Lok Sabha ಚುನಾವಣೆಯಲ್ಲಿ ಒಟ್ಟಾರೆಯಾಗಿ ಶೇ.64.62 ಮತ

ಕಳೆದ ಚುನಾವಣೆಗೆ ಹೋಲಿಸಿದರೆ ಈ ಬಾರಿ ಕಡಿಮೆ ಮತದಾನ

Team Udayavani, Jun 2, 2024, 6:33 AM IST

voter

ಹೊಸದಿಲ್ಲಿ: ಶನಿವಾರ 7ನೇ ಹಾಗೂ ಕೊನೆಯ ಹಂತದ ಮತದಾನದೊಂದಿಗೆ ಪ್ರಸಕ್ತ ಲೋಕಸಭೆ ಚುನಾವಣೆಯ ಅಬ್ಬರಕ್ಕೆ ತೆರೆಬಿದ್ದಿದೆ. ಒಟ್ಟು 7 ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆ ಪ್ರಕ್ರಿಯೆಯಲ್ಲಿ ಒಟ್ಟಾರೆಯಾಗಿ ಅಂದಾಜು ಶೇ.ಶೇ.64.62ರಷ್ಟು ಮತದಾನ ದಾಖಲಾಗಿದೆ. 2019ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ಮತದಾನದ ಪ್ರಮಾಣ ಶೇ.2.38ರಷ್ಟು ಕಡಿಮೆಯಾಗಿದೆ. 2019ರಲ್ಲಿ ದಾಖಲೆ ಪ್ರಮಾಣದಲ್ಲಿ ಅಂದರೆ ಶೇ.67ರಷ್ಟು ಮತದಾನ ದಾಖಲಾಗಿತ್ತು.

ಶನಿವಾರ 7 ರಾಜ್ಯಗಳು ಹಾಗೂ 1 ಕೇಂದ್ರಾಡಳಿತ ಪ್ರದೇಶದ 57 ಕ್ಷೇತ್ರಗಳಿಗೆ ಕೊನೆಯ ಹಂತದಲ್ಲಿ ಮತದಾನ ನಡೆದಿದ್ದು, ಶೇ.59.15ರಷ್ಟು ಮತದಾನ ದಾಖಲಾಗಿದೆ. ಪಶ್ಚಿಮ ಬಂಗಾಲದಲ್ಲಿ ವ್ಯಾಪಕ ಹಿಂಸಾಚಾರ ನಡೆದಿದ್ದು, ಉಳಿದೆಡೆ ಮತದಾನ ಶಾಂತಿಯುತವಾಗಿ ಪೂರ್ಣಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ಪರ್ಧಿಸುತ್ತಿರುವ ಉತ್ತರಪ್ರದೇಶದ ವಾರಾಣಸಿ ಕ್ಷೇತ್ರಕ್ಕೂ ಇದೇ ಹಂತದಲ್ಲಿ ಮತದಾನ ನಡೆದಿದೆ. ಈ ಮೂಲಕ, ಎ.19ರಂದು ಆರಂಭವಾದ ಮ್ಯಾರಥಾನ್‌ ಚುನಾವಣ ಪ್ರಕ್ರಿಯೆ ಪೂರ್ಣಗೊಂಡಂತಾಗಿದೆ. ಜೂ.4ರಂದು ಫ‌ಲಿತಾಂಶ ಪ್ರಕಟವಾಗಲಿದೆ.

ಇದೇ ವೇಳೆ, ಒಡಿಶಾ ವಿಧಾನಸಭೆಯ ಉಳಿದ 42 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಹಿಮಾಚಲ ಪ್ರದೇಶದ 6 ಅಸೆಂಬ್ಲಿ ಕ್ಷೇತ್ರಗಳಿಗೆ ಉಪಚುನಾವಣೆಯೂ ಶನಿವಾರ ನಡೆದಿದೆ.

ಮನೆಯಲ್ಲಿ ಮೃತದೇಹ ಇಟ್ಟು ಹಕ್ಕು ಚಲಾವಣೆ
ಬಿಹಾರದ ಕುಟುಂಬವೊಂದು ಮನೆಯಲ್ಲಿ ಮಹಿಳೆಯ ಮೃತದೇಹ ಹಾಗೇ ಇಟ್ಟು, ಮತದಾ ನ ಮಾಡಿ ಬಳಿಕ ಅಂತ್ಯಕ್ರಿಯೆ ನಡೆಸಿದ ಘಟನೆ ದೇವಕುಲಿ ಎಂಬಲ್ಲಿ ನಡೆದಿದೆ. ನನ್ನ ತಾಯಿ ನಿಧನರಾಗಿದ್ದಾರೆ. ಅಂತ್ಯಕ್ರಿಯೆಗೆ ಸಮಯ ವಿತ್ತು. ಆದರೆ, ಮತದಾನಕ್ಕಿಲ್ಲ. ಹಾಗಾಗಿ ಮತ ನೀಡಿ, ಬಳಿಕ ಅಂತ್ಯಕ್ರಿಯೆ ನಡೆಸಿದ್ದೇವೆ ಎಂದು ಕುಟುಂಬ ಸದಸ್ಯ ಮಿಥಿಲೇಶ್‌ ತಿಳಿಸಿದ್ದಾರೆ.

