ಮಹಾಲಿಂಗಪುರ- ಜಿಲ್ಲೆಯನ್ನೇ ತಲ್ಲಣಗೊಳಿಸಿದ ಭ್ರೂಣಹತ್ಯೆ ಪ್ರಕರಣ

Team Udayavani, Jun 3, 2024, 2:25 PM IST

ಮಹಾಲಿಂಗಪುರ- ಜಿಲ್ಲೆಯನ್ನೇ ತಲ್ಲಣಗೊಳಿಸಿದ ಭ್ರೂಣಹತ್ಯೆ ಪ್ರಕರಣ

ಉದಯವಾಣಿ ಸಮಾಚಾರ
ಮಹಾಲಿಂಗಪುರ: ಪಟ್ಟಣದ ಜಯಲಕ್ಷ್ಮೀನಗರದ ಕವಿತಾ ಬಾಡನವರ ಮನೆಯಲ್ಲಿ ನಡೆದ ಭ್ರೂಣಹತ್ಯೆ (ಗರ್ಭಪಾತ)ಪ್ರಕರಣ ಜಿಲ್ಲೆಯನ್ನೇ ತಲ್ಲಣಗೊಳಿಸಿದೆ. ಪ್ರಮುಖ ಆರೋಪಿ ಕವಿತಾ ಬಾಡನವರ ಅವರ ಮೊಬೈಲ್‌ ಪರಿಶೀಲನೆ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆಂದು ತಿಳಿದು ಬಂದಿದ್ದು, ಯಾವ ಪ್ರಭಾವಿಗಳ ನೆರಳಿನಲ್ಲಿ ಈ ದಂಧೆ ನಡೆಸುತ್ತಿದ್ದರು ಎಂಬ ಸಂಪೂರ್ಣ ಮಾಹಿತಿ ತಿಳಿದು ಬರಲಿದೆ.

ಅವರ ಮೊಬೈಲ್‌ ಕರೆಗಳು, ವಾಟ್ಸ್‌ಆ್ಯಪ್‌ ಸಂದೇಶಗಳು, ಪೋನ್‌ ಪೇ ಮತ್ತು ಗೂಗಲ್‌ ಪೇ ಹಿಸ್ಟರಿಯನ್ನು ಪರಿಶೀಲಿಸಿದರೆ ದೊಡ್ಡ ದೊಡ್ಡ ಕುಳಗಳು ಬಲೆಗೆ ಬೀಳಲಿವೆ ಎನ್ನಲಾಗುತ್ತಿದೆ.

ಆರೋಪಿ ಬ್ಯಾಂಕ್‌ ಖಾತೆಗಳ ಫ್ರೀಜ್: ಆರೋಪಿ ಕವಿತಾ ಬಾಡನವರ ಅವರ ವಿಚಾರಣೆ ವೇಳೆ ಅವರ‌ ಹೆಸರಿನಲ್ಲಿ ಐದು ಬ್ಯಾಂಕ್‌ ಖಾತೆಗಳಿರುವ ವಿಷಯ ತಿಳಿದು ಬಂದಿದೆ. ಕೆನರಾ ಬ್ಯಾಂಕ್‌, ಇಂಡಿಯನ್‌ ಓವರ್‌ ಸೀಸ್‌ ಬ್ಯಾಂಕ್‌, ಮಗನ ಖಾತೆ ಜತೆಗೆ ಜಂಟಿ ಖಾತೆ ಹೊಂದಿದ ಕೆನರಾ ಬ್ಯಾಂಕ್‌, ಬಸವೇಶ್ವರ ಸಹಕಾರಿ ಬ್ಯಾಂಕ್‌ ಸೇರಿ ಐದು ಖಾತೆಗಳನ್ನು ಫ್ರೀಜ್‌ ಮಾಡಲು ಪೊಲೀಸರು ಬ್ಯಾಂಕ್‌ ಅಧಿಕಾರಿಗಳಿಗೆ ಪತ್ರ ನೀಡಿದ್ದಾರೆಂಬ ಮಾಹಿತಿ ತಿಳಿದು ಬಂದಿದೆ.

ಹಣದ ವ್ಯವಹಾರ?: ಭ್ರೂಣಹತ್ಯೆ ಪ್ರಕರಣದ ಆರೋಪಿ ಕವಿತಾ ಹಿರಿಯ ಅಧಿಕಾರಿ ಜತೆಗೆ ಹಣದ ವ್ಯವಹಾರ ಮಾಡಿದ ಆರೋಪ ಕೇಳಿ ಬಂದಿದೆ. ಹಣ ಯಾಕೆ ವರ್ಗಾವಣೆಯಾಗಿದೆ ಎಂಬುದರ ಕುರಿತು ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆಂದು ತಿಳಿದು ಬಂದಿದೆ. ಒಂದು ವೇಳೆ ಈ ಪ್ರಕರಣದಲ್ಲಿ ಆ ಅಧಿಕಾರಿ ಸಿಕ್ಕಿ ಬಿದ್ದರೆ ಪ್ರಕರಣ ಮತ್ತೂಂದು ಸ್ವರೂಪ ಪಡೆಯಲಿದೆ ಎನ್ನಲಾಗಿದೆ.

ಮೃತ ಸೋನಾಲಿ ಭ್ರೂಣಹತ್ಯೆಗೆ 40 ಸಾವಿರ: ಪ್ರಕರಣದ ಹೆಚ್ಚಿನ ತನಿಖೆಗೆ ಬನಹಟ್ಟಿ ಸಿಪಿಐ ಸಂಜೀವ ಬಳಗಾರ ನೇತೃತ್ವದಲ್ಲಿ ನಾಲ್ಕು ಜನರ ಪೊಲೀಸ್‌ ತಂಡ ನೇಮಕಗೊಳಿಸಲಾಗಿದೆ. ರವಿವಾರ ಕವಿತಾಳನ್ನು ಪೊಲೀಸ್‌ ಕಸ್ಟಡಿಗೆ ಪಡೆದು ಆಕೆಯ ಸಮೇತ ಮನೆಯ ಸ್ಥಳವನ್ನು ಪೊಲೀಸರು ಮಹಜರು ಮಾಡಿ ಠಾಣೆಯಲ್ಲಿ ನಡೆಸಿದ ವಿಚಾರಣೆ ವೇಳೆ ವಾಟ್ಸ್‌ಆ್ಯಪ್‌ ಮೂಲಕವೇ ಗರ್ಭಪಾತ ದಂಧೆಯ ಮಾತುಕತೆ ನಡೆಸುತ್ತಿದ್ದ ಕವಿತಾ, ಸೋನಾಲಿ ಕದಂ ಪ್ರಕರಣದಲ್ಲಿ 40 ಸಾವಿರ ಹಣ ಪಡೆದಿದ್ದಾರೆಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ ಎನ್ನಲಾಗಿದೆ.

ಆರೋಪಿ ಮೊಬೈಲ್‌ ವಶಕ್ಕೆ ಪಡೆದು ವಿಚಾರಣೆಗಾಗಿ ಮೊಬೈಲ್‌ನ್ನು ಪೊರೆನ್ಸಿಕ್‌ ಲ್ಯಾಬ್‌(ಎಫ್‌ ಎಸ್‌ಎಲ್‌)ಗೆ ಕಳಿಸಲಾಗಿದೆ. ಆರೋಪಿಗಳ ವಿಚಾರಣೆಯಲ್ಲಿ ಅವರುಗಳ ಬ್ಯಾಂಕ್‌ ಖಾತೆ, ಫೋನ್‌ ಪೇ, ಗೂಗಲ್‌ ಪೇ, ಮೊಬೈಲ್‌ ಕರೆಗಳು ಸೇರಿದಂತೆ ಎಲ್ಲವನ್ನೂ ಪರಿಶೀಲನೆ ನಡೆಸಲಾಗುತ್ತಿದೆ. ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಇದ್ದರೂ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವುದು ಖಚಿತ. ಅಮರನಾಥ ರೆಡ್ಡಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಬಾಗಲಕೋಟೆ.

*ಚಂದ್ರಶೇಖರ ಮೋರೆ

ಟಾಪ್ ನ್ಯೂಸ್

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.