Congress ಆಡಳಿತದಿಂದಾಗಿ ಮತಾಂಧ ಶಕ್ತಿಗಳ ವರ್ತನೆ ಅತಿರೇಕಕ್ಕೆ: ನಳಿನ್
ಬೋಳಿಯಾರು ಚೂರಿ ಇರಿತ ಪ್ರಕರಣ
Team Udayavani, Jun 12, 2024, 12:25 AM IST
ಮಂಗಳೂರು: ಬೊಳಿಯಾರ್ನಲ್ಲಿ ನಡೆದ ವಿಜಯೋತ್ಸವದಲ್ಲಿ ಭಾಗವಹಿಸಿದ ಇಬ್ಬರು ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವುದು ಖಂಡನೀಯ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಮತಾಂಧ ಶಕ್ತಿಗಳ ವರ್ತನೆ ಅತಿರೇಕಕ್ಕೆ ಹೋಗುತ್ತಿದೆ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಆರೋಪಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಮಸೀದಿ ಬಳಿ ಭಾರತ್ ಮಾತೆಗೆ ಜೈಕಾರ ಹಾಕಿದರೆಂಬ ಒಂದೇ ಕಾರಣಕ್ಕೆ ಹರೀಶ್ ಮತ್ತು ನಂದಕುಮಾರ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಈ ದೇಶದಲ್ಲಿ ಭಾರತ್ ಮಾತಾಕಿ ಜೈ ಹೇಳುವುದು ಅಪರಾಧವೇ? ಈ ಬಗ್ಗೆ ಮುಖ್ಯಮಂತ್ರಿ, ಗೃಹ ಸಚಿವರು ಉತ್ತರಿಸಬೇಕು ಎಂದು ಆಗ್ರಹಿಸಿದರು.ಈ ಪ್ರಕರಣದ ಹಿಂದಿರುವ ಎಲ್ಲ ದುಷ್ಟಶಕ್ತಿ ಗಳನ್ನು ಪತ್ತೆಹಚ್ಚಿ ಬಂಧಿಸಬೇಕು.
ಗಾಯಗೊಂಡವರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.ಬಿಜೆಪಿ ವಿಜಯೋತ್ಸವ ಸಂದರ್ಭ ಮಸೀದಿಯಲ್ಲಿ ಪ್ರಾರ್ಥನೆ ನಡೆಯುತ್ತಿದ್ದು, ಅಲ್ಲಿರುವ ಯುವಕರು ಈ ಘಟನೆಯಲ್ಲಿ ಶಾಮೀಲಾಗಿದ್ದಾರೆ ಎನ್ನಲಾಗುತ್ತಿದೆ. ಹಾಗಾದರೆ ಪ್ರಾರ್ಥನೆಗೆ ಬಂದವರಿಗೆ ಚೂರಿ ಸಿಕ್ಕಿದ್ದು ಹೇಗೆ? ಶಸ್ತ್ರಾಸ್ತ್ರ ಹೇಗೆ ಬಂದಿತು? ಗೃಹ ಸಚಿವರು ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದರು. ಶಾಸಕ ರಾಜೇಶ್ ನಾಯ್ಕ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
MUST WATCH
ಹೊಸ ಸೇರ್ಪಡೆ
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.