RenukaSwamy Case: ನಟ ದರ್ಶನ್, ಪವಿತ್ರಾ ಸೇರಿ ಎಲ್ಲಾ ಆರೋಪಿಗಳು ಪೊಲೀಸ್ ಕಸ್ಟಡಿಗೆ
Team Udayavani, Jun 11, 2024, 7:34 PM IST
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ದರ್ಶನ್ ಸೇರಿ 13 ಆರೋಪಿಗಳನ್ನು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಮಂಗಳವಾರ ಬೆಳಗ್ಗೆ ಮೈಸೂರಿನಲ್ಲಿ ದರ್ಶನ್ ಅವರನ್ನು ಬಂಧಿಸಿರುವ ಪೊಲೀಸರು ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಬಳಿಕ ವೈದ್ಯಕೀಯ ಪರೀಕ್ಷೆ ನಡೆಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಹಾಜರುಪಡಿಸಿದ್ದಾರೆ.
ನಟ ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ಆಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕಾಗಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆತಂದು ಅಲ್ಲಿ ಶೆಡ್ ವೊಂದರಲ್ಲಿ ಹಲ್ಲೆ ಮಾಡಿ, ಕೊಲೆಗೈದು ಮೃತದೇಹವನ್ನು ಮೋರಿಗೆ ಎಸೆಯಲಾಗಿದೆ ಎಂದು ಆರೋಪಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಟ ದರ್ಶನ್, ಸ್ನೇಹಿತೆ ಪವಿತ್ರಾ ಗೌಡ ಸೇರಿ ಒಟ್ಟು 13 ಆರೋಪಿಗಳನ್ನು ಬಂಧಿಸಿದ್ದಾರೆ.
“ಕೊಲೆಯಾಗಿರುವ 33 ವರ್ಷದ ವ್ಯಕ್ತಿಯನ್ನು ರೇಣುಕಾ ಸ್ವಾಮಿ ಎಂದು ಗುರುತಿಸಲಾಗಿದೆ, ಮೊದಲ ನೋಟದಲ್ಲಿ ಮೃತರು ದರ್ಶನ್ ಅವರ ಗೆಳತಿಗೆ ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸಿದ್ದಾರೆಂದು ತೋರುತ್ತದೆ” ಎಂದು ಬೆಂಗಳೂರು ಪೊಲೀಸ್ ಮುಖ್ಯಸ್ಥ ಬಿ ದಯಾನಂದ್ ಹೇಳಿದ್ದಾರೆ.
ಬೀದಿ ನಾಯಿಗಳು ಶವವನ್ನು ಚರಂಡಿಯಿಂದ ಎಳೆದುಕೊಂಡು ಹೋಗುತ್ತಿರುವುದನ್ನು ಕಂಡ ನಿವಾಸಿಗಳು ಕೊಲೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೇಹದಲ್ಲಿ ಗಾಯದ ಗುರುತುಗಳಿದ್ದವು. ತನಿಖೆ ವೇಳೆ ಪೊಲೀಸರು ಕೆಲವು ಶಂಕಿತರನ್ನು ಬಂಧಿಸಿದ್ದರು. ಅವರು ನೀಡಿದ ಮಾಹಿತಿಯ ಮೇರೆಗೆ ನಟ ದರ್ಶನ್ ಬಂಧನವಾಗಿದೆ.
“ಈ ಪ್ರಕರಣದಲ್ಲಿ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ದರ್ಶನ್ ಹೆಸರನ್ನು ಬಹಿರಂಗಪಡಿಸಿದ್ದಾರೆ. ಇದಾದ ನಂತರ ಪೊಲೀಸರು ಅವರನ್ನು ತನಿಖೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ” ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್‌ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.