NOTA ಕ್ಕೆ 1.7 ಲಕ್ಷ ಮತಗಳು!; ಹಿಂದಿನ ನೋಟಾ ದಾಖಲೆ ಪತನ
Team Udayavani, Jun 4, 2024, 2:53 PM IST
ಭೋಪಾಲ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ‘ನೋಟಾ ‘ ಆಯ್ಕೆಯನ್ನು ಆರಿಸುವಂತೆ ಕಾಂಗ್ರೆಸ್‌ನ ಮತದಾರರಿಗೆ ಮನವಿ ಮಾಡಿದ ಪರಿಣಾಮ ಲೋಕಸಭಾ ಕ್ಷೇತ್ರದಲ್ಲಿ ಇದುವರೆಗೆ 1.7 ಲಕ್ಷಕ್ಕೂ ಹೆಚ್ಚು ಮತಗಳನ್ನು ಗಳಿಸಿದೆ. ಬಿಹಾರದ ಗೋಪಾಲ್‌ಗಂಜ್‌ನ ಕ್ಷೇತ್ರದಲ್ಲಿ ದಾಖಾಲಾಗಿದ್ದ ಹಿಂದಿನ ನೋಟಾ ದಾಖಲೆಯನ್ನು ಮುರಿದಿದೆ.
ಚುನಾವಣ ಆಯೋಗದ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಇತ್ತೀಚಿನ ಮಾಹಿತಿಯ ಪ್ರಕಾರ, ಇಂದೋರ್‌ನಲ್ಲಿ ನೋಟಾಕ್ಕೆ 1,72,798 ಮತಗಳನ್ನು ಪಡೆದಿದೆ, ಬಿಜೆಪಿ ಅಭ್ಯರ್ಥಿ ಶಂಕರ್ ಲಾಲ್ವಾನಿ 9,90,698 ಮತಗಳ ನಂತರ ಎರಡನೇ ಸ್ಥಾನದಲ್ಲಿದೆ. ಇಂದೋರ್‌ನಲ್ಲಿ ಎಲ್ಲಾ 13 ಅಭ್ಯರ್ಥಿಗಳು ಇಲ್ಲಿಯವರೆಗೆ ನೋಟಾಕ್ಕಿಂತ ಕಡಿಮೆ ಮತಗಳನ್ನು ಪಡೆದಿದ್ದಾರೆ. ಲಾಲ್ವಾನಿ ಅವರ ಸಮೀಪದ ಬಿಎಸ್‌ಪಿ ಪ್ರತಿಸ್ಪರ್ಧಿ ಸಂಜಯ್ ಸೋಲಂಕಿ ಅವರಿಗಿಂತ 9,48,603 ಮತಗಳಿಂದ ಮುಂದಿದ್ದಾರೆ.
2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ, ಕಾಂಗ್ರೆಸ್‌ನ ಇಂದೋರ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಏಪ್ರಿಲ್ 29 ರಂದು ತಮ್ಮ ನಾಮಪತ್ರವನ್ನು ಹಿಂತೆಗೆದುಕೊಂಡು ಬಿಜೆಪಿಗೆ ಸೇರಿದ್ದರು. ಬಿಜೆಪಿಗೆ ಪಾಠ ಕಲಿಸಲು ಇವಿಎಂಗಳಲ್ಲಿ ನೋಟಾ ಒತ್ತುವಂತೆ ಕಾಂಗ್ರೆಸ್ ನಂತರ ಇಂದೋರ್‌ನ ಮತದಾರರಿಗೆ ಮನವಿ ಮಾಡಿತ್ತು.
2019 ರ ಚುನಾವಣೆಯಲ್ಲಿ, ಬಿಹಾರದ ಗೋಪಾಲ್‌ಗಂಜ್ ಲೋಕಸಭಾ ಕ್ಷೇತ್ರವು 51,660 ಗರಿಷ್ಠ ನೋಟಾ ಮತಗಳನ್ನು ದಾಖಲಿಸಿತ್ತು. ಇದು ಕ್ಷೇತ್ರದಲ್ಲಿನ ಒಟ್ಟು ಮತದಾನದ ಶೇಕಡಾ 5 ರಷ್ಟು ಮತಗಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.