Vijayapura: ಬಕ್ರೀದ್ ಹಬ್ಬದ ಹಿನ್ನೆಲೆ… ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಜಿಲ್ಲಾಡಳಿತ
ಅಕ್ರಮವಾಗಿ ಜಾನುವಾರು ಸಾಗಿಸಿದರೆ ವಾಹನ ವರವಾನಿಗೆ ರದ್ದು
Team Udayavani, Jun 12, 2024, 4:45 PM IST
ವಿಜಯಪುರ: ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುವುದು ಕಂಡು ಬಂದಲ್ಲಿ ಕೂಡಲೇ ಕ್ರಮ ಕೈಗೊಳ್ಳಬೇಕು. ಅಕ್ರಮವಾಗಿ ಜಾನುವಾರು ಹತ್ಯೆ ಮಾಡುವವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಡಳಿತದ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ತಾಕೀತು ಮಾಡಿದೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ಸಾಗಾಟ ಹಾಗೂ ವಧೆ ತಡೆಗಟ್ಟುವ ಪೂರ್ವ ಸಿದ್ಧತೆ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಅನಧಿಕೃತವಾಗಿ ಜಾನುವಾರಗಳ ಸಾಗಾಟ ಮಾಡುವ ವಾಹನಗಳ ನೋಂದಣಿ ರದ್ದುಪಡಿಸುವ ಕುರಿತು ಕ್ರಮಕೈಗೊಳ್ಳಬೇಕು ಎಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
2020-21 ನೇ ಕರ್ನಾಟಕ ಅಧ್ಯಾದೇಶ ಸಂಖ್ಯೆ ಕರ್ನಾಟಕ ಜಾನುವಾರು ಹತ್ಯೆ ಪ್ರಭಂದಕ ಮತ್ತು ಸಂರಕ್ಷಣಾ ಅಧ್ಯಾದೇಶ ರನ್ವಯ ಎಲ್ಲಾ ವಯಸ್ಸಿನ ಆಕಳು, ಆಕಳು ಕರ, ಹೋರಿ, 13 ವರ್ಷದೊಳಗಿನ ಎಮ್ಮೆ ಕೋಣಗಳ ವಧೆ ಮಾಡುವಂತಿಲ್ಲ. ಜಿಲ್ಲೆಯಲ್ಲಿ ಸದರಿ ಕಾಯ್ದೆ ಉಲ್ಲಘನೆಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಅನಧಿಕೃತ ಜಾನುವಾರುಗಳ ಅಕ್ರಮ ಸಾಗಟು ತಡೆಗೆ ಜಿಲ್ಲೆಯ ಕನಮಡಿ, ಅರಕೇರಿ ಸಿದ್ಧಾಪುರ, ಯತ್ನಾಳ, ಧೂಳಖೇಡ, ಶಿರದೋಣ, ಅಗರಖೇಡ ಸೇರಿದಂತೆ ಜಿಲ್ಲೆಯ ಗಡಿಯಲ್ಲಿ ಅಗತ್ಯ ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ. ಹಬ್ಬದ ಹಿಂದಿನ 3 ದಿನಗಳು ಅಧಿಕಾರಿಗಳು ಕಟ್ಟುನಿಟ್ಟಾಗಿ ಎಲ್ಲಾ ವಾಹನಗಳನ್ನು ತಪಾಸಣೆ ಮಾಡಬೇಕು ಎಂದು ಸೂಚಿಸಿದರು.
ಬಕ್ರೀದ್ ಹಬ್ಬಕ್ಕೆ ಮೂರು ಮುನ್ನವೇ ನಗರಪಾಲಿಕೆ ಸೇರಿದಂತೆ ಸ್ಥಾನಿಕ ಆಡಳಿತಗಳು, ಪಶುಪಾಲನಾ ಇಲಾಖೆ, ಪೊಲೀಸ್ ಇಲಾಖೆಗಳ ಅಧಿಕಾರಿಗಳ ತಂಡ ರಚಿಸಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ತಾಲೂಕು ವ್ಯಾಪ್ತಿಯಲ್ಲಿ ತಹಶೀಲ್ದಾರ ನೇತೃತ್ವದಲ್ಲಿ ತಂಡಗಳನ್ನು ರಚಿಸಿಕೊಂಡು ಅಕ್ರಮ ಸಾಗಣೆ ಹಾಗೂ ವಧೆ ತಡೆಗಟ್ಟಲು ಕಾರ್ಯೋನ್ಮುಖರಾಗಬೇಕು ಎಂದು ನಿರ್ದೇಶನ ನೀಡಿದರು.
13 ವರ್ಷ ವಯಸ್ಸು ಮೀರಿದ ಎಮ್ಮೆ ಹಾಗೂ ಕೊಣಗಳನ್ನು ವಧೆ ಮಾಡಬಹುದು. ಆದರೆ ಇದಕ್ಕೆ ಸಂಬಂಧಿಸಿದಂತೆ ಪಶು ಇಲಾಖೆಯಿಂದ ನಿರಾಪೇಕ್ಷಣೆ ಪತ್ರ ಹಾಗೂ ವೈದ್ಯಕೀಯ ತಪಾಸಣೆ ಪತ್ರ ಹೊಂದಿರಬೇಕು ಎಂದು ತಿಳಿಸಿದರು.
ಜಾನುವಾರುಗಳ ಸಾಗಾಟ ಮಾಡುವಾಗ, ಖರೀದಿಸುವಾಗ, ಮಾರಾಟ ಮಾಡುವ ಸಂದರ್ಭದಲ್ಲಿ ಜಾನುವಾರುಗಳಿಗೆ ಕಿವಿಯೋಲೆ ಇರುವುದು ಕಡ್ಡಾಯ. ಸಾಗಾಣಿಕೆ ಸಂದರ್ಭದಲ್ಲಿ ಸಂಬಂಧಿಸಿದ ಅಧಿಕಾರಿಗಳಿಂದ ದೃಢೀಕರಣ ಪತ್ರ ತೆಗೆದುಕೊಂಡು ಸಾಗಾಣಿಕೆ ಮಾಡುವುದು ಕಡ್ಡಾಯವಾಗಿರುತ್ತದೆ ಎಂದರು.
ಜಿಲ್ಲೆಯ ಎಲ್ಲಾ ಜಾನುವಾರುಗಳ ಮಾಲೀಕರು ತಮ್ಮ ಜಾನುವಾರುಗಳಿಗೆ ಗುರುತಿನ ಸಂಖ್ಯೆ ಹೊಂದಿರುವ ಕಿವಿಯೋಲೆ ಹಾಕುವಂತೆ ನಿರ್ದೇಶನ ನೀಡಬೇಕು. ಹಬ್ಬದ ಸಂದರ್ಭದಲ್ಲಿ ಮಾಂಸದ ತಾಜ್ಯಗಳನ್