Delhi; ಹೊತ್ತಿ ಉರಿದ ತಾಜ್ ಎಕ್ಸ್ಪ್ರೆಸ್ ರೈಲಿನ ಮೂರು ಬೋಗಿಗಳು
Team Udayavani, Jun 3, 2024, 7:51 PM IST
ಹೊಸದಿಲ್ಲಿ: ದೆಹಲಿಯ ಸರಿತಾ ವಿಹಾರ್ನಲ್ಲಿ ಸೋಮವಾರ ತಾಜ್ ಎಕ್ಸ್ಪ್ರೆಸ್ನ ಮೂರು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇಲ್ಲಿಯವರೆಗೆ ಯಾವುದೇ ಪ್ರಯಾಣಿಕರಿಗೆ ಗಾಯಗಳಾದ ಬಗ್ಗೆ ವರದಿಯಾಗಿಲ್ಲ ಎಂದು ದೆಹಲಿ ಅಗ್ನಿಶಾಮಕ ಸೇವೆ ತಿಳಿಸಿದೆ.
ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು ಬೆಂಕಿ ನಂದಿಸಲು ಕಾರ್ಯಪ್ರವೃತ್ತವಾಗಿವೆ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.
ರೈಲಿಗೆ ಬೆಂಕಿ ಬಿದ್ದಿರುವ ಬಗ್ಗೆ ಸಂಜೆ 4.41ಕ್ಕೆ ಪಿಸಿಆರ್ ಕರೆ ಬಂದಿದ್ದು, ಸ್ಥಳದಲ್ಲಿ ತಾಜ್ ಎಕ್ಸ್ ಪ್ರೆಸ್ ರೈಲಿನ ಮೂರು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರೈಲು ನಿಂತಿದ್ದು, ಯಾರಿಗೂ ಗಾಯಗಳಾಗಿಲ್ಲ. ಪ್ರಯಾಣಿಕರು ಇತರ ಕೋಚ್ಗಳಿಗೆ ತೆರಳಿದ್ದಾರೆ. ಮುಂದಿನ ಕ್ರಮವನ್ನು ಇಲಾಖೆ ತೆಗೆದುಕೊಳ್ಳುತ್ತಿದೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.