Lok Sabha Election: ದಕ್ಷಿಣ ಭಾರತದಲ್ಲಿ ಬಿಜೆಪಿ ಸಾಧನೆ ಬಗ್ಗೆ ಮೋದಿ ಮೆಚ್ಚುಗೆ
Team Udayavani, Jun 7, 2024, 7:01 PM IST
ಹೊಸದಿಲ್ಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಹೊಸದಾಗಿ ಚುನಾಯಿತರಾದ ಸಂಸದರು ಶುಕ್ರವಾರ ನರೇಂದ್ರ ಮೋದಿಯವರನ್ನು ಸಂಸದೀಯ ಪಕ್ಷದ ನಾಯಕರನ್ನಾಗಿ ಮಾಡುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದರು. ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅವರನ್ನು ಪ್ರಧಾನಿಯನ್ನಾಗಿ ಅನುಮೋದಿಸಿದರು.
ಬಳಿಕ ಮಾತನಾಡಿದ ಪ್ರಧಾನಿ ಮೋದಿ ಅವರು, ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಬಿಜೆಪಿಯ ಪ್ರದರ್ಶನದ ಬಗ್ಗೆ ಉಲ್ಲೇಖಿಸಿದರು.
“ನಾನು ಖಂಡಿತವಾಗಿ ಉಲ್ಲೇಖಿಸಲು ಬಯಸುತ್ತೇನೆ… ದಕ್ಷಿಣ ಭಾರತದಲ್ಲಿ ಹೊಸ ರಾಜಕೀಯಕ್ಕೆ ಎನ್ ಡಿಎ ಬಲವಾದ ನೆಲೆಯನ್ನು ಸ್ಥಾಪಿಸಿದೆ. ಕರ್ನಾಟಕ ಮತ್ತು ತೆಲಂಗಾಣವನ್ನು ನೋಡಿ, ಕಾಂಗ್ರೆಸ್ ಇತ್ತೀಚೆಗೆ ಸರ್ಕಾರಗಳನ್ನು ರಚಿಸಿದೆ, ಆದರೆ ಜನರ ನಂಬಿಕೆ ಮುರಿದು ಹೋಯಿತು, ಹೀಗಾಗಿ ಅವರು ಎರಡೂ ರಾಜ್ಯದಲ್ಲೂ ಎನ್ ಡಿಎಯನ್ನು ಸ್ವೀಕರಿಸಿದರು” ಎಂದು ನರೇಂದ್ರ ಮೋದಿ ಹೇಳಿದರು.
“ನಾನು ತಮಿಳುನಾಡಿನ ತಂಡವನ್ನು ಅಭಿನಂದಿಸಲು ಬಯಸುತ್ತೇನೆ. ನಾವು ತಮಿಳುನಾಡಿನಲ್ಲಿ ಸೀಟುಗಳನ್ನು ಗೆಲ್ಲಲು ಸಾಧ್ಯವಾಗದಿದ್ದರೂ, ರಾಜ್ಯದಲ್ಲಿ ಎನ್ ಡಿಎಯ ಮತಗಳ ಪ್ರಮಾಣವು ಹೆಚ್ಚಾದ ರೀತಿಯಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ನರೇಂದ್ರ ಮೋದಿ ಹೇಳಿದರು.
ಕೇರಳದಲ್ಲಿ ಬಿಜೆಪಿ ಮೊದಲ ಬಾರಿ ಗೆಲುವು ಸಾಧಿಸಿದೆ. ಕೇರಳದ ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ನಟ-ರಾಜಕಾರಣಿ ಸುರೇಶ್ ಗೋಪಿ ಗೆಲುವು ಸಾಧಿಸಿದ್ದಾರೆ.
ಎನ್ ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಬಿಜೆಪಿ ಮಿತ್ರಪಕ್ಷಗಳಾದ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ, ಶಿವಸೇನೆ ಮುಖ್ಯಸ್ಥ ಏಕನಾಥ್ ಶಿಂಧೆ, ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್, ಎಚ್‌ಎಎಂ(ಎಸ್) ಮುಖ್ಯಸ್ಥ ಜಿತನ್ ರಾಮ್ ಮಾಂಝಿ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.