ಮಹಿಳೆಯರಿಂದ ವಿಚಾರಣೆಗೆ ಪ್ರಜ್ವಲ್ ಆಕ್ಷೇಪ
Team Udayavani, Jun 3, 2024, 11:32 PM IST
ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿರುವ ಪ್ರಜ್ವಲ್ ರೇವಣ್ಣ ಅವರು ತನ್ನನ್ನು ಮಹಿಳಾ ಅಧಿಕಾರಿಗಳ ಮೂಲಕ ವಿಚಾರಣೆ ನಡೆಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಡಿಸಿದ್ದಾರೆಂದು ತಿಳಿದು ಬಂದಿದೆ.
ಮೇ 30ರಂದು ರಾತ್ರಿ ವಿಮಾನ ನಿಲ್ದಾಣದಿಂದ ಬಂಧಿಸಿ ದಲ್ಲಿಂದ ಹಿಡಿದು ಇದುವರೆಗೂ ಅವರನ್ನು ಮಹಿಳಾ ಅಧಿಕಾರಿಗಳೇ ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಪ್ರಜ್ವಲ್ ಯಾವ ಪ್ರಶ್ನೆಗಳಿಗೂ ಸರಿಯಾಗಿ ಉತ್ತರಿಸುತ್ತಿಲ್ಲ ಎನ್ನಲಾಗಿದೆ. ಈ ಮಧ್ಯೆ ನಾಲ್ಕು ದಿನಗಳಿಂದ ಮಹಿಳಾ ಅಧಿಕಾರಿಗಳೇ ವಿಚಾರಣೆ ನಡೆಸುತ್ತಿರುವುದಕ್ಕೆ ಆರೋಪಿ ಆಕ್ಷೇಪ ವ್ಯಕ್ತಪಡಿಸಿದ್ದು, ಪುರುಷ ಅಧಿಕಾರಿಗಳು ಯಾರು ಇಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ವೈರಲ್ ಆಗಿರುವ ವೀಡಿಯೋದಲ್ಲಿರುವ ಸಂತ್ರಸ್ತೆಯರನ್ನು ತೋರಿಸಿ, ಈಕೆ ಯಾರು? ಜತೆಗೆ ಈಕೆ ಹೇಗೆ ಪರಿಚಯವಾಯಿತು? ಆಕೆ ಜತೆ ಯಾವ ಸ್ಥಳದಲ್ಲಿ ಲೈಂಗಿಕ ಕ್ರಿಯೆ ನಡೆಸಲಾಗಿದೆ? ಏನು ಆಮಿಷವೊಡ್ಡಿದ್ದೆ ಮುಂತಾದ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಆದರೆ ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಲು ನಿರಾಕರಿಸಿರುವ ಆರೋಪಿ, ನೀವು ಮಹಿಳೆಯರಾಗಿ ಇಂತಹ ಪ್ರಶ್ನೆಗಳನ್ನು ಹೇಗೆ ಕೇಳುತ್ತಿರಾ ಎಂದು ಅಧಿಕಾರಿಗಳನ್ನೇ ಪ್ರಶ್ನಿಸಿದ್ದಾನೆ. ನೀವು ತೋರಿಸುತ್ತಿರುವ ಫೋಟೋಗಳಲ್ಲಿರುವ ಮಹಿಳೆಯರು ಯಾರೆಂದೇ ಗೊತ್ತಿಲ್ಲ ಎಂದು ಹೇಳಿಕೆ ನೀಡುತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.