Bengaluru: ಮೆಟ್ರೋ ಹಳಿಗೆ ಜಿಗಿದ ಯುವಕ!


Team Udayavani, Jun 11, 2024, 3:02 PM IST

Bengaluru: ಮೆಟ್ರೋ ಹಳಿಗೆ ಜಿಗಿದ ಯುವಕ!

ಬೆಂಗಳೂರು: ಮೆಟ್ರೋ ರೈಲು ಅಡಿಗೆ ಬಿದ್ದು ಪ್ರಯಾಣಿಕನೊಬ್ಬ ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಹೊಸಹಳ್ಳಿ ನಿಲ್ದಾಣದಲ್ಲಿ ಸೋಮವಾರ ರಾತ್ರಿ 8.56ರ ವೇಳೆಯಲ್ಲಿ ಘಟನೆ ನಡೆದಿದೆ.

ಬಸವೇಶ್ವರ ನಗರ ನಿವಾಸಿ ಸಾಗರ್‌(34) ಮಾನಸಿಕ ಖನ್ನತೆಗೆ ಒಳಗಾಗಿ ಆತ್ಮಹತ್ಯೆ ಯತ್ನಿಸಿದ್ದಾನೆ. ಹೊಸಹಳ್ಳಿ ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಿದ್ದ ಯುವಕ ರೈಲು ಬರುವುದನ್ನು ನೋಡಿ ಹಳಿಗೆ ಜಿಗಿದಿದ್ದಾನೆ. ಆಗ ಭದ್ರತಾ ಸಿಬ್ಬಂದಿ ಪವರ್‌ ಆಫ್ ಮಾಡಿ ಯುವಕನನ್ನು ಮೇಲಕ್ಕೆ ಎತ್ತಿದ್ದಾರೆ. ಎಂಜಿನಿಯರಿಂಗ್‌ ವ್ಯಾಸಂಗ ಅಪೂರ್ಣಗೊಳಿಸಿ ರುವ ಸಾಗರ್‌ ಕೆಲ ದಿನಗಳಿಂದ ಮಾನಸಿಕವಾಗಿ ನೊಂದಿದ್ದ ಎನ್ನಲಾಗಿದೆ.

ಆತ್ಮಹತ್ಯೆಗೆ ಪ್ರಯತ್ನಿಸಿದ ಪ್ರಯಾಣಿಕನ ತಲೆಗೆ ಸಣ್ಣಪುಟ್ಟ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಜಯನಗರ ಉಪವಿಭಾಗದ ಎಸಿಪಿ ಚಂದನ್‌, ಗೋವಿಂದರಾಜನಗರ ಠಾಣೆಯಲ್ಲಿ ಇನ್ಸ್‌ಪೆಕ್ಟರ್‌ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿತು. ಘಟನೆ ಹಿನ್ನೆಲೆಯಲ್ಲಿ ನೇರಳೆ ಮಾರ್ಗದ ಮೆಟ್ರೋ ರೈಲು ಸೇವೆಯಲ್ಲಿ 1 ಗಂಟೆಗೂ ಹೆಚ್ಚು ಕಾಲ ವ್ಯತ್ಯಯ ಉಂಟಾಗಿತ್ತು. ಆತ್ಮಹತ್ಯೆಯತ್ನದ ಕಾರಣದಿಂದ ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ರೈಲುಗಳು ಕೆಲ ಕಾಲ ನಿಂತಿದ್ದವು. ಪ್ರಯಾಣಿಕರು ಪರದಾಡುವಂತೆ ಆಯಿತು. ರೈಲು ಮೈಸೂರು ರಸ್ತೆ ನಿಲ್ದಾಣ ಮತ್ತು ಚಲ್ಲಘಟ್ಟ ಮೆಟ್ರೋ ರೈಲು ನಿಲ್ದಾಣದತ್ತ ತೆರಳುತ್ತಿತ್ತು. ಘಟನೆ ಬಳಿಕ ಪರ್ಪಲ್‌ ಲೈನ್‌ನಲ್ಲಿ ರೈಲು ಸೇವೆಗಳನ್ನು ರಾತ್ರಿ 9.30ರ ವೇಳೆ ಪುನರಾರಂಭಿಸಲಾಯಿತು ಎಂದು ಮೆಟ್ರೋ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಕೆಲವರು ರೈಲು ಪ್ರಾರಂಭ ತಡವಾದ್ದರಿಂದ ಮೆಜೆಸ್ಟಿಕ್‌ನಲ್ಲಿದ್ದ ಪ್ರಯಾಣಿಕರು ಬಿಎಂಟಿಸಿ ಬಸ್‌ ನಿಲ್ದಾಣಕ್ಕೆ ಬಂದು ಅಲ್ಲಿಂದ ತೆರಳಿದರು.

ಅತ್ತಿಗುಪ್ಪೆ ನಿಲ್ದಾಣದಲ್ಲೂ ನಡೆದಿತ್ತು ಆತ್ಮಹತ್ಯೆ ಘಟನೆ: ಚಲಿಸುತ್ತಿದ್ದ ಮೆಟ್ರೋ ರೈಲಿಗೆ ಸಿಲುಕಿ ಕಾನೂನು ವಿದ್ಯಾರ್ಥಿಯೊಬ್ಬ ಧ್ರುವ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಕಳೆದ ಮಾ.21ರಂದು ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ನಡೆದಿತ್ತು. ಮೆಟ್ರೋ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ವಿದ್ಯಾರ್ಥಿ ಹಳಿಗೆ ಧುಮುಕಿದ್ದು, ದೇಹ ತುಂಡಾಗಿತ್ತು. ವಿದ್ಯಾರ್ಥಿಯ ಮೃತದೇಹವನ್ನು ಹೊರತೆಗೆಯಲು ಅಧಿಕಾರಿಗಳು ಹರಸಾಹಸ ಪಟ್ಟಿದ್ದರು. ಘಟನೆಯಿಂದ ಚಲ್ಲಘಟ್ಟದಿಂದ ಮೆಜೆಸ್ಟಿಕ್‌ ಕಡೆಗೆ ಸಂಚಾರ ಮಾಡುತ್ತಿದ್ದ ಮೆಟ್ರೋ ರೈಲುಗಳಲ್ಲಿ ವ್ಯತ್ಯಯವುಂಟಾಗಿತ್ತು. ಇದಕ್ಕೂ ಮೊದಲು ಜಾಲಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ಕೇರಳ ಮೂಲದ ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದ.

ಟಾಪ್ ನ್ಯೂಸ್

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

6-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ: ಇಬ್ಬರು ಆರೋಪಿಗಳ ಸೆರೆ‌, 60 ಫೋನ್‌ ಜಪ್ತಿ

5-bng

Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.