ಗೋವಿಂದ ಕಾರಜೋಳಗೆ ವಿಧಾನಸಭೆ ಸೋಲಿನ ಕಹಿ ಮರೆಸಿದ ಗೆಲುವು
ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಎಣಿಕೆ ಕೇಂದ್ರದಿಂದ ಹೊರ ನಡೆದರು.
Team Udayavani, Jun 5, 2024, 6:08 PM IST
■ ಉದಯವಾಣಿ ಸಮಾಚಾರ
ಚಿತ್ರದುರ್ಗ: ವಿಧಾನಸಭೆ ಚುನಾವಣೆ ಸೋಲಿನ ಬೇಸರದಲ್ಲಿದ್ದ ಬಿಜೆಪಿ ಕಾರ್ಯಕರ್ತರಿಗೆ ಲೋಕಸಭೆ ಚುನಾವಣೆ ಗೆಲುವು ಹುಮ್ಮಸ್ಸು ಮೂಡಿಸಿದೆ. ಒಂದೆಡೆ ದೇಶದಲ್ಲಿ ಮತ್ತೆ ಎನ್‌ಡಿಎ ಮೈತ್ರಿಕೂಟದ ಸರ್ಕಾರ ಬರುವುದು ಖಚಿತವಾಗುತ್ತಿದ್ದರೆ, ಮತ್ತೂಂದೆಡೆ ರಾಜ್ಯದಲ್ಲೂ ಬಿಜೆಪಿ ಅತಿ ಹೆಚ್ಚು ಸ್ಥಾನಗಳಲ್ಲಿ ಜಯ ಸಾ ಧಿಸುವ ಸುದ್ದಿ, ಇದರ ನಡುವೆ ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರ ಲೀಡ್ ಪ್ರತಿ ಸುತ್ತಿಗೂ ಹೆಚ್ಚಾಗುತ್ತಿದ್ದಂತೆ ಜೈ ಶ್ರೀರಾಮ್, ಭಾರತ್ ಮಾತಾ ಕೀ ಜೈ, ಮೋದಿ ಮೋದಿ ಘೋಷಣೆಗಳು ಮುಗಿಲು ಮುಟ್ಟುತ್ತಿದ್ದವು.
ಸರ್ಕಾರಿ ವಿಜ್ಞಾನ ಕಾಲೇಜು ಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದ್ದರೆ, ಜಗದ್ಗುರು ಜಯದೇವ ಕ್ರೀಡಾಂಗಣ ಹಾಗೂ ಬಿ.ಡಿ.ರಸ್ತೆಯ ಪಂಚಾಚಾರ್ಯ ಕಲ್ಯಾಣ ಮಂಟಪದ ಬಳಿ ನೂರಾರು ಬಿಜೆಪಿ ಕಾರ್ಯಕರ್ತರು ಕೇಸರಿ ಶಾಲಿನೊಂದಿಗೆ ಆಗಮಿಸಿ ಸಂಭ್ರಮಿಸುತ್ತಿದ್ದರು. ಮತ ಎಣಿಕೆ ಆರಂಭದಲ್ಲಿ ಕಾಂಗ್ರೆಸ್ ಪರ ವಾತಾವರಣ ಇದ್ದಾಗ ಕಾಂಗ್ರೆಸ್ ಕಾರ್ಯಕರ್ತರು ಉತ್ಸಾಹದಲ್ಲಿದ್ದರು.
ಆದರೆ ಬಿಜೆಪಿ ಪರ ವಾತಾವರಣ ಬದಲಾಗುತ್ತಲೇ ಕೇಂದ್ರದಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಎಣಿಕೆ ಕೇಂದ್ರದಿಂದ ಹೊರ ನಡೆದರು. ಅವರ ಹಿಂದೆಯೇ ಕಾರ್ಯಕರ್ತರು ಕೂಡ ನಿರಾಸೆಯಿಂದ ಹೆಜ್ಜೆ ಹಾಕಿದರು.
ಇತ್ತ ಗೆಲುವಿನ ಖಾತರಿ ಸಿಗುತ್ತಿದ್ದಂತೆ ಕೇಸರಿ ಪಾಳೆಯದ ಕಾರ್ಯಕರ್ತರು ಜಮಾಯಿಸತೊಡಗಿದರು. ಗೋವಿಂದ ಕಾರಜೋಳ ಮತ ಎಣಿಕೆ ಕೇಂದ್ರಕ್ಕೆ ಬರುವಾಗ ನೂರಾರು ಮಂದಿ ಜೊತೆಗೆ ಬಂದು ವಿಜಯದ ಸಂಕೇತ ತೋರಿಸಿದರು. ಪ್ರಮಾಣಪತ್ರ ಪಡೆದು
ತೆರಳುವಾಗ ಹಾರ, ತುರಾಯಿ, ಘೋಷಣೆ ಜೊತೆಗೆ ಕಾರಜೋಳ ಅವರ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಕಾರ್ಯಕರ್ತರು,
ಸಾರ್ವಜನಿಕರು ಮುಗಿ ಬಿದ್ದಿದ್ದರು. ಅಲ್ಲಿಂದ ಮುಖ್ಯ ರಸ್ತೆಗೆ ತೆರಳುವಾಗ ವಾಹನವೊಂದರಿಂದ ಮಿಂಚು ಹಾಗೂ ಕೇಸರಿ ಬಣ್ಣದ ಪೌಡರ್ ಸ್ಪ್ರೆ ಮಾಡುವ ಮೂಲಕ ಕೇಸರಿ ಬಣ್ಣದ ಮಳೆ ಸುರಿಸಿದರು. ಅಲ್ಲಿದ್ದ ಬಹುತೇಕರ ತಲೆ, ಮೈಕೈ, ಬಟ್ಟೆ, ವಾಹನಗಳೆಲ್ಲಾ ಕೇಸರಿ ಬಣ್ಣದಿಂದ ಮಿಂದು ಹೋಗಿದ್ದವು. ಹತ್ತಾರು ವಾಹನಗಳಲ್ಲಿ ಬಿಜೆಪಿ ಕಚೇರಿಗೆ ಬಂದ ಗೋವಿಂದ ಕಾರಜೋಳ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಜೊತೆಗೆ ಸಂಭ್ರಮಿಸಿದರು.
ನಂತರ ಶ್ರೀ ನೀಲಕಂಠೇಶ್ವರ ದೇವಸ್ಥಾನ, ಜೆಸಿಆರ್ ಬಡಾವಣೆಯ ಗಣಪತಿ ದೇವಸ್ಥಾನ, ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿದರು. ತೀವ್ರ ಪೈಪೋಟಿ ಏರ್ಪಟ್ಟಿದ್ದ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಯಾರು ಗೆದ್ದರೂ ಅಚ್ಚರಿ ಇಲ್ಲ ಎನ್ನುವ
ವಾತಾವರಣ ಸೃಷ್ಟಿಯಾಗಿತ್ತು. ಬಿಜೆಪಿ ಗೆಲುವಿನ ದಡ ಮುಟ್ಟುತ್ತಲೇ ಕಾರ್ಯಕರ್ತರು ಮೊಬೈಲ್ ವಾಟ್ಸ್‌ಆ್ಯಪ್, ಸ್ಟೇಟಸ್ ಹಾಕಿಕೊಂಡು ಸಂಭ್ರಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.