ಚುನಾವಣೆಯಲ್ಲಿ ಬಿಜೆಪಿಯ ಪಂಕಜಾ ಮುಂಡೆ ಸೋತರೆ ಸಾಯುವೆ ಎಂದಿದ್ದ ವ್ಯಕ್ತಿ ಅಪಘಾತದಲ್ಲಿ ಮೃತ್ಯು


Team Udayavani, Jun 10, 2024, 1:27 PM IST

ಚುನಾವಣೆಯಲ್ಲಿ ಪಂಕಜಾ ಮುಂಡೆ ಸೋತರೆ ಸಾಯುತ್ತೇನೆ ಎಂದಿದ್ದ ವ್ಯಕ್ತಿ ಅಪಘಾತದಲ್ಲಿ ಮೃತ್ಯು…

ಮಹಾರಾಷ್ಟ್ರ: ಭಾರತೀಯ ಜನತಾ ಪಕ್ಷದ ನಾಯಕಿ ಪಂಕಜಾ ಮುಂಡೆ ಅವರು ಬೀಡ್ ಲೋಕಸಭಾ ಕ್ಷೇತ್ರದಿಂದ ಸೋತರೆ ತಾನು ಬದುಕುವುದಿಲ್ಲ ಎಂದು ಹೇಳಿಕೊಂಡಿದ್ದ ಟ್ರಕ್ ಚಾಲಕ ಶುಕ್ರವಾರ ರಾತ್ರಿ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿರುವುದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆ ಸಂಬಂಧ ಪೊಲೀಸರು ಇದೊಂದು ಆತ್ಮಹತ್ಯೆ ಪ್ರಕರಣ ಎಂಬುದಾಗಿ ಶಂಕೆ ವ್ಯಕ್ತಪಡಿಸಿದ್ದಾರೆ.

ಘಟನೆ ಸಂಬಂಧ ಪೊಲೀಸರು ಮಾಹಿತಿ ಹಂಚಿಕೊಂಡ ಕಿಂಗಾವ್ ಪೊಲೀಸ್ ಠಾಣೆಯ ಅಧಿಕಾರಿ ಬೋರ್ಗಾಂವ್ ಪಟ್ಟಿ ಬಳಿಯ ಅಹ್ಮದ್‌ಪುರ-ಅಂಧೋರಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಬಸ್ ಡಿಕ್ಕಿ ಹೊಡೆದು ವ್ಯಕ್ತ್ತಿಯೊಬ್ಬರು ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ, ಈ ಸಂಬಂಧ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಗಿದ್ದು ಮೃತ ವ್ಯಕ್ತಿಯನ್ನು ಲಾತೂರ್‌ನ ಅಹ್ಮದ್‌ಪುರದ ಯೆಸ್ಟರ್‌ನ ಟ್ರಕ್ ಡ್ರೈವರ್ ಆಗಿದ್ದ ಸಚಿನ್ ಕೊಂಡಿಬಾ ಮುಂಡೆ ಎಂಬುದು ತಿಳಿದು ಬಂದಿದೆ.

ಅಲ್ಲದೆ ವ್ಯಕ್ತಿಯ ಕುರಿತು ಮಾಹಿತಿ ಕಲೆಹಾಕಿದ ಪೊಲೀಸರಿಗೆ ಪ್ರಮುಖ ಮಾಹಿತಿಯೊಂದು ಲಭ್ಯವಾಗಿದ್ದು, ಇತ್ತೀಚಿಗೆ ನಡೆದ ಲೋಕ ಸಭಾ ಚುನಾವಣೆಯಲ್ಲಿ ಬೀಡ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪಂಕಜಾ ಮುಂಡೆ ಸ್ಪರ್ಧಿಸಿದ್ದರು ಈ ಸಮಯದಲ್ಲಿ ಸಚಿನ್ ಕೊಂಡಿಬಾ ಮುಂಡೆ ಅವರು ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಬಿಜೆಪಿ ಅಭ್ಯರ್ಥಿ ಪಂಕಜಾ ಮುಂಡೆ ಚುನಾವಣೆಯಲ್ಲಿ ಸೋತರೆ ನಾನು ಜೀವ ಕಳೆದುಕೊಳ್ಳುತ್ತೇನೆ ಎಂದು ಹೇಳಿಕೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ ಅಲ್ಲದೆ ಪಂಕಜಾ ಮುಂಡೆ ಬೀಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನ ಬಜರಂಗ್ ಸೋನಾವಾನೆ ವಿರುದ್ಧ 6,553 ಮತಗಳಿಂದ ಸೋಲು ಕಂಡಿದ್ದಾರೆ. ಚುನಾವಣಾ ಫಲಿತಾಂಶದ ನಂತರ ಸಚಿನ್ ಬೇಸರಗೊಂಡು ಮೌನವಾಗಿದ್ದರು ಇದರ ಬೆನ್ನಲೇ ಸಚಿನ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಪೊಲೀಸರು ಈ ಮಾಹಿತಿಯನ್ನು ಗಮನದಲ್ಲಿ ಇರಿಸಿಕೊಂಡು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ವಿಚಾರದಲ್ಲಿ ತನಿಖೆ ನಡೆಸುತ್ತಿದ್ದಾರೆ.

