: ಇಪ್ಪತ್ತರ ಸಂಭ್ರಮದಲ್ಲಿ “ಮೊಗವೀರ್ಸ್‌ ಬಹ್ರೈನ್‌” ಸಂಘಟನೆ

ಬಹ್ರೈನ್‌: ಇಲ್ಲಿನ ಅನಿವಾಸಿ ಮೊಗವೀರ ಸಮುದಾಯದ ಸಂಘಟನೆಯಾದ “ಮೊಗವೀರ್ಸ್‌ ಬಹ್ರೈನ್‌’ ಇಪ್ಪತ್ತನೇ ವರುಷಕ್ಕೆ ಕಾಲಿಟ್ಟಿದೆ. ನಾಡಿನ ಹಾಗೂ ದ್ವೀಪದ ಮೊಗವೀರ ಸಮುದಾಯದ ನೋವು-ನಲಿವುಗಳಿಗೆ ಸ್ಪಂದಿಸುತ್ತ ಇದೀಗ ಸಂಘಟನೆಯು ಎರಡು ದಶಕಗಳನ್ನು ಅರ್ಥಪೂರ್ಣವಾಗಿ ಪೊರೈಸುತ್ತಿದ್ದು, ಇತ್ತೀಚೆಗೆ ಸಂಘಟನೆಯ ಮಹಾಸಭೆಯು ಜರುಗಿ ಮೊಗವೀರ್ಸ್‌ ಬಹ್ರೈನ್‌ನ ಅಧ್ಯಕ್ಷೆಯಾಗಿ ಶಿಲ್ಪಾ ಶಮಿತ್‌ ಕುಂದರ್‌ ಅವರು ಅವಿರೋಧವಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

“ಮೊಗವೀರ್ಸ್‌ ಬಹ್ರೈನ್‌’ನ ಇತಿಹಾಸದಲ್ಲಿ ಪ್ರಥಮ ಬಾರಿಗೆ ಮಹಿಳೆಯೊಬ್ಬರು ಅಧ್ಯಕ್ಷೆಯಾಗಿ ಸಂಘದ ಚುಕ್ಕಾಣಿಯನ್ನು ಹಿಡಿದಿದ್ದಾರೆ. ಈ ಹಿಂದೆ ಮೊಗವೀರ್ಸ್‌ ಬಹ್ರೈನ್‌ನ ಉಪಾಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿರುವ ಶಿಲ್ಪಾ ಶಮಿತ್‌ ಕುಂದರ್‌ ಅವರು ತಮ್ಮ ಸಮಾಜಮುಖಿ ಕಾರ್ಯವೈಖರಿಯಿಂದ ಎಲ್ಲರಿಗೂ ದ್ವೀಪದಲ್ಲಿ ಚಿರಪರಿಚಿತರಾಗಿದ್ದಾರೆ.

ಇವರು ಮೂಲತಃ ಮುಕ್ಕ ಮಿತ್ರಪಟ್ಣ ಶೇಖರ್‌ ಕೋಟ್ಯಾನ್‌ ಹಾಗೂ ವಸಂತಿ ಶೇಖರ್‌ ಕೋಟ್ಯಾನ್‌ ಅವರ ಪುತ್ರಿಯಾಗಿದ್ದು ಬಹ್ರೈನ್‌ನ ದ್ವೀಪರಾಷ್ಟ್ರದಲ್ಲಿ ಕಳೆದ ಎರಡು ದಶಕಗಳಿಂದ ನೆಲೆಸಿದ್ದು ಇಲ್ಲಿನ ಅಂತಾರಾಷ್ಟ್ರೀಯ ಬ್ಯಾಂಕ್‌ ಒಂದರಲ್ಲಿ ಉನ್ನತ ಹುದ್ದೆಯಲ್ಲಿದ್ದಾರೆ. ಇವರ ಪತಿ ಶಮಿತ್‌ ಕುಂದರ್‌ರವರು ಕೂಡ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗ ನಿರ್ವಹಸುತ್ತಿದ್ದು ಪತ್ನಿಯ ಎಲ್ಲ ಸಮಾಜಮುಖಿ ಕಾರ್ಯಗಳಿಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಶಿಲ್ಪಾ ನಾಡಿನಲ್ಲೂ ಕೂಡ ಸಾಮಾಜಿಕ, ಧಾರ್ಮಿಕ ಕಾರ್ಯಗಳಿಗೆ ನಿರಂತರ ನೆರವು ನೀಡುತ್ತಾ ಬಂದಿದ್ದಾರೆ.

ಸಂಘವು ತನ್ನ ಇಪ್ಪತ್ತನೇಯ ವಾರ್ಷಿಕೋತ್ಸವವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲು ಇದಾಗಲೇ ಅನೇಕ ರೂಪುರೇಷೆಗಳನ್ನು ಹಾಕಿಕೊಂಡಿದೆ. ಶಿಲ್ಪಾ ಅವರ ಸಾರಥ್ಯದಲ್ಲಿ ಸಮುದಾಯಕ್ಕೆ ಇನ್ನಷ್ಟು ಸೇವೆ ಒದಗಿ ಬರಲಿ ಎನ್ನುವುದೇ ಇಲ್ಲಿನ ಕನ್ನಡಿಗರ ಹಾರೈಕೆ.

ವರದಿ- ಕಮಲಾಕ್ಷ ಅಮೀನ್‌

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.