Vijayapura; ಖಾಸಗಿ ಆಸ್ಪತ್ರೆಗಳಿಗೆ ಕೆಪಿಎಂಇ ಕಾಯ್ದೆಯಡಿ ನೋಂದಣಿ, ಫಲಕ ಅಳವಡಿಕೆ ಕಡ್ಡಾಯ
Team Udayavani, Jun 11, 2024, 6:06 PM IST
ವಿಜಯಪುರ: ನಕಲಿ ವೈದ್ಯರ ಹಾವಳಿ ತಡೆಗಾಗಿ ಜಿಲ್ಲೆಯ ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್ ಗಳು ಕಡ್ಡಾಯವಾಗಿ ಕೆಪಿಎಂಇ (ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ) ಕಾಯ್ದೆ ಅನ್ವಯ ನೋಂದಣಿ ಮಾಡಿಸಬೇಕು. ಆಸ್ಪತ್ರೆಯಲ್ಲಿ ನೋಂದಣಿ ಸಂಖ್ಯೆಯ ಸಹಿತ ಸಾರ್ವಜನಿಕರಿಗೆ ಕಾಣುವಂತೆ ಫಲಕ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಭೂಬಾಲನ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ಕೆಪಿಎಂಇ ಜಿಲ್ಲಾ ನೋಂದಣಿ ಮತ್ತು ಕುಂದುಕೊರತೆ ನಿವಾರಣಾ ಪ್ರಾಧಿಕಾರದ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಖಾಸಗಿ ಆಸ್ಪತ್ರೆ, ಕ್ಲಿನಿಕ್‍ಗಳು, ಪ್ರಯೋಗಾಲಯ, ನರ್ಸಿಂಗ್ ಹೋಂಗಳು ಕೆಪಿಎಂಇ ಕಾಯ್ದೆ ಅಡಿಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯ ಎಂದು ನಕಲಿ ವೈದ್ಯರ ಹಾವಳಿ ತಡೆಗಟ್ಟುವ ಉದ್ದೇಶದಿಂದ ಕಡ್ಡಾಯವಾಗಿ ಎಲ್ಲರಿಗೂ ಕಾಣುವ ರೀತಿಯಲ್ಲಿ ನೋಂದಣಿ ಫಲಕ ಅಳವಡಿಸಬೇಕು ಎಂದು ಸೂಚಿಸಿದರು.
ಅಲೋಪತಿ ಆಸ್ಪತ್ರೆಗಳು ಆಕಾಶ ನೀಲಿ ಬಣ್ಣದ, ಆಯುರ್ವೇದಿಕ್ ಆಸ್ಪತ್ರೆಗಳು ತಿಳಿ ಹಸಿರು ಬಣ್ಣದ ಫಲಕಗಳನ್ನು ಅಳವಡಿಸಬೇಕು. ಜಿಲ್ಲೆಯಲ್ಲಿ ಈ ವರೆಗೆ ನೋಂದಣಿಯಾಗದೆ ಇರುವ ಸಂಸ್ಥೆಗಳು ಒಂದು ವಾರದ ಒಳಗೆ ನೋಂದಣಿ ಮಾಡಿಸಬೇಕು ಎಂದು ಸೂಚಿಸಿದರು.
ನವೀಕರಣ ಮಾಡಿಸುವುದಕ್ಕೂ ಒಂದು ವಾರದ ಅವಕಾಶ ನೀಡಲಾಗಿದೆ. ತಪ್ಪಿದಲ್ಲಿ ಕೆಪಿಎಂಪಿ ಕಾಯ್ದೆ-2018 ರ ಅನ್ವಯ ಕಾನೂನು ಕ್ರಮ ಜರುಗಿಸುವುದಾಗಿ ಭೂಬಾಲನ್ ಸಭೆಯಲ್ಲಿದ್ದ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ನಕಲಿ ವೈದ್ಯರು ಮಾತ್ರವಲ್ಲದೇ ನಕಲಿ ಕ್ಲಿನಿಕ್, ನಕಲಿ ಔಷಧಾಲಯ ಕಂಡು ಬಂದರೂ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಆಯಾ ತಾಲೂಕ ವ್ಯಾಪ್ತಿಯ ತಹಶೀಲ್ದಾರ, ಪೊಲೀಸ್ ಇಲಾಖೆ ಅಧಿಕಾರಿಗಳು ಜೊತೆ ಸಮನ್ವಯದಿಂದ ನಕಲಿ ಆಸ್ಪತ್ರೆ, ವೈದ್ಯಕೀಯ ಸೇವೆ ನೀಡುವ ಸಂಸ್ಥೆಗಳ ಮೇಲೆ ದಾಳಿ ನಡೆಸಿ, ದಂಡ ಹಾಗೂ ಕಾನೂನು ಕ್ರಮ ಜರಗಿಸಬೇಕು ಎಂದು ಸೂಚಿಸಿದರು.
ವಿಜಯಪುರ ಜಿಲ್ಲೆಯ ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ ಸೇರಿದಂತೆ ಇತರರು ಸಭೆಯಲ್ಲಿ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.