Pakistanಗೆ ಬ್ರಹ್ಮೋಸ್ ವಿವರ: ನಿಶಾಂತ್ಗೆ ಜೀವಾವಧಿ ಶಿಕ್ಷೆ
Team Udayavani, Jun 4, 2024, 6:20 AM IST
ನಾಗಪುರ: ಪಾಕ್ ಗುಪ್ತಚರ ಸಂಸ್ಥೆ ಐಎಸ್ಐಗೆ ಸೂಕ್ಷ್ಮ ಮಾಹಿತಿ ರವಾನಿಸಿದ ಆರೋಪದಲ್ಲಿ ಬ್ರಹ್ಮೋಸ್ ಏರೋಸ್ಪೇಸ್ ಸಂಸ್ಥೆಯ ಮಾಜಿ ಎಂಜಿನಿಯರ್ ನಿಶಾಂತ್ ಅಗರ್ವಾಲ್ಗೆ ನಾಗಪುರ ಜಿಲ್ಲಾ ಕೋರ್ಟ್ ಸೋಮವಾರ 14 ವರ್ಷ ಕಠಿನ ಜೀವಾವಧಿ ಶಿಕ್ಷೆ ಮತ್ತು 3,000ರೂ. ದಂಡ ವಿಧಿಸಿದೆ.
ಅಧಿಕೃತ ರಹಸ್ಯ ಕಾಯ್ದೆಯ ವಿವಿಧ ಸೆಕ್ಷನ್ಗಳಡಿ ಶಿಕ್ಷಾರ್ಹ ಅಪರಾಧಕ್ಕಾಗಿ ನಿಶಾಂತ್ ಅವರನ್ನು ತಪ್ಪಿತಸ್ಥ ಎಂದು ಪರಿಗಣಿಸಲಾಗಿದೆ ಎಂದು ನ್ಯಾ| ಎಂ.ವಿ.ದೇಶಪಾಂಡೆ ಆದೇಶದಲ್ಲಿ ತಿಳಿಸಿದ್ದಾರೆ.
ನಾಗಪುರದ ಬ್ರಹ್ಮೋಸ್ನ ಕ್ಷಿಪಣಿ ಕೇಂದ್ರದಲ್ಲಿ ತಾಂತ್ರಿಕ ಸಂಶೋಧನೆ ವಿಭಾಗದಲ್ಲಿ ಹಿರಿಯ ಸಿಸ್ಟಂ ಎಂಜಿನಿಯರ್ ಆಗಿ ನಿಶಾಂತ್ ಕಾರ್ಯನಿರ್ವಹಿಸುತ್ತಿದ್ದರು. ಐಎಸ್ಐ ಏಜೆಂಟ್ಗಳಾದ ನೇಹಾ ಶರ್ಮಾ, ಪೂಜಾ ರಂಜನ್ ಅವರ ಜತೆ ಫೇಸ್ಬುಕ್ನಲ್ಲಿ ಸಂಪರ್ಕ ಹೊಂದಿದ್ದ ಮಾಹಿತಿ ಆಧಾರದಲ್ಲಿ ತನಿಖೆ ನಡೆಸಿದಾಗ, ಅವರು ಬ್ರಹ್ಮೋಸ್ ಕ್ಷಿಪಣಿ ವಿವರಗಳನ್ನು ಹಂಚಿಕೊಂಡಿದ್ದು ಬಹಿರಂಗವಾಗಿತ್ತು. 2018ರಲ್ಲಿ ಉತ್ತರ ಪ್ರದೇಶ, ಮಹಾರಾಷ್ಟ್ರದ ಉಗ್ರ ನಿಗ್ರಹ ದಳ, ಸೇನಾ ಗುಪ್ತಚರ ಅಧಿಕಾರಿಗಳು ನಿಶಾಂತ್ರನ್ನು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.