Chandan Shetty: ನಿವೇದಿತಾ ಗೌಡಗೆ ಚಂದನ್ ಶೆಟ್ಟಿ 9 ಕೋಟಿ ರೂ. ಜೀವನಾಂಶ ನೀಡಿದ್ದು ನಿಜವೇ?
Team Udayavani, Jun 9, 2024, 12:21 PM IST
ಬೆಂಗಳೂರು: ರ್‍ಯಾಪರ್ ಚಂದನ್ ಶೆಟ್ಟಿ – ನಿವೇದಿತಾ ಗೌಡ ಪರಸ್ಪರ ಒಪ್ಪಿ ವಿಚ್ಚೇದನ ಪಡೆದುಕೊಂಡಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಜೊತೆಯಾಗಿ ರೀಲ್ಸ್ ಮಾಡಿಕೊಂಡಿದ್ದ ದಂಪತಿಗಳು ಇಂದು ದೂರವಾಗಿದ್ದಾರೆ ಎನ್ನುವ ಮಾತು ಕೇಳಿ ಅಭಿಮಾನಿಗಳು ಶಾಕ್ ಆಗಿದ್ದಾರೆ.
ಪತಿ ಪತ್ನಿಯಾಗಿ ಮುಂದುವರೆಯುವ ನಿಟ್ಟಿನಲ್ಲಿ ಹೊಂದಾಣಿಕೆ ಇಲ್ಲದಿರುವುದೇ ಇಬ್ಬರ ವಿಚ್ಚೇದನಕ್ಕೆ ಕಾರಣ ಎಂದು ಅವರ ವಕೀಲೆ ಅನಿತಾ ಅವರು ಮಾಧ್ಯಮವೊಂದರ ಜೊತೆ ಮಾತನಾಡುತ್ತಾ ಹೇಳಿದ್ದಾರೆ.
“ಈ ದಿನ ಚಂದನ್ ಶೆಟ್ಟಿ ಹಾಗೂ ನಾನು, ನಮ್ಮ ದಾಂಪತ್ಯವನ್ನು ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೊಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಹಾಗೂ ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲೂ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು, ಸ್ನೇಹಿತರು ಹಾಗೂ ಅಭಿಮಾನಿಗಳಿಂದ ಎಂದಿನಂತೆ ಬೆಂಬಲ ಕೋರುತ್ತೇವೆ. ನಾವೂ ಪ್ರತ್ಯೇಕ ಮಾರ್ಗ ಅನುಸರಿಸಿದ್ರೂ, ಒಬ್ಬರೊನ್ನೊಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣನೆಗಾಗಿ ಎಲ್ಲರಿಗೂ ಧನ್ಯವಾದಗಳು” ಎಂದು ನಿವೇದಿತಾ ವಿಚ್ಚೇದನ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.
ಚಂದನ್ – ನಿವೇದಿತಾ ವಿಚ್ಚೇದನ ಪಡೆದ ಬಳಿಕ ಜೀವನಾಂಶದ ವಿಚಾರ ಚರ್ಚೆಗೆ ಬಂದಿದೆ. ಸೋಶಿಯಲ್ ಮೀಡಿಯಾದಲ್ಲಿ ನಿವೇದಿತಾ ಚಂದನ್ ಅವರಿಂದ ದೊಡ್ಡಮಟ್ಟದ ಜೀವನಾಂಶವನ್ನು ಕೇಳಿದ್ದಾರೆ ಎನ್ನುವ ಮಾತು ಕೇಳಿಬಂದಿದೆ.
ಚಂದನ್ ಬರೋಬ್ಬರಿ 9 ಕೋಟಿ ರೂ. ಜೀವನಾಂಶವನ್ನು ನಿವೇದಿತಾಗೆ ಕೊಟ್ಟಿದ್ದಾರೆ ಎಂದು ಸುಳ್ಳು ಸುದ್ದಿಯನ್ನು ಹಬ್ಬಿಸಲಾಗಿದೆ.
ಆದರೆ ಈ ಬಗ್ಗೆ ವಕೀಲೆ ಅನಿತಾ ಮಾಧ್ಯಮವೊಂದರ ಜೊತೆ ಮಾತನಾಡುತ್ತಾ ಸ್ಪಷ್ಟನೆ ನೀಡಿದ್ದಾರೆ.
“ನಿವೇದಿತಾ ಗೌಡ ಯಾವುದೇ ರೀತಿಯ ಜೀವನಾಂಶದ ಬೇಡಿಕೆ ಇಟ್ಟಿಲ್ಲ. ಹಾಗಾಗಿ ಚಂದನ್ ಶೆಟ್ಟಿ, ನಿವೇದಿತಾಗೆ ಯಾವುದೇ ರೀತಿಯ ಜೀವನಾಂಶವನ್ನು ನೀಡುವ ಅವಶ್ಯಕತೆ ಇಲ್ಲ. ಇಬ್ಬರೂ ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನ ಪಡೆದಿದ್ದಾರೆ. ಇನ್ನು ನಿವೇದಿತಾ ಯಾವುದೇ ಜೀವನಾಂಶಕ್ಕೆ ಬೇಡಿಕೆ ಇಟ್ಟಿಲ್ಲ. ಅಷ್ಟೇ ಅಲ್ಲ ಇಬ್ಬರೂ ಸಹ ಶೋಗಳು, ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಹಾಗಾಗಿ ಇನ್ನೊಬ್ಬರ ಹಣದ ಅವಶ್ಯಕತೆ ಇಬ್ಬರಿಗೂ ಇಲ್ಲ” ಎಂದಿದ್ದಾರೆ.
ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಇಬ್ಬರೂ ‘ಕ್ಯಾಂಡಿಕ್ರಶ್’ ಎನ್ನುವ ಚಿತ್ರದಲ್ಲಿ ಒಟ್ಟಿಗೆ ನಟಿಸುತ್ತಿದ್ದಾರೆ.
ಕನ್ನಡದ ಬಿಗ್ ಬಾಸ್ ಸೀಸನ್ 5ರಲ್ಲಿ ಮೊದಲ ಬಾರಿಗೆ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಭೇಟಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಸ್ನೇಹ, ಪ್ರೀತಿಯಾಗಿ ಬಳಿಕ ಮೈಸೂರು ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್ ಅವರು ನಿವೇದಿತಾಗೆ ಪ್ರಪೋಸ್ ಮಾಡಿದ್ದರು. 2020ರ ಫೆಬ್ರವರಿ 26ರಂದು ಚಂದನ್ ಶೆಟ್ಟಿ – ನಿವೇದಿತಾ ವಿವಾಹವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.