Actor Darshan: ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿ 10 ಮಂದಿ ಬಂಧನ
Team Udayavani, Jun 11, 2024, 10:20 AM IST
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಮೈಸೂರಿನಲ್ಲಿ ಪೊಲೀಸರು ದರ್ಶನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಕೊಲೆ ಪ್ರಕರಣದಲ್ಲಿ ಮೈಸೂರಿನಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ದರ್ಶನ್ ಸೇರಿದಂತೆ 10 ಮಂದಿಯನ್ನು ಪ್ರಕರಣ ಸಂಬಂಧ ಬಂಧಿಸಲಾಗಿದೆ. ವಿಜಯನಗರ ಎಸಿಪಿ ನೇತೃತ್ವದಲ್ಲಿ ಅವರನ್ನು ಬಂಧಿಸಲಾಗಿದೆ.
ಏನಿದು ಪ್ರಕರಣ?: ನಟ ದರ್ಶನ್ ಅವರಿಗೆ ಆತ್ಮೀಯವಾಗಿರುವ ನಟಿ ಪವಿತ್ರ ಗೌಡ ಅವರ ಫೋಟೋಗಳಿಗೆ ರೇಣುಕಾ ಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಆಶ್ಲೀಲವಾಗಿ ಕಮೆಂಟ್ ಮಾಡುತ್ತಿದ್ದ. ಇದಲ್ಲದೆ ಕೆಟ್ಟದಾಗಿ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ.
ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆಯಲಾಗಿತ್ತು. ಜೂ. 8ರಂದು ರಾತ್ರಿ ವಿನಯ್ ಎನ್ನುವವರ ಶೆಡ್ ಗೆ ಕರೆತಂದು ಬಲವಾಧ ಆಯುಧದಿಂದ ರೇಣುಕಾ ಅವರಿಗೆ ಹೊಡೆದು ಕೊಲೆಗೈದು, ಮೃತದೇಹನ್ನು ಮೋರಿಗೆ ಎಸೆಯಲಾಗಿತ್ತು. ಜೂ. 9ರಂದು ಮೋರಿಯಲ್ಲಿ ಬೀದಿ ನಾಯಿಗಳು ಮೃತದೇಹವನ್ನು ಎಳೆಯುತ್ತಿದ್ದನ್ನು ನೋಡಿ, ಪಕ್ಕದಲ್ಲಿದ್ದ ಅಪಾರ್ಟ್ ಮೆಂಟ್ ಭದ್ರತಾ ಸಿಬ್ಬಂದಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ದೇಹದ ಮೇಲಿನ ಗಾಯಗಳನ್ನು ಗುರುತಿಸಿ ತನಿಖೆಯನ್ನು ಆರಂಭಿಸಲಾಗಿದೆ. ಇದು ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವುದು ಗೊತ್ತಾಗಿದೆ. ಈ ಬಗ್ಗೆ ಪೊಲೀಸರು ಪೋಷಕರಿಗೆ ಮಾಹಿತಿ ನೀಡಿದ್ದಾರೆ. ವಶಕ್ಕೆ ಪಡೆದ ನಾಲ್ವರು ಆರೋಪಿಗಳು ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ಮಾಡಿರುವುದಾಗಿ ಆರೋಪಿಗಳು ವಿಚಾರಣೆಯಲ್ಲಿ ಹೇಳಿರುವುದಾಗಿ ತಿಳಿದು ಬಂದಿದೆ.
ದರ್ಶನ್ ಸೇರಿದಂತೆ ನಾಲ್ವರು ರೇಣುಕಾ ಸ್ವಾಮಿಗೆ ಹಲ್ಲೆ ಮಾಡಿ ಕೊಲೆಗೈದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆ ಸಂದರ್ಭದಲ್ಲಿ ದರ್ಶನ್ ಅವರು ಸ್ಥಳದಲ್ಲೇ ಇದ್ದರು ಎನ್ನಲಾಗಿದೆ.
ಸದ್ಯ ದರ್ಶನ್ ಅವರನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ ಎನ್ನಲಾಗಿದೆ. ಕಾಮಾಕ್ಷಿ ಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.