ತನಿಖೆಯ ಭಾಗವಾಗಿ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಕಿನಗಾಂವ್ ಪೊಲೀಸ್ ಠಾಣೆಯ ಸಹಾಯಕ ನಿರೀಕ್ಷಕ ಭೌಸಾಹೇಬ್ ಖಂಡಾರೆ ತಿಳಿಸಿದ್ದಾರೆ. ಮೃತರು ಅವಿವಾಹಿತರಾಗಿದ್ದು, ತಂದೆ-ತಾಯಿ ಹಾಗೂ ಸಹೋದರನೊಂದಿಗೆ ವಾಸವಿದ್ದರು.

ಇದನ್ನೂ ಓದಿ: ಅಪಾರ್ಟ್ಮೆಂಟ್ ನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಾಲಿವುಡ್‌ ಯುವ ನಟಿ: ಕಾರಣ ನಿಗೂಢ

ಟಾಪ್ ನ್ಯೂಸ್

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್‌ ಲಿಸ್ಟ್

Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್‌ ಲಿಸ್ಟ್

1-104

Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!

fadnavis

Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ

TV Actor: ಕಾಡಿದ ಕ್ಯಾನ್ಸರ್ 45ರ ಹರೆಯದಲ್ಲಿ ಇಹಲೋಕ ತ್ಯಜಿಸಿದ ಜನಪ್ರಿಯ ನಟ

TV Actor: ಕಾಡಿದ ಕ್ಯಾನ್ಸರ್ 45ರ ಹರೆಯದಲ್ಲಿ ಇಹಲೋಕ ತ್ಯಜಿಸಿದ ಜನಪ್ರಿಯ ನಟ

Stock Market: ಷೇರುಪೇಟೆ ಸೂಚ್ಯಂಕ, ನಿಫ್ಟಿ ಜಿಗಿತ; ಲಾಭ-ನಷ್ಟ ಕಂಡ ಷೇರು ಯಾವುದು?

Stock Market: ಷೇರುಪೇಟೆ ಸೂಚ್ಯಂಕ, ನಿಫ್ಟಿ ಜಿಗಿತ; ಲಾಭ-ನಷ್ಟ ಕಂಡ ಷೇರು ಯಾವುದು?

1-raga

UP; ಹಿಂಸಾಚಾರ ಪೀಡಿತ ಸಂಭಾಲ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನಿಯೋಗಕ್ಕೆ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-104

Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!

fadnavis

Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ

1-raga

UP; ಹಿಂಸಾಚಾರ ಪೀಡಿತ ಸಂಭಾಲ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನಿಯೋಗಕ್ಕೆ ತಡೆ

PM Modi

Navy Day; ನೌಕಾಪಡೆಯ ಬದ್ಧತೆಯಿಂದ ದೇಶದ ಸುರಕ್ಷತೆ, ಸಮೃದ್ಧಿ ಖಾತ್ರಿ: ಪ್ರಧಾನಿ ಮೋದಿ

accident

Kerala; ಅಯ್ಯಪ್ಪ ಭಕ್ತರ ಬಸ್ ಅಪಘಾ*ತ: ಓರ್ವ ಮೃ*ತ್ಯು, 19 ಮಂದಿಗೆ ಗಾಯ

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

4

Subramanya: ಸಿದ್ಧಗೊಳ್ಳುತ್ತಿವೆ ಬೆತ್ತದ ತೇರು

1-ckm

Thirthahalli: ಡಿ.7 ರಂದು 18ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ, ಜಾತ್ರ ಮಹೋತ್ಸವ

3

Gundlupete: ಟಿಪ್ಪರ್ ಹರಿದು ಕೇರಳ ಮೂಲದ ಬೈಕ್ ಸವಾರನ‌ ಕಾಲು ನಜ್ಜುಗುಜ್ಜು

2

Belthangady ಕೊಳಚೆ ಮತ್ತೆ ಸೋಮಾವತಿಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.