Reasi ಬಸ್ ಮೇಲೆ ಉಗ್ರ ದಾಳಿ ಪ್ರಕರಣ: ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ
Team Udayavani, Jun 10, 2024, 11:52 AM IST
ಹೊಸದಿಲ್ಲಿ: ಯಾತ್ರಿಕರಿದ್ದ ಬಸ್ ಮೇಲೆ ಉಗ್ರರ ದಾಳಿ ನಡೆದು ಹತ್ತು ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡ ಘಟನೆ ರವಿವಾರ ಸಂಜೆ ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ಭಾರತೀಯ ಸೇನೆಯು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬಸ್ಸಿನ ಮೇಲೆ ಗುಂಡಿನ ದಾಳಿಯ ನಂತರ, ವಾಹನವು ಕಮರಿಗೆ ಬಿದ್ದು ಕನಿಷ್ಠ 10 ಯಾತ್ರಿಕರು ಸಾವನ್ನಪ್ಪಿದರು ಮತ್ತು ಹಲವರು ಗಾಯಗೊಂಡರು.
ಇದೀಗ ಸಿಸಿಟಿವಿ ದೃಶ್ಯವೊಂದು ವೈರಲ್ ಆಗಿದ್ದು, ಅದರಲ್ಲಿ ಬಸ್ ಬರುತ್ತಿದ್ದಾಗ ನಾಲ್ವರು ಉಗ್ರರು ಇರುವುದು ಪತ್ತೆಯಾಗಿದೆ. ಮತ್ತೊಂದೆಡೆ ಜಮ್ಮು ಕಾಶ್ಮೀರ ಲೆಫ್ಟಿನೆಂಟ್ ಗರ್ವನರ್ ಮನೋಜ್ ಸಿನ್ಹಾ ಅವರು ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಸಿನ್ಹಾ ಅವರಿಂದ ವರದಿ ಕೇಳಿದ್ದಾರೆ.
ಲಷ್ಕರ್ ಎ ತೋಯ್ಬಾ ಟಾಪ್ ಕಮಾಂಡರ್ ಅಬು ಹಂಝಾ ಈ ದಾಳಿಯಲ್ಲಿ ಭಾಗಿಯಾಗಿದ್ದಾನೆ ಎಂದು ವರದಿಯಾಗಿದೆ.
ಎಸ್ ಡಿಆರ್ ಎಫ್ ಪಡೆ ಸ್ಥಳಕ್ಕೆ ಆಗಮಿಸಿದೆ. ಡ್ರೋನ್ ಗಳಲ್ಲಿ ಬಳಸಿ ಸುತ್ತಲಿನ ದಟ್ಟ ಕಾಡಿನ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ.
ಬಸ್ ಬಂದಾಗ ಉಗ್ರರು ಗುಂಡಿನ ಮಳೆ ಸುರಿದರು. ಆಗ ಚಾಲಕನ ನಿಯಂತ್ರಣ ತಪ್ಪಿ ಬಸ್ ಕಮರಿಗೆ ಬಿತ್ತು ಎಂದು ರಿಯಾಸಿ ಎಸ್ ಪಿ ಮೊಹಿತಾ ಶರ್ಮಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.