Extortion Case: 1ಕೋಟಿ ಸುಲಿಗೆ ಆರೋಪ, ನೂತನ ಸಂಸದ ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
Team Udayavani, Jun 11, 2024, 8:39 AM IST
ಬಿಹಾರ: ಬಿಹಾರದಿಂದ ಹೊಸದಾಗಿ ಚುನಾಯಿತರಾಗಿರುವ ಸಂಸದ ಪೂರ್ಣಿಯಾ ರಾಜೇಶ್ ರಂಜನ್, ಅಲಿಯಾಸ್ ಪಪ್ಪು ಯಾದವ್ ವಿರುದ್ಧ ಹಣ ಸುಲಿಗೆ, ಜೀವ ಬೆದರಿಕೆ ಆರೋಪದ ಮೇಲೆ ಸೋಮವಾರ ಪ್ರಕರಣ ದಾಖಲಿಸಲಾಗಿದೆ.
ಎಫ್‌ಐಆರ್‌ನಲ್ಲಿ ಪಪ್ಪು ಯಾದವ್ ಅವರು ಉದ್ಯಮಿಯೊಬ್ಬರಿಂದ 1 ಕೋಟಿ ರೂಪಾಯಿ ಸುಲಿಗೆಗೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಸುಲಿಗೆ ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಉದ್ಯಮಿಗೆ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ದೂರು ನೀಡಿರುವ ಉದ್ಯಮಿ ಪೂರ್ಣಿಯಾದಲ್ಲಿ ಪೀಠೋಪಕರಣ ವ್ಯಾಪಾರ ಮಾಡುತ್ತಾರೆ. ಜೂನ್ 4 ರಂದು ಮತ ಎಣಿಕೆ ವೇಳೆ ಪಪ್ಪು ಯಾದವ್ ತನ್ನ ನಿವಾಸಕ್ಕೆ ಕರೆ ಮಾಡಿ 1 ಕೋಟಿ ನೀಡುವಂತೆ ಕೇಳಿದ್ದರು ಎಂದು ಉದ್ಯಮಿ ಲಿಖಿತ ಅರ್ಜಿಯಲ್ಲಿ ತಿಳಿಸಿದ್ದಾರೆ. 1 ಕೋಟಿ ಕೊಡದಿದ್ದರೆ ಕೊಲೆ ಮಾಡಲಾಗುವುದು. ಮುಂದಿನ 5 ವರ್ಷಗಳ ಕಾಲ ಶಾಂತಿಯುತವಾಗಿ ಬದುಕಬೇಕಾದರೆ ಹಣ ಪಾವತಿಸಬೇಕು ಇಲ್ಲವಾದರೆ ಪೂರ್ಣಿಯವರನ್ನು ಬಿಡಬೇಕು ಎಂದು ಬೆದರಿಕೆ ಹಾಕಿದ್ದಾರೆ ಎಂದು ದೂರು ದಾಖಲಾಗಿದೆ.
ಉದ್ಯಮಿಯಿಂದ 1 ಕೋಟಿ ರೂ. ಬೇಡಿಕೆ:
ಪೊಲೀಸರಿಗೆ ದೂರು ನೀಡಿದ ಉದ್ಯಮಿ, ಏಪ್ರಿಲ್ 2, 2021 ರಂದು ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಅವರಿಂದ 10 ಲಕ್ಷ ರೂಪಾಯಿ ಕೊಡುವಂತೆ ಬೇಡಿಕೆಯಿಟ್ಟಿದ್ದರು. ಇದಲ್ಲದೆ, 2023 ರಲ್ಲಿ ದುರ್ಗಾ ಪೂಜೆಯ ಸಮಯದಲ್ಲಿ, ವಾಟ್ಸಾಪ್ ಕರೆಯಲ್ಲಿ ಬೆದರಿಕೆ ಮತ್ತು ನಿಂದನೆಯೊಂದಿಗೆ 15 ಲಕ್ಷ ರೂಪಾಯಿ ಮತ್ತು ಎರಡು ಸೋಫಾ ಸೆಟ್‌ಗಳನ್ನು ಕೇಳಿದ್ದರು ಎಂದು ಉದ್ಯಮಿ ಹೇಳಿದ್ದಾರೆ. ದೂರಿನ ಆಧಾರದ ಮೇಲೆ, ಸಂಸದ ಪಪ್ಪು ಯಾದವ್ ಮತ್ತು ಅವರ ಆಪ್ತ ಅಮಿತ್ ಯಾದವ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಕಲಂ 385/504/506/34 ರ ಅಡಿಯಲ್ಲಿ ಪೂರ್ಣಿಯ ಮುಫಾಸಿಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿ ಸಂಸದ ಪಪ್ಪು ಯಾದವ್ ಪ್ರತಿಕ್ರಿಯೆ ನೀಡಿದ್ದು ನನ್ನ ಏಳಿಗೆ ಸಹಿಸಲಾಗದೆ ನನ್ನ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ ಅಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿ ಕೂಲಂಕುಷವಾಗಿ ತನಿಖೆ ನಡೆಯಬೇಕು ಪೊಲೀಸರ ತನಿಖೆಗೆ ತನ್ನ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿಕೊಂಡಿದ್ದು ತಪ್ಪಿತಸ್ಥರು ಯಾರೆಂದು ಜನತೆಗೆ ಗೊತ್ತಾಗಬೇಕು ಎಂದು ಹೇಳಿದ್ದಾರೆ.
ಪಪ್ಪು ಯಾದವ್ ಇತ್ತೀಚೆಗಷ್ಟೇ ಪೂರ್ಣಿಯಾ ಕ್ಷೇತ್ರದಿಂದ ಗೆದ್ದು ಸಂಸದರಾಗಿದ್ದು, ಸಂಸದರಾದ ತಕ್ಷಣ ಅವರ ವಿರುದ್ಧ ಗಂಭೀರ ಆರೋಪ ಮಾಡಲಾಗಿತ್ತು. ಪಪ್ಪು ಯಾದವ್ ಅವರು ಪೂರ್ಣಿಯಾದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದರು. ಇದರಲ್ಲಿ ಅವರು 5.67 ಲಕ್ಷಕ್ಕೂ ಹೆಚ್ಚು ಮತಗಳನ್ನು ಪಡೆದರೆ, ಜೆಡಿಯು ಅಭ್ಯರ್ಥಿ 5.43 ಲಕ್ಷ ಮತಗಳನ್ನು ಪಡೆದರು. ಆರ್‌ಜೆಡಿಯಿಂದ ಚುನಾವಣೆಗೆ ಸ್ಪರ್ಧಿಸಿದ್ದ ಬಿಮಾ ಭಾರತಿ ಅವರು ಇಲ್ಲಿಂದ ಕೇವಲ 27,120 ಮತಗಳನ್ನು ಗಳಿಸಲು ಸಾಧ್ಯವಾಯಿತು.
ಇದನ್ನೂ ಓದಿ: Horoscope: ಹೊಟೇಲ್ ಉದ್ಯಮಿಗಳಿಗೆ ಆದಾಯ ವೃದ್ಧಿಯಾಗಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.