ಕಬ್ಬಿನ ಬಾಕಿ ಹಣ ಬಡ್ಡಿ ಸಮೇತ ರೈತರಿಗೆ ಪಾವತಿಸಲು ಕ್ರಮ ಕೈಗೊಳ್ಳಿ: ಕುರುಬೂರು ಶಾಂತಕುಮಾರ
Team Udayavani, Jun 11, 2024, 12:36 PM IST
ಬೆಳಗಾವಿ: ಪ್ರಸಕ್ತ ಸಾಲಿನ ಕಬ್ಬಿನ ಎಫ್ ಆರ್ ಪಿ ದರ 10.25 ಇಳುವರಿಗೆ 3400 ನ್ಯಾಯ ಸಮ್ಮತವಲ್ಲ. ಬೆಳಗಾವಿಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ ಆರೋಪ. ಕಬ್ಬಿನ ಬಾಕಿ ಬಡ್ಡಿ ಹಣ ಸಮೇತ ರೈತರಿಗೆ ಕೂಡಲೇ ಪಾವತಿಸಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯ.
ಬರಗಾಲದಿಂದ ಕಬ್ಬಿನ ಇಳುವರಿ ಶೇಕಡ 30ರಷ್ಟು ಕಡಿಮೆಯಾಗಿರುವಾಗಲೇ ಉತ್ಪಾದನಾ ವೆಚ್ಚಕ್ಕಿಂತ ಕಡಿಮೆಯಾಗಿ ಕಬ್ಬಿನ ಎಪ್ಆರ್ಪಿ ಬೆಲೆ ನಿಗದಿ ಮಾಡಿರುವುದು ನ್ಯಾಯ ಸಮ್ಮತವಲ್ಲ. ಸಕ್ಕರೆ ಕಾರ್ಖಾನೆಗಳು ಇಳುವರಿ ಕಡಿಮೆ ತೋರಿಸುವ ಕಾರಣ ಹೆಚ್ಚಿನ ಬೆಲೆ ಸಿಗಲು ಸಾಧ್ಯವಾಗುತ್ತಿಲ್ಲ. ಕೇಂದ್ರ ಸರ್ಕಾರ ರೈತರ ಗಾಯದ ಮೇಲೆ ತುಪ್ಪ ಸವರಿ ಬರೆ ಎಳೆದಿದೆ.
ರಾಜ್ಯ ಸರ್ಕಾರ ರೈತರಿಗೆ ನೀಡುವ ಸವಲತ್ತುಗಳನ್ನು ಆಪ್ ಗಳ ಮೂಲಕ ವಿತರಿಸುತ್ತಿದೆ. ಆದರೆ 25000 ಕೋಟಿ ಹಣಕಾಸಿನ ವೈವಾಟು ನಡೆಸುವ ಸಕ್ಕರೆ ಕಾರ್ಖಾನೆಗಳ.ವ್ಯವಹಾರ ಆಪ್ ಮೂಲಕ ಏಕೆ ಮಾಡುತ್ತಿಲ್ಲ ಎಂದು ಪ್ರಶ್ನೆ.
ಸಕ್ಕರೆ ಇಳುವರಿ ಸಂದೇಶ ನೀಡುವ ಆಪ್ ನ್ನು ಸಿದ್ದಗೊಳಿಸ ಲಾಗಿದ್ದರೂ. ರಾಜ್ಯ ಸರ್ಕಾರ ಯಾಕೆ ಜಾರಿ ಮಾಡಿಲ್ಲ. ಸಕ್ಕರೆ ಕಾರ್ಖಾನೆಗಳ ಒತ್ತಡಕ್ಕೆ ಮಣಿದು ರೈತರಿಗೆ ವ್ಯವಸ್ಥಿತ ವಂಚನೆ ನಡೆಸಲು ಸಹಕಾರ ನೀಡುತ್ತಿದೆ ಎಂದು ಆರೋಪ.
ಕಳೆದ ಎಂಟು ತಿಂಗಳಿಂದ ಸಕ್ಕರೆ ಕಾರ್ಖಾನೆಗಳು ಸುಮಾರು 700 ಕೋಟಿ ರೂ ಕಬ್ಬಿನ ಹಣ ರೈತರಿಗೆ ಪಾವತಿಸಿಲ್ಲ. ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇದ್ದರೆ ಇಂಥ ಕಾರ್ಖಾನೆಗಳನ್ನು ಸರ್ಕಾರ ಮುಟ್ಟುಗೂಲು ಹಾಕಿಕೊಳ್ಳಲಿ.
ಕೇಂದ್ರ ಸರ್ಕಾರ ಬರ. ಮಳೆಹಾನಿ. ಅತಿವೃಷ್ಟಿ ಹಾನಿ ಮಳೆ ವಿಪತ್ತು ನಷ್ಟ ಪರಿಹಾರದ. ಎನ್ ಡಿಆರ್ಎಫ್ ಮಾನದಂಡ ತಿದ್ದುಪಡಿ ಮಾಡಿ ಬೆಳೆ ನಷ್ಟದ ಸಂಪೂರ್ಣ ಹಣ ನೀಡಬೇಕು. ಇಲ್ಲದಿದ್ದರೆ ಬರ. ಅತಿವೃಷ್ಟಿ ಮಳೆ ಹಾನಿ. ಒಳಗಾದ ರೈತರ ಬೆಳೆ ಸಾಲ ಸಂಪೂರ್ಣ ಮನ್ನ ಮಾಡುವ ನೀತಿ ಜಾರಿಗೆ ತರಬೇಕು ಎಂದು ಒತ್ತಾಯ ಮಾಡಿದ್ದಾರೆ.
ಇದನ್ನೂ ಓದಿ: Chitradurga: 1 ವರ್ಷದ ಹಿಂದೆ ಮದುವೆಯಾಗಿದ್ದ ರೇಣುಕಾಸ್ವಾಮಿ… ಪತ್ನಿ 5 ತಿಂಗಳ ಗರ್ಭಿಣಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.