Kotee; ಕಿಚ್ಚ ಸುದೀಪ್ಗೆ ಡಾಲಿ ‘ಕೋಟಿ’ಯ ಮೊದಲ ಟಿಕೆಟ್
Team Udayavani, Jun 9, 2024, 11:58 AM IST
ಡಾಲಿ ಧನಂಜಯ ಅಭಿನಯದ ಕೋಟಿ’ ಸಿನಿಮಾದ ಮೊದಲ ಟಿಕೇಟನ್ನು ಚಿತ್ರತಂಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ನೀಡಿದೆ. ಅದ್ಧೂರಿಯಾಗಿ ನಡೆದ ಕೋಟಿ ಸಿನಿಮಾದ ವಿಶೇಷ ಪ್ರೀ ರಿಲೀಸ್ ನೀಡಿದೆ.
ಚಿತ್ರದ ಹೊಸ ಪೋಸ್ಟರ್ವೊಂದನ್ನು ಬಿಡುಗಡೆ ಮಾಡಿದ ಕಿಚ್ಚ ನಾಯಕನಟ ಧನಂಜಯ್ ಮತ್ತು ನಿರ್ದೇಶಕ ಪರಮ್ ಅವರಿಗೆ ಯಶಸ್ಸು ಸಿಗಲಿ ಎಂದು ಶುಭ ಕೋರಿದರು.
ಈಗಾಗಲೇ “ಕೋಟಿ’ ಚಿತ್ರದ ಟ್ರೇಲರ್ ಬಿಡುಗಡೆಗೊಂಡಿದ್ದು, ಮೆಚ್ಚುಗೆ ಗಳಿಸುತ್ತಿದೆ. ಡಾಲಿ ಧನಂಜಯ್ “ಕೋಟಿ’ ಎಂಬ ಒಬ್ಬ ಸಾಮಾನ್ಯ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೇ ಒಂದು ಕೋಟಿ ರೂಪಾಯಿ ದುಡಿದು ತನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. ಕೋಟಿಯ ಈ ಪಯಣದ ಕಥಾಹಂದರವನ್ನು ಹೊಂದಿರುವ ಈ ಸಿನಿಮಾ ಜೂನ್ 14ಕ್ಕೆ ಬಿಡುಗಡೆಯಾಗಲಿದೆ.
ವಾಸುಕಿ ವೈಭವ್ ಹಾಡುಗಳಿಗೆ ಸ್ವರ ಸಂಯೋಜನೆ ಮಾಡಿದ್ದಾರೆ. ಸಿನಿಮಾದಲ್ಲಿ ಐದು ಹಾಡುಗಳಿವೆ. ಮೂರು ಹಾಡುಗಳಿಗೆ ಯೋಗರಾಜ್ ಭಟ್ ಸಾಹಿತ್ಯ ಇದೆ. ಒಂದು ಹಾಡನ್ನು ಸ್ವತಃ ವಾಸುಕಿ ಬರೆದಿದ್ದಾರೆ. ಹಿನ್ನೆಲೆ ಸಂಗೀತ “ಕೋಟಿ’ ಸಿನಿಮಾದ ಮುಖ್ಯ ಭಾಗವಾಗಿದ್ದು, ನೊಬಿನ್ ಪೌಲ್ ಹೊತ್ತಿದ್ದಾರೆ. ಚಿತ್ರದ ಸಂಕಲನದ ಜವಾಬ್ದಾರಿಯನ್ನು ಹೊತ್ತಿರುವುದು ಕನ್ನಡದ ಪ್ರತಿಭಾವಂತ ಯುವ ಸಂಕಲನಕಾರ ಪ್ರತೀಕ್ ಶೆಟ್ಟಿ. ಚಿತ್ರದಲ್ಲಿ ರಂಗಾಯಣ ರಘು, ತಾರಾ, ಪೃಥ್ವಿ ಶಾಮನೂರು, ಸರದಾರ ಸತ್ಯಾ ಮತ್ತು ತನುಜಾ ವೇಂಕಟೇಶ್ ಬೇರೆ ಬೇರೆ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್ ಅರವಿಂದ್
Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್ವುಡ್ನ ಪಾರ್ಟ್-2 ಕ್ರೇಜ್
Upendra Movie: ರೀ ರಿಲೀಸ್ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ
Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್ ರೋಡ್ʼ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.