![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 5, 2024, 6:19 PM IST
ಲಕ್ನೋ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ʼಇಂಡಿಯಾ ಒಕ್ಕೂಟʼ ಬಿಜೆಪಿಯ ಎನ್ ಡಿಎಗೆ ಟಫ್ ಫೈಟ್ ಕೊಟ್ಟಿದೆ.
ಚುನಾವಣಾ ಪ್ರಣಾಳಿಕೆಯಲ್ಲಿ ಈ ಬಾರಿ ಕಾಂಗ್ರೆಸ್ ಗ್ಯಾರೆಂಟಿಗಳನ್ನು ಮುಂದಿಟ್ಟುಕೊಂಡು ಜನರ ಮತವನ್ನು ಕೇಳಿತ್ತು. ‘ಘರ್ ಘರ್ ಗ್ಯಾರಂಟಿ’ ಕಾರ್ಯಕ್ರಮವನ್ನು ಪ್ರಾರಂಭಿಸಿ, ಗ್ಯಾರೆಂಟಿ ಕಾರ್ಡ್ ಗಳನ್ನು ನೀಡುವುದಾಗಿ ಹೇಳಿತ್ತು.
ಈ ಗ್ಯಾರೆಂಟಿಗಳಲ್ಲಿ ʼಮಹಾಲಕ್ಷ್ಮೀ ಯೋಜನೆʼಯನ್ನು ಜಾರಿಗೊಳಿಸುವುದಾಗಿ ಹೇಳಿತ್ತು. ಈ ಯೋಜನೆಯ ಅಡಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ವರ್ಗಕ್ಕೆ ಸೇರಿದ ಕುಟುಂಬದ ಮಹಿಳೆಗೆಯರ (ಮುಖ್ಯಸ್ಥೆ) ಖಾತೆಗೆ ತಿಂಗಳಿಗೆ 8,500 ರೂ.ಗಳನ್ನು ನೇರವಾಗಿ ಜಮಾ ಮಾಡಲಾಗುವುದು ಎಂದು ಪಕ್ಷವು ಭರವಸೆ ನೀಡಿತ್ತು. ಆ ಮೂಲಕ 1 ಲಕ್ಷ ರೂಪಾಯಿಯನ್ನು ಒಂದು ಕುಟುಂಬದ ಮಹಿಳೆಗೆ ನೀಡುವುದಾಗಿ ಹೇಳಿತ್ತು.
ಫಲಿತಾಂಶ ಬಂದ ಬಳಿಕ ಉತ್ತರ ಪ್ರದೇಶದಲ್ಲಿ ಗ್ಯಾರೆಂಟಿ ಕಾರ್ಡ್‌ಗಾಗಿ ಕಾಂಗ್ರೆಸ್ ಕಚೇರಿ ಮುಂದೆ ಮಹಿಳೆಯರು ಸರತಿ ಸಾಲಿನಲ್ಲಿ ನಿಂತಿದ್ದಾರೆ.
ಗ್ಯಾರೆಂಟಿ ಕಾರ್ಡ್ ಗಾಗಿ ಲಕ್ನೋ ಕಾಂಗ್ರೆಸ್ ಕಚೇರಿಯ ಹೊರಗೆ ಬಿಸಿಲಿನ ಬೇಗೆಯನ್ನು ಲೆಕ್ಕಿಸದೆ ಮಹಿಳೆಯರು ಸಾಲುಗಟ್ಟಿ ನಿಂತಿದ್ದಾರೆ.
ಇವರಲ್ಲಿ ಕೆಲವು ಮಹಿಳೆಯರು ‘ಗ್ಯಾರಂಟಿ ಕಾರ್ಡ್’ಗೆ ಬೇಡಿಕೆ ಇಟ್ಟಿದ್ದಾರೆ. ಕೆಲವರು ತಾವು ಈ ಹಿಂದೆ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದೇವೆ. ಹಣ ಪಡೆಯಲು ವಿವರಗಳನ್ನು ನೀಡಿ ಆ ಬಳಿಕ ಕಾಂಗ್ರೆಸ್ ಕಚೇರಿಯಿಂದ ರಸೀದಿಗಳನ್ನು ಸ್ವೀಕರಿಸಿದ್ದೇವೆ ಎಂದು ಹೇಳಿದ್ದಾರೆ.
ಇತ್ತೀಚೆಗಷ್ಟೇ ಬೆಂಗಳೂರಿನ ಜನರಲ್ ಪೋಸ್ಟ್ ಆಫೀಸ್ ಕೇಂದ್ರದಲ್ಲಿʼಇಂಡಿಯಾ ಬ್ಲಾಕ್ʼ ಅಧಿಕಾರಕ್ಕೆ ಬಂದರೆ ತಮ್ಮ ಖಾತೆಗಳಿಗೆ ಮಾಸಿಕ 8,500 ರೂಪಾಯಿ ನೀಡುತ್ತಾರೆ ಎಂದು ಹಲವಾರು ಮಹಿಳೆಯರು ಖಾತೆಗಳನ್ನು ತೆರೆಯಲು ಸಾಲಿನಲ್ಲಿ ನಿಂತಿದ್ದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.