ಮರು ಮತದಾನಕ್ಕೆ ಬಿಜೆಪಿ ಅಭ್ಯರ್ಥಿ ಆಗ್ರಹ
ಮಾಜಿ ಸಿಎಂ ಹೇಮಂತ್‌ ಸೊರೇನ್‌ ಸಂಬಂಧಿ ಸೀತಾ ಸೊರೇನ್‌ ತಾವು ಸ್ಪರ್ಧಿಸಿರುವ ದುಮ್ಕಾ ಕ್ಷೇತ್ರದಲ್ಲಿ ಮರು ಮತದಾನಕ್ಕೆ ಆಗ್ರಹಿಸಿದ್ದಾರೆ. ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಸೀತಾ, ನನ್ನ ಕ್ಷೇತ್ರದ ಕಡೆ ಉದ್ದೇಶಪೂರ್ವಕವಾಗಿಯೇ ಮತದಾನ
ವಿಳಂಬ ಮಾಡಲಾಗಿದೆ ಎಂದು ಹೇಳಿದ್ದಾರೆ.

ಅವಕಾಶವಾದಿ ಕೂಟ ಜನರಿಂದ ತಿರಸ್ಕೃತ
ಅವಕಾಶವಾದಿ ಐಎನ್‌ಡಿಐಎ ಕೂಟ ಜನ ಮತ ಪಡೆಯುವಲ್ಲಿ ವಿಫ‌ಲವಾಗಿದೆ. ಪ್ರಚಾರದುದ್ದಕ್ಕೂ ಮೋದಿಯನ್ನು ವ್ಯಂಗ್ಯ ಮಾಡುವುದನ್ನೇ ಕಾರ್ಯವನ್ನಾಗಿಸಿಕೊಂಡಿರುವ ಕೂಟವನ್ನು ಜನ ತಿರಸ್ಕರಿಸಿದ್ದಾರೆ. ಎನ್‌ಡಿಎ ಸರಕಾರವನ್ನು ಮರಳಿ ತರುವುದಕ್ಕಾಗಿ ದಾಖಲೆ ಮತದಾನ ಮಾಡಿದವರಿಗೆ ಧನ್ಯವಾದಗಳು.
ನರೇಂದ್ರ ಮೋದಿ, ಪ್ರಧಾನ ಮಂತ್ರಿ

ವೋಟ್‌ ವೀಡಿಯೋ ಮಾಡಿದ ಬಿಎಸ್ಪಿ ಅಭ್ಯರ್ಥಿ ವಿರುದ್ಧ ಕೇಸ್‌
ಪಂಜಾಬ್‌ನ ಫಿರೋಜ್‌ಪುರ್‌ ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿ ತಾವು ವೋಟ್‌ ಮಾಡಿದನ್ನು ವೀಡಿಯೋ ರೆಕಾರ್ಡ್‌ ಮಾಡಿದ ಆರೋಪ ಎದುರಿಸುತ್ತಿದ್ದು, ಅವರ ವಿರುದ್ಧ ದೂರು ದಾಖಲಾಗಿದೆ. ತಾವು ವೋಟ್‌ ಮಾಡುವುದನ್ನು ವೀಡಿಯೋ ಮಾಡಿದ ಬಿಎಸ್‌ಪಿ ಅಭ್ಯರ್ಥಿ ಸುರೀಂದೇರ್‌ ಕಂಬೋಜ್‌ ಅದನ್ನು ಶೇರ್‌ ಮಾಡಿದ್ದರು. ವೀಡಿಯೋ ವೈರಲ್‌ ಆಗುತ್ತಿದ್ದಂತೆ ಜಿಲ್ಲಾಡಳಿತ ಅವರ ವಿರುದ್ಧ ದೂರು ದಾಖಲಿಸಿದೆ.

ಟಾಪ್ ನ್ಯೂಸ್

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

ಹೊಸ ಸೇರ್ಪಡೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

1-kota

MP ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.