BJP ಹೊಸ ಅಧ್ಯಕ್ಷರು ಸದ್ಯಕ್ಕಿಲ್ಲ: ಮೂಲಗಳು
ಪಕ್ಷದ ಚುನಾವಣೆವರೆಗೂ ನಡ್ಡಾ ಮುಂದುವರಿಕೆ
Team Udayavani, Jun 12, 2024, 6:45 AM IST
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಅವರೇ ಮುಂದುವರಿಯಲಿದ್ದಾರೆ. ಪಕ್ಷದಲ್ಲಿ ಆಂತರಿಕ ಚುನಾವಣೆವರೆಗೂ ಯಾವುದೇ ಬದಲಾವಣೆ ತರದಿರಲು ಪಕ್ಷದ ಸಂಸದೀಯ ಮಂಡಳಿ ನಿರ್ಧರಿಸಿದೆ ಎನ್ನಲಾಗಿದೆ.
ಅಧ್ಯಕ್ಷರ ಬದಲಾವಣೆಗೂ ಮುನ್ನ ರಾಜ್ಯಗಳಲ್ಲಿ ಪಕ್ಷದ ಸಂಘಟನೆ, ರಾಜ್ಯ ಪದಾಧಿಕಾರಿಗಳ ನೇಮಕ ಹಾಗೂ ಹೊಸ ದಾಗಿ ಸದಸ್ಯರನ್ನು ನೇಮಕ ಮಾಡುವ ಕಾರ್ಯ ಕೈಗೊಳ್ಳಲು ನಿರ್ಧರಿಸಲಾಗಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಜೆ.ಪಿ.ನಡ್ಡಾ ಅವರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ. ಅಲ್ಲದೇ ಪಕ್ಷದ ಅಧ್ಯಕ್ಷರಾಗಿ ಅವರ ಅವಧಿ ಜೂ.30ಕ್ಕೆ ಮುಕ್ತಾಯವಾಗಲಿದೆ. ಆದರೆ ಚುನಾವಣೆವರೆಗೂ ಅವರನ್ನೇ ಮುಂದುವರೆಸಲು ತೀರ್ಮಾನಿಸಲಾ ಗಿದೆ ಎನ್ನಲಾಗಿದೆ. ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶಗಳನ್ನು ಹೆಚ್ಚು ಗಮನಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮೂಲ ಗಳು ತಿಳಿಸಿವೆ.
ಚುನಾವಣಾ ಫಲಿತಾಂಶದಲ್ಲಿ ಹಿನ್ನಡೆ: ಇತ್ತೀಚೆಗೆ ಮುಕ್ತಾಯವಾದ ಲೋಕಸಭೆ ಚುನಾವಣೆಯಲ್ಲಿ ಆದರೆ ಬಿಜೆಪಿ 240 ಸ್ಥಾನಗಳನ್ನಷ್ಟೇ ಗೆಲ್ಲಲು ಶಕ್ತವಾಯಿತು. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಪಕ್ಷವನ್ನು ಸಂಘಟಿಸಲು ಪಕ್ಷದ ಹಿರಿಯ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.