Former Minister Nagendra: ಮಾಜಿ ಸಚಿವ ನಾಗೇಂದ್ರಗೆ ಸಿಬಿಐನಿಂದ ಶೀಘ್ರ ನೋಟಿಸ್‌?


Team Udayavani, Jun 9, 2024, 7:05 AM IST

46

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋ. ರೂ. ಹಗರಣದಲ್ಲಿ ಸಿಬಿಐಯಿಂದ ಶೀಘ್ರದಲ್ಲೇ ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ಪ್ರಕರಣದಲ್ಲಿ ಶಾಮೀಲಾದ ಇತರರಿಗೆ ನೋಟಿಸ್‌ ನೀಡಿ ವಿಚಾರಣೆ ಮಾಡುವ ಲಕ್ಷಣ ಗೋಚರಿಸಿದೆ.

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ವರ್ಷ ಕಳೆದ ಬೆನ್ನಲ್ಲೇ ನಡೆದ ಅತಿ ದೊಡ್ಡ ಹಗರಣವೆಂದೇ ಬಿಂಬಿತವಾಗಿರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದ ಬಗ್ಗೆ ಸಿಬಿಐ ಇಂಚಿಂಚೂ ಮಾಹಿತಿ ಹಾಗೂ ದಾಖಲೆ ಕಲೆ ಹಾಕಲು ಪ್ರಾರಂಭಿಸಿದೆ. ಲಭ್ಯವಾಗುವ ಸಾಕ್ಷ್ಯಾಧಾರಗಳ ಆಧಾರದಲ್ಲಿ ಪ್ರಕರಣದಲ್ಲಿ ಶಾಮೀಲಾಗಿರುವ ಒಬ್ಬೊಬ್ಬರನ್ನೇ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಳ್ಳಲು ಸಿಬಿಐ ಸಿದ್ಧತೆ ನಡೆಸಿದೆ. ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೂ ಸದ್ಯದಲ್ಲೇ ಸಿಬಿಐ ನೋಟಿಸ್‌ ನೀಡಿ ಬಿಸಿ ಮುಟ್ಟಿಸಲಿದೆ. ಆದರೆ ಸದ್ಯಕ್ಕೆ ಅವರನ್ನು ಬಂಧಿಸುವ ಸಾಧ್ಯತೆಗಳಿಲ್ಲ. ಸಿಬಿಐ ವಿಚಾರಣೆಗೆ ಸಹಕರಿಸದಿದ್ದರೆ ಮಾತ್ರ ಬಂಧಿಸಲಿದೆ.

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿಯಲ್ಲಿ ಈ ನಿಗಮ ಬರುತ್ತದೆ. ಹಗರಣ ನಡೆದ ಸಂದರ್ಭದಲ್ಲಿ ನಿಗಮದಲ್ಲಿ ಬಿ.ನಾಗೇಂದ್ರ ಸಚಿವರಾಗಿದ್ದರು. ಹೀಗಾಗಿ ನಾಗೇಂದ್ರ ವಿರುದ್ಧ ಸಾಕ್ಷ್ಯ ಸಿಗದಿದ್ದರೂ ನಿಗಮದಲ್ಲಿ ನಡೆದ ಹಣಕಾಸಿನ ವ್ಯವಹಾರಗಳ ಬಗ್ಗೆ ಮಾಹಿತಿ ಕಲೆ ಹಾಕುವ ನಿಟ್ಟಿನಲ್ಲಿ ಸಿಬಿಐ ವಿಚಾರಣೆಗೆ ಒಳಪಡಿಸುವ ಸಾಧ್ಯತೆಗಳಿವೆ. ಪ್ರಕರಣದಲ್ಲಿ ಸಿಬಿಐ ಪ್ರವೇಶವಾಗುತ್ತಿದ್ದಂತೆ ಕೆಲವು ಪ್ರಭಾವಿ ರಾಜಕಾರಣಿಗಳಿಗೆ ಎದೆ ನಡುಕ ಆರಂಭವಾಗಿದೆ ಎನ್ನಲಾಗಿದೆ.

ಬ್ಯಾಂಕ್‌ ಅಧಿಕಾರಿಗಳ ಬಂಧನ ಭೀತಿ:

ಯೂನಿಯನ್‌ ಬ್ಯಾಂಕ್‌ ಆಫ್ ಇಂಡಿಯಾದ ಎಂ.ಜಿ. ರಸ್ತೆ ಶಾಖೆಯ ಮುಖ್ಯ ವ್ಯವಸ್ಥಾಪಕಿಯರಾದ ಶುಚಿಸ್ಮಿತಾ ರಾವುಲ್‌ (ಎ1), ಡಿ.ದೀಪಾ (ಎ2), ಬ್ಯಾಂಕ್‌ನ ಕ್ರೆಡಿಟ್‌ ಆಫೀಸರ್‌ ವಿ.ಕೃಷ್ಣಮೂರ್ತಿ (ಎ3), ಖಾಸಗಿ ವ್ಯಕ್ತಿ (ಎ4) ಹಾಗೂ ಸಾರ್ವಜನಿಕ ಸೇವಕ (ಎ5) ವಿರುದ್ಧ ಜೂ. 3ರಂದು ಸಿಬಿಐ ಎಫ್ಐಆರ್‌ ದಾಖಲಿಸಿಕೊಂಡಿದೆ. ಸಿಬಿಐಗೆ ದೂರು ನೀಡಿರುವ ಬ್ಯಾಂಕಿನ ಡಿಜಿಎಂ ಜೆ.ಮಹೇಶ್‌, ಫೆ.21 ರಿಂದ ಮೇ 6ರ ವರೆಗೆ ಬ್ಯಾಂಕ್‌ನಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಿಬಿಐಗೆ ಒದಗಿಸಿದ್ದಾರೆ. ಇದರ ಆಧಾರದಲ್ಲಿ ಮೇಲಿನ ಐವರು ಆರೋಪಿಗಳ ವಿರುದ್ಧ ಸಾಕ್ಷ್ಯ ಕಲೆ ಹಾಕುವ ಕೆಲಸದಲ್ಲಿ ಸಿಬಿಐ ನಿರತವಾಗಿದೆ. ಬಲವಾದ ಸಾಕ್ಷ್ಯ ಸಿಗುತ್ತಿದ್ದಂತೆ ಆರೋಪಿಗಳನ್ನು ಬಂಧಿಸುವ ಸಾಧ್ಯತೆಗಳೇ ಹೆಚ್ಚಾಗಿದೆ.

ನಿಗಮದ ದುಡ್ಡು ಯಾರ ಖಜಾನೆ ಸೇರಿದೆ?:

ಮಹರ್ಷಿ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತ ಎನ್ನಲಾದ ನೆಕ್ಕಂಟಿ ನಾಗರಾಜ್‌ ಹಾಗೂ ನಾಗರಾಜ್‌ ಬಾಮೈದ ನಾಗೇಶ್ವರ ರಾವ್‌, ಹೈದರಾಬಾದ್‌ನ ಎಫ್ಎಫ್ಸಿಸಿಎಸ್‌ಎಲ್‌ ಸೊಸೈಟಿ ಅಧ್ಯಕ್ಷ ಸತ್ಯನಾರಾಯಣ, ನಿಗಮದ ಹಿಂದಿನ ಎಂಡಿ ಪದ್ಮನಾಭ, ಪರಶುರಾಮ್‌ ಅವರನ್ನು ಎಸ್‌ಐಟಿಯು ವಿಚಾರಣೆ ನಡೆಸಿದೆ. ನಿಗಮದ ಅಕ್ರಮ ದುಡ್ಡು ಎಷ್ಟು ಜನರ ಖಜಾನೆ ಸೇರಿದೆ ಎಂಬ ಸುಳಿವು ಮೇಲ್ನೋಟಕ್ಕೆ ಸಿಕ್ಕಿದ್ದು, ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಎಸ್‌ಐಟಿ ಪತ್ತೆ ಹಚ್ಚುತ್ತಿದೆ.

ನಿಗಮ ಕೊಟ್ಟ ದೂರಿನಲ್ಲಿ ಎಸ್‌ಐಟಿ ತನಿಖೆ:

ಇದುವರೆಗೆ ಸಿಬಿಐ ಅಧಿಕಾರಿಗಳು ನಮ್ಮಿಂದ ಯಾವುದೇ ಮಾಹಿತಿ ಕೇಳಿಲ್ಲ. ಬ್ಯಾಂಕ್‌ನವರು ಕೊಟ್ಟ ದೂರಿನ ಆಧಾರದಲ್ಲಿ ಸಿಬಿಐ ತನಿಖೆ ನಡೆಸುತ್ತಿದೆ. ನಿಗಮದವರು ಕೊಟ್ಟಿರುವ ದೂರಿನ ಆಧಾರದಲ್ಲಿ ಎಸ್‌ಐಟಿ  ತನಿಖೆ ನಡೆಸುತ್ತಿದೆ. ಸರಕಾರದ ಸೂಚನೆ ಮೇರೆಗೆ ರಚನೆಯಾಗಿರುವ ಎಸ್‌ಐಟಿಗೆ ಪ್ರಕರಣದ ತನಿಖೆ ನಡೆಸುವ ಜವಾಬ್ದಾರಿ ವಹಿಸಿರುವ ಹಿನ್ನೆಲೆಯಲ್ಲಿ ನಾವು ತನಿಖೆ ನಡೆಸುತ್ತಿದ್ದೇವೆ. ಅಗತ್ಯ ಬಿದ್ದರೆ ಮಾಜಿ ಸಚಿವರನ್ನು ವಿಚಾರಣೆಗೆ ಕರೆಸಲಾಗುವುದು. ಈ ಕೇಸ್‌ನಲ್ಲಿ ಇದುವರೆಗೆ ಬಂಧನಕ್ಕೊಳಗಾಗಿರುವ 5 ಮಂದಿಯ ವಿಚಾರಣೆ ನಡೆಯುತ್ತಿದೆ ಎಂದು ಎಸ್‌ಐಟಿ ತಂಡದ ಮುಖ್ಯಸ್ಥ ಮನೀಷ್‌ ಕರ್ಬೀಕರ್‌  “ಉದಯವಾಣಿ’ಗೆ ತಿಳಿಸಿದ್ದಾರೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದ ದಾಖಲೆ ಆಧರಿಸಿಯೇ ಎಸ್‌ಐಟಿ ಪ್ರಕರಣದ ತನಿಖೆ ನಡೆಸುತ್ತಿದೆ. ಬಂಧಿತ ಐವರು ಹಗರಣದಲ್ಲಿ ಪಿತೂರಿ ನಡೆಸಿರುವುದು ತನಿಖೆಯಲ್ಲಿ ಕಂಡು ಬಂದಿದೆ. ಎಸ್‌ಐಟಿಯು ಸಾಕ್ಷ್ಯ ಕಲೆ ಹಾಕಿ ಪ್ರಕರಣದ ತನಿಖೆ ಚುರುಕುಗೊಳಿಸಿದೆ. ಇದುವರೆಗೆ ಸಿಬಿಐ ನಮ್ಮನ್ನು ಸಂಪರ್ಕಿಸಿಲ್ಲ.ಮನೀಷ್‌ ಕರ್ಬೀಕರ್‌, ಎಸ್‌ಐಟಿ ತಂಡದ ಮುಖ್ಯಸ್ಥ.

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.