Congress ಅಸಮಾಧಾನ; ಲಕ್ಷ್ಮಣ ಸವದಿ ವಿರುದ್ದವೂ ಸತೀಶ್ ಜಾರಕಿಹೊಳಿ ಆಕ್ರೋಶ

ಅನಾವಶ್ಯಕವಾಗಿ ನಾವು ಯಾರನ್ನೂ ಟಾರ್ಗೆಟ್ ಮಾಡುತ್ತಿಲ್ಲ...77 ಸಾವಿರ ಲೀಡ್‌ ಇದ್ದಲ್ಲಿ ಬಿಜೆಪಿಗೆ ಲೀಡ್!

Team Udayavani, Jun 7, 2024, 9:20 PM IST

Satish Jaraki

ಬೆಳಗಾವಿ: ಅನಾವಶ್ಯಕವಾಗಿ ನಾವು ಯಾರನ್ನೂ ಟಾರ್ಗೆಟ್ ಮಾಡಿಲ್ಲ. ಅಥಣಿ, ಕುಡಚಿ ಮತಕ್ಷೇತ್ರದಲ್ಲಿ ಏಕೆ ಸಮಸ್ಯೆಯಾಗಿದೆ ಎಂಬುವುದನ್ನು ಸ್ವತಃ ಕಣ್ಣಾರೇ ಕಂಡಿದ್ದೇನೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.

ನಗರದ ಕಾಂಗ್ರೆಸ್‌ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚುನಾವಣೆ ಇನ್ನೆರಡು ದಿನ ಇರುವಾಗ ಸ್ವತಃ ಕುಡಚಿಯಲ್ಲಿ ನಾನೇ ವಾಸ್ತವ್ಯ ಮಾಡಿದ್ದರೂ ಶಾಸಕ ಮಹೇಂದ್ರ ತಮ್ಮಣ್ಣವರ್‌ ನನ್ನ ಕೈಗೆ ಸಿಗಲಿಲ್ಲ ಎಂದು ಶಾಸಕ ಮಹೇಂದ್ರ ತಮ್ಮಣ್ಣವರ ಆರೋಪಕ್ಕೆ ತಿರುಗೇಟು ನೀಡಿದರು.

ಇನ್ನು ಅಥಣಿಯಲ್ಲಿ ವಿಧಾನಸಭೆ ಚುನಾವಣೆಯಲ್ಲಿ 77 ಸಾವಿರ ಲೀಡ್‌ ಸಿಕ್ಕಿತ್ತು. ಆದರೆ ಲೋಕಸಭೆ ಚುನಾವಣೆಯಲ್ಲಿ ನಮಗೆ 7 ಸಾವಿರ ಕಡಿಮೆಯಾಗಿ ಬಿಜೆಪಿಗೆ ಲೀಡ್ ಸಿಕ್ಕಿದೆ. ಕನಿಷ್ಠ 10 ಸಾವಿರ ಲೀಡ್‌ ಸಿಕ್ಕರೂ ಸಂತೋಷ ಇತ್ತು. ಮೈನಸ್ಸ್‌ ಆಗಿದ್ದರಿಂದ ನಾನು ಕಾರ್ಯಕರ್ತರಿಗೆ ಅಲ್ಲಿ ನಡೆದ ಬೆಳವಣಿಗೆಗಳನ್ನು ತಿಳಿಸಿದ್ದೇನೆ ಎಂದರು.

ಶಾಸಕರಾದ ಲಕ್ಷ್ಮಣ ಸವದಿ ಹಾಗೂ ಮಹೇಂದ್ರ ತಮ್ಮಣ್ಣವರ್‌ ಅಥಣಿಯಲ್ಲಿ ಸೇರಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಅವರು ಜನರು ಮತ್ತು ಕಾರ್ಯಕರ್ತರು, ಪಕ್ಷ ನಮ್ಮ ಪರ ಇದೆ. ನಮ್ಮನ್ನು ವಿರೋಧಿಸಲು ಅವರು ಯಾರು ಎಂದು ಪ್ರಶ್ನಿಸಿದರು.

ಶಾಸಕರ ಬಗ್ಗೆ ದೂರು ನೀಡುವುದಿಲ್ಲ. ದೂರು ನೀಡಿದರೂ ನಮ್ಮಲ್ಲಿ ಇನ್ನುವರೆಗೆ ಯಾರ ಮೇಲೆಯೂ ಕ್ರಮವಾಗಿಲ್ಲ. ಆದರೆ ಇವರು ಮಾಡಿದ್ದರ ಬಗ್ಗೆ ಜನಕ್ಕೆ ತಿಳಿಸುತ್ತೇನೆ ಎಂದು ಸತೀಶ ಜಾರಕಿಹೊಳಿ ಹೇಳಿದರು.

ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಎಲ್ಲಾ ಕಾಂಗ್ರೆಸ್‌ ಶಾಸಕರು ಲೀಡ್‌ ಕೊಟ್ಟಿದ್ದಾರೆ. ಅಥಣಿಯಲ್ಲಿ ಶಾಸಕ ಸವದಿ ಅವರು ಲೀಡ್‌ ಕೊಟ್ಟಿದ್ದರೆ ಅವರ ನಮ್ಮ ಬಾಂಧವ್ಯ ಚೆನ್ನಾಗಿ ಉಳಿಯತ್ತಿತ್ತು. ಆದರೆ ಈಗ ನಮ್ಮಿಂದ ಅಂತರ ಕಾಯ್ದುಕೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಚುನಾವಣೆಗಿಂತ ಮುನ್ನ ಪ್ರಿಯಂಕಾಗೆ ಲೀಡ್‌ ಕೊಡುತ್ತೇನೆ ಎಂದು ಸವದಿ ಅವರೇ ಹೇಳಿದ್ದರು. ಆದರೆ 7 ಸಾವಿರ ಮೈನಸ್ಸ್‌ ಆಗಿದ್ದರಿಂದ ಅಥಣಿ ಜನತೆ ಅವರನ್ನೇ ಪ್ರಶ್ನಿಸುತ್ತಿದ್ದಾರೆ. ಜನಕ್ಕೆ ಅವರೇ ಉತ್ತರ ನೀಡಬೇಕು ಎಂದು ತಿರುಗೇಟು ನೀಡಿದರು

ಬೆಳಗಾವಿಯ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಅವರ ಸೋಲಿನ ಕುರಿತು ಮಾತನಾಡಿದ ಸಚಿವ ಸತೀಶ್‌ ಜಾರಕಿಹೊಳಿ, ಹೆಬ್ಬಾಳ್ಕರ್ ಅವರ ಸೋಲಿಗೆ ಯಾರೂ ಜವಾಬ್ದಾರರಲ್ಲ. ಅವರು ತಮ್ಮ ಜವಾಬ್ದಾರಿಯನ್ನು ತಾವೇ ಹೊರಬೇಕು ಎಂದು ಸ್ಪಷ್ಟವಾಗಿ ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳ ಪರಿಣಾಮ ಬೀರಿದೆ. ಕಳೆದ ಬಾರಿ ಚುನಾವಣೆಗೆ ಹೋಲಿಸಿದರೆ ಬಿಜೆಪಿ ಅಭ್ಯರ್ಥಿಗಳ ಗೆಲುವಿನ ಅಂತರ ಕಡಿಮೆಯಾಗಿದೆ. ಹೀಗಾಗಿ ಚುನಾವಣೆಯಲ್ಲಿ ಗ್ಯಾರಂಟಿಗಳ ಪರಿಣಾಮ ಬೀರಿದೆ ಎಂದ ಅವರು ಗ್ಯಾರಂಟಿಗಳನ್ನು ಮುಂದುವರೆಯುವ ಅವಶ್ಯಕತೆ ಇದೆ ಎಂದರು.

ಪರಿಶ್ರಮ ಇದ್ದಾಗ ಮಾತ್ರ ಗೆಲುವು ಸಾಧ್ಯ. ಅಭ್ಯರ್ಥಿ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಿದ್ದಾಗ ಹಾಗೂ ಜನರ ಜತೆ ಉತ್ತಮ ಒಡನಾಟ ಹೊಂದಿದಾಗ ಮಾತ್ರ ಜನರ ಮನಸ್ಸಿನಲ್ಲಿ ಉಳಿಯಲು ಸಾಧ್ಯ. ಅದನ್ನು ಬಿಟ್ಟು ಭವಿಷ್ಯ ಕೇಳಿ ನಾಮಪತ್ರ ಸಲ್ಲಿಸಿ ನಾವು ಗೆಲ್ಲುತ್ತೇವೆ ಎಂದು ಹಗಲು ಕನಸು ಕಂಡ ಅಭ್ಯರ್ಥಿಗಳಿಗೆ ಸೋಲಾಗಿದೆ ಎಂದು ಹಾಸ್ಯ ಚಟಾಕಿ ಹಾರಿಸಿದರು.

ಜನರ ಅನುಕೂಲತೆ ದೃಷ್ಟಿಯಿಂದ ಬೆಳಗಾವಿ ವಿಭಜಿಸಿ ಚಿಕ್ಕೋಡಿ, ಗೋಕಾಕ ಕೇಂದ್ರವಾಗಿ ಇನ್ನೆರಡು ಹೊಸ ಜಿಲ್ಲೆಗಳಾಗಬೇಕು. ಬೆಳಗಾವಿ ಜಿಲ್ಲೆ ಪ್ರಾದೇಶಿಕವಾಗಿ ಬಹಳ ದೊಡ್ಡದಿದೆ. ಜಿಲ್ಲೆ ವಿಭಜನೆ ಆಗಬೇಕು ಎಂದು ನಾನು ಹಿಂದೆಯೂ ಹೇಳಿದ್ದೆ. ಈಗಲೂ ಅಷ್ಟೇ. ಆಡಳಿತ ಸುಗಮವಾಗಲು ಗೋಕಾಕ- ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಮಾಡಬೇಕಿದೆ ಎಂದರು.

ಟಾಪ್ ನ್ಯೂಸ್

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.