ಮೇಲ್ಮನೆ: ಶಿಕ್ಷಕ, ಪದವೀಧರ ಕ್ಷೇತ್ರಕ್ಕಿಂದು ಮತದಾನ… 78 ಅಭ್ಯರ್ಥಿಗಳು ಕಣದಲ್ಲಿ
ಜೂ.6ಕ್ಕೆ ಮತ ಎಣಿಕೆ
Team Udayavani, Jun 3, 2024, 7:00 AM IST
ಬೆಂಗಳೂರು: ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರಗಳಿಂದ ವಿಧಾನಪರಿಷತ್ತಿನ 6 ಸ್ಥಾನಗಳಿಗೆ ಸೋಮವಾರ ಚುನಾವಣೆ ನಡೆಯಲಿದ್ದು, ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ.
ಈಶಾನ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಸದಸ್ಯ ಡಾ| ಚಂದ್ರಶೇಖರ್ ಬಿ. ಪಾಟೀಲ್, ಬೆಂಗಳೂರು ಪದವೀಧರ ಕ್ಷೇತ್ರದ ಬಿಜೆಪಿ ಸದಸ್ಯ ಅ.ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದ ಸದಸ್ಯ ಡಾ| ವೈ.ಎ. ನಾರಾಯಣಸ್ವಾಮಿ, ನೈಋತ್ಯ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರ ನಿವೃತ್ತಿ ಹಾಗೂ ನೈಋತ್ಯ ಪದವೀಧರ ಕ್ಷೇತ್ರದಿಂದ ಗೆದ್ದಿದ್ದ ಆಯನೂರು ಮಂಜುನಾಥ್ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಗೆದ್ದಿದ್ದ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ರಾಜೀನಾಮೆಯಿಂದ ತೆರವಾದ ಸ್ಥಾನಗಳಿಗೆ ದ್ವೆ„ವಾರ್ಷಿಕ ಚುನಾವಣೆ ನಡೆಯಲಿದೆ. ಜೂ.6ರಂದು ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟಗೊಳ್ಳಲಿದೆ.
ಆರು ಕ್ಷೇತ್ರಗಳಿಗೆ ಓರ್ವ ಮಹಿಳಾ ಅಭ್ಯರ್ಥಿ ಸಹಿತ ಒಟ್ಟು 78 ಅಭ್ಯರ್ಥಿಗಳು ಕಣದಲ್ಲಿದ್ದು, ಈ ಚುನಾವಣೆಯಲ್ಲೂ ಬಿಜೆಪಿ ಜೆಡಿಎಸ್ ಮೈತ್ರಿ ಮುಂದುವರಿದಿದೆ. ಬಿಜೆಪಿ ನಾಲ್ಕು ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ, ಜೆಡಿಎಸ್ ಎರಡು ಸ್ಥಾನಗಳಲ್ಲಿ ಕಣಕ್ಕಿಳಿಸಿದೆ. ಕಾಂಗ್ರೆಸ್ ಏಕಾಂಗಿಯಾಗಿ ಆರೂ ಕ್ಷೇತ್ರಗಳಲ್ಲಿ ಸ್ಪರ್ಧೆಗಿಳಿದಿದೆ.
ರಾಜೀನಾಮೆ ನೀಡಿದ್ದ ಆಯನೂರು ಮಂಜುನಾಥ್ ಮತ್ತು ಮರಿತಿಬ್ಬೇಗೌಡ ಕಾಂಗ್ರೆಸ್ ಸೇರ್ಪಡೆಗೊಂಡಿದ್ದು, ಇಬ್ಬರಿಗೂ ಅವರು ಪ್ರತಿನಿಧಿಸಿದ್ದ ಕ್ಷೇತ್ರಗಳಿಂದಲೇ ಕಾಂಗ್ರೆಸ್ ಕಣಕ್ಕಿಳಿಸಿದೆ. ಕಾಂಗ್ರೆಸ್‌ನ ಚಂದ್ರಶೇಖರ್ ಪಾಟೀಲ್‌ಗೆ ಈಶಾನ್ಯ ಪದವೀಧರ ಕ್ಷೇತ್ರದಿಂದ ಮತ್ತೂಂದು ಅವಕಾಶ ನೀಡಿದ್ದು, ಬೆಂಗಳೂರು ಪದವೀಧರ ಕ್ಷೇತ್ರದಿಂದ ರಾಮೋಜಿ ಗೌಡರಿಗೆ ಅವಕಾಶ ಕೊಟ್ಟಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಡಿ.ಟಿ. ಶ್ರೀನಿವಾಸ್, ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಡಾ| ಕೆ.ಕೆ. ಮಂಜುನಾಥ್ ಕುಮಾರ್ ಕಾಂಗ್ರೆಸ್ ಕಟ್ಟಾಳುವಾಗಿದ್ದಾರೆ.
ಬೆಂಗಳೂರು ಪದವೀಧರ ಕ್ಷೇತ್ರದ ಬಿಜೆಪಿ ಹುರಿಯಾಳಾಗಿ ಅ.ದೇವೇಗೌಡ ಮರುಆಯ್ಕೆ ಬಯಸಿದ್ದು, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಡಾ| ವೈ.ಎ. ನಾರಾಯಣ ಸ್ವಾಮಿ ಕೂಡ ಮರುಆಯ್ಕೆಯ ವಿಶ್ವಾಸದಲ್ಲಿದ್ದಾರೆ. ಉಳಿದಂತೆ ಈಶಾನ್ಯ ಪದವೀಧರ ಕ್ಷೇತ್ರದಿಂದ ಅಮರನಾಥ್ ಪಾಟೀಲ್, ನೈಋತ್ಯ ಪದವೀಧರ ಕ್ಷೇತ್ರದಿಂದ ಡಾ|ಧನಂಜಯ್ ಸರ್ಜಿ ಬಿಜೆಪಿಯಿಂದ ಕಣದಲ್ಲಿದ್ದಾರೆ. ಇದೇ ಕ್ಷೇತ್ರದ ಟಿಕೆಟ್ ಬಯಸಿದ್ದ ಮಾಜಿ ಶಾಸಕ ಕೆ.ರಘುಪತಿ ಭಟ್ ಬಂಡಾಯ ಅಭ್ಯರ್ಥಿಯಾಗಿದ್ದಾರೆ.
ಜೆಡಿಎಸ್ ನೈಋತ್ಯ ಶಿಕ್ಷಕರ ಕ್ಷೇತ್ರದ ಹಾಲಿ ಸದಸ್ಯ ಭೋಜೇಗೌಡ ಅವರಿಗೆ ಮತ್ತೆ ಟಿಕೆಟ್ ಕೊಟ್ಟಿದ್ದು, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಗೆದ್ದು ಕಾಂಗ್ರೆಸ್ ಸೇರಿ ಸ್ಪರ್ಧಿಸುತ್ತಿರುವ ಮರಿತಿಬ್ಬೇಗೌಡ ವಿರುದ್ಧ ಕೆ.ವಿವೇಕಾನಂದ ಅವರನ್ನು ಕಣಕ್ಕಿಳಿಸಿದೆ. ವಾಟಾಳ್ ನಾಗರಾಜ್ ಕೂಡ ಕಣದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.