Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ
Team Udayavani, Jun 3, 2024, 3:15 PM IST
■ ಉದಯವಾಣಿ ಸಮಾಚಾರ
ಬೆಳಗಾವಿ:ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಯಾದ ಬಳಿಕ ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ-ಮಗುವಿಗೆ ಉಪಚಾರ ಮಾ ಡಿ ಆರೈಕೆ ಮಾಡುವ ಮೂಲಕ ದಂಪತಿ ಮಾನವೀಯತೆ ಮೆರೆದಿದ್ದಾರೆ. ದಂಡಾಪುರ ಗ್ರಾಮದ ಶಾಂತವ್ವ ಕುಮಾರ ನಿಡಸೋಸಿ ಮಹಿಳೆ ಹೆರಿಗೆಗಾಗಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದರು.
ಇದನ್ನೂ ಓದಿ:Mandya: ಬಿಜೆಪಿ ಮುಖಂಡನ ಮಗ ನೌಕಪಡೆಯ ಲೆಫ್ಟಿನೆಂಟ್ ಆಗಿ ಆಯ್ಕೆ
ಮಗುವಿಗೆ ಜನ್ಮ ನೀಡಿದ ಬಳಿಕ ಅನಾರೋಗ್ಯ ಕಾಡಿತು. ಈ ವೇಳೆ ಪಕ್ಕದ ಬೆಡ್ ಮೇಲೆ ಗೋಕಾಕ ತಾಲೂಕಿನ ಕೊಣ್ಣೂರ ಗ್ರಾಮದ ಶಮಾ ರಿಜ್ವಾನ್ ದೇಸಾಯಿ ಎಂಬ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದರು. ಆಗ ಶಾಂತವ್ವಳ ಪರಿಸ್ಥಿತಿ ಕಂಡು ಆರೈಕೆ ಮಾಡಿದ ಶಮಾ ಹಾಗೂ ರಿಜ್ವಾನ್ ದಂಪತಿ ಶಾಂತವ್ವಳ ಹೃದಯ ವೈಶಾಲ್ಯತೆ ಮೆರೆದು ಮಾನವೀಯತೆ ತೋರಿದ್ದಾರೆ.
ಶಾಂತವ್ವ ಹಿಂದೂ ಧರ್ಮಕ್ಕೆ ಸೇರಿದ್ದು, ಶಮಾ ಹಾಗೂ ರಿಜ್ವಾನ್ ದಂಪತಿ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಆದರೆ ಇವರಿಬ್ಬರ ಮಧ್ಯೆ ಯಾವುದೇ ಧರ್ಮ-ಜಾತಿ ಅಡ್ಡ ಬರಲಿಲ್ಲ
. ಶಾಂತವ್ವ ಹಾಗೂ ಮಗುವನ್ನು ಸರಿಯಾಗಿ ಉಪಚರಿಸಿ ತಮ್ಮ ಮನೆಗೆ ಕರೆದುಕೊಂಡು ಹೋಗಿ ಆರೈಕೆ ಮಾಡಿದ್ದಾರೆ. ಇವರಿಬ್ಬರೂ ಣಮುಖರಾಗುವವರೆಗೂ ಮನೆಯಲ್ಲಿಯೇ ಇಟ್ಟುಕೊಂಡು ಆರೈಕೆ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಶಮಾ ಹಾಗೂ ರಿಜ್ವಾನ್ ದಂಪತಿಯನ್ನು ಮಾರ್ಕೆಟ್ ಠಾಣೆ ಪೊಲೀಸರು ಸನ್ಮಾನಿಸಿ ಇವರ ಮಾನವೀಯ ಗುಣ ಕೊಂಡಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್ ಹೊರತೆಗೆದ ವೈದ್ಯರು!
Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್ ಕಾಳಿಂಗ’:ಅಧಿಕೃತವಾಗಿ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.