Manipal ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮಾನವ ಎದೆಹಾಲು ನಿಧಿ ಉದ್ಘಾಟನೆ
Team Udayavani, Jun 11, 2024, 11:51 PM IST
ಮಣಿಪಾಲ: ಉಡುಪಿಯ ಮೊದಲ ಮಾನವ ಎದೆಹಾಲು ನಿಧಿ (ಹ್ಯೂಮನ್ ಬ್ರೆಸ್ಟ್ ಮಿಲ್ಕ್ ಬ್ಯಾಂಕ್) “ಮಣಿಪಾಲ ಮಾತೃ-ಅಮೃತ್ ಮಿಲ್ಕ್ ಬ್ಯಾಂಕ್’ ಅನ್ನು ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್. ಉದ್ಘಾಟಿಸಿದರು.
ತಾಯಿಯ ಎದೆ ಹಾಲು ಶಿಶುಗಳಿಗೆ ಅಮೃತ -ಔಷಧವಿದ್ದಂತೆ. ನವಜಾತ ಶಿಶುಗಳು ತಮ್ಮ ಆರಂಭಿಕ ದಿನಗಳಲ್ಲಿ ಎದೆಹಾಲನ್ನು ಪಡೆಯುವುದು ನಿರ್ಣಾಯಕವಾಗಿದೆ. ಇದು ಶಿಶುಗಳ ಆರೋಗ್ಯವನ್ನು ಗಮನಾರ್ಹವಾಗಿ ಸುಧಾರಿಸುತ್ತದೆ ಎಂದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ| ಐ.ಪಿ. ಗಡಾದ್, ನವಜಾತಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥೆ ಡಾ| ಶೀಲಾ ಎಸ್. ಮಥಾಯಿ ಉಪಸ್ಥಿತರಿದ್ದರು. ಮಣಿಪಾಲ ಕೆಎಂಸಿ ಡೀನ್ ಡಾ| ಪದ್ಮರಾಜ್ ಹೆಗ್ಡೆ ಸ್ವಾಗತಿಸಿ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್ ಶೆಟ್ಟಿ ವಂದಿಸಿದರು. ಡಾ| ಶ್ರುತಿ ಕೆ.ಭಾರದ್ವಾಜ್ ನಿರೂಪಿಸಿದರು.
ಮಿಲ್ಕ್ ಬ್ಯಾಂಕ್ ಜಿಲ್ಲೆಯಲ್ಲಿಯೇ ಮೊದಲನೆಯದ್ದು. ಇದು ಮಣಿಪಾಲದ ನವಜಾತಶಾಸ್ತ್ರ ವಿಭಾಗದಲ್ಲಿದ್ದು ನವಜಾತ ಶಿಶುಗಳಿಗೆ ತೀವ್ರ ನಿಗಾ ಘಟಕದ ಮೂಲಕ ಚಿಕಿತ್ಸೆ ನೀಡುತ್ತಿದೆ. ಹಲವಾರು ರಾಜ್ಯ, ಜಿಲ್ಲೆಗಳ ಅನಾರೋಗ್ಯ ಮತ್ತು ಪ್ರಸವಪೂರ್ವ ಶಿಶುಗಳಿಗೆ ಆರೈಕೆ ಪೂರೈಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.