![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 11, 2024, 3:01 PM IST
ಮೈಸೂರು: ಎರಡು ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ 38 ವರ್ಷದ ‘ಅಶ್ವತ್ಥಾಮ’ ಆನೆಯು ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ ಜೂ. 11ರ ಮಂಗಳವಾರ ಮೃತಪಟ್ಟಿದೆ.
ಹುಣಸೂರು- ಪಿರಿಯಾಪಟ್ಟಣ ತಾಲೂಕಿನ ಗಡಿ ಭಾಗದ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದ ಅಶ್ವತ್ಥಾಮ ಮೇವು ಅರಸಿ ಕಾಡಿಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ.
ಸೋಲಾರ್ ಬೇಲಿ ಮೇಲೆ ವಿದ್ಯುತ್ ತಂತಿಯು ಬಿದ್ದಿದ್ದರಿಂದ ವಿದ್ಯುತ್ ಆಘಾತದಿಂದ ಅಶ್ವತ್ಥಾಮ ಮೃತಪಟ್ಟಿದೆ ಎಂದು ಮೂಲಗಳು ತಿಳಿಸಿದ್ದರೆ, ಇಲಾಖೆ ಮೂಲಗಳು ಅನಾರೋಗ್ಯದಿಂದ ಮೃತಪಟ್ಟಿದೆ ಎಂದು ಹೇಳಿವೆ.
2017ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಅಶ್ವತ್ಥಾಮನನ್ನು ಸೆರೆ ಹಿಡಿಯಲಾಗಿತ್ತು. ಶಾಂತ ಹಾಗೂ ಗಾಂಭೀರ್ಯ ಸ್ವಭಾವಕ್ಕೆ ಹೆಸರಾಗಿದ್ದ ಅದನ್ನು ನಾಲ್ಕು ವರ್ಷದಲ್ಲಿಯೇ 2021ರ ದಸರೆಗೆ ಕರೆತರಲಾಗಿತ್ತು. ಅದಕ್ಕೆ ನಡಿಗೆ ತಾಲೀಮು ಸೇರಿದಂತೆ ವಿವಿಧ ತಾಲೀಮನ್ನು ನೀಡಲಾಗಿತ್ತು.
2022ರ ದಸರೆಯಲ್ಲಿ ಪಾಲ್ಗೊಂಡು ಗಮನ ಸೆಳೆದಿತ್ತು. ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಿರಲಿಲ್ಲ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.