I.N.D.I.A ನಾಯಕರ ಪೈಕಿ ಕಾರ್ಯಕ್ರಮಕ್ಕೆ ಬಂದಿದ್ದು ಖರ್ಗೆ ಮಾತ್ರ
Team Udayavani, Jun 10, 2024, 12:30 AM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ 3ನೇ ಅವಧಿಯ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ವಿಪಕ್ಷ ನಾಯಕರ ಪೈಕಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತ್ರವೇ ಹಾಜರಾಗಿದ್ದರು. ಉಳಿದೆಲ್ಲ ವಿಪಕ್ಷ ನಾಯಕರೆಲ್ಲರೂ ಕಾರ್ಯಕ್ರಮದಿಂದ ದೂರವುಳಿದಿದ್ದರು.
ಮಲ್ಲಿಕಾರ್ಜುನ ಖರ್ಗೆ ಮಾತ್ರವಲ್ಲದೆ ವಿಪಕ್ಷ ಮೈತ್ರಿಕೂಟ ಇಂಡಿಯಾ ಒಕ್ಕೂಟದಲ್ಲಿನ ುರುತಿಸಿಕೊಂಡಿರುವ ಕೆಲವು ಪಕ್ಷಗಳ ನಾಯಕರಿಗೆ ರಾಷ್ಟ್ರಪತಿ ಭವನದಿಂದ ಆಹ್ವಾನ ನೀಡಲಾಗಿತ್ತಾದರೂ ಈ ಪಕ್ಷಗಳ ನಾಯಕರೆಲ್ಲರೂ ಗೈರಾಗಿದ್ದರು. ಕಾರ್ಯಕ್ರಮಕ್ಕೆ ಗೈರು ಹಾಜರಾಗುವುದಾಗಿ ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಶನಿವಾರವೇ ಪ್ರಕಟಿಸಿದ್ದರು.
ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ 8000 ಆಹ್ವಾನಿತರು!
ಪದಗ್ರಹಣ ಸಮಾ ರಂಭಕ್ಕೆ ಹಲವು ವಿಶೇಷ ವ್ಯಕ್ತಿಗಳು ಸಾಕ್ಷಿಯಾಗಿದ್ದಾರೆ. ವಂದೇ ಭಾರತ್ ರೈಲಿನ ಮೊದಲ ಮಹಿಳಾ ಲೊಕೊ ಪೈಲಟ್ ಮಹಾರಾಷ್ಟ್ರದ ಸುರೇಖಾ ಯಾದವ್, ಹಿರಿಯ ಸಹಾಯಕ ಲೊಕೋ ಪೈಲಟ್ ಚೆನ್ನೈನ ಐಶ್ವರ್ಯ ಮೆನನ್ ಸೇರಿದಂತೆ 10 ಲೊಕೊಪೈಲಟ್‌ಗಳು ಸಮಾರಂಭದಲ್ಲಿ ಭಾಗಿಯಾಗಿದ್ದರು. ಜತೆಗೆ ನೂತನ ಸಂಸಂತ್ ಭವನದ (ಸೆಂಟ್ರಲ್ ವಿಸ್ಟಾ) ಕಟ್ಟಡ ಕಾರ್ಮಿಕರಿಗೂ ಸಮಾರಂಭಕ್ಕೆ ಆಹ್ವಾನಿಸಲಾಗಿತ್ತು. ಪತ್ರಕರ್ತರು, ವಕೀಲರು, ವೈದ್ಯರು ಸೇರಿದಂತೆ ವಿವಿಧ ವರ್ಗಗಳ 8000 ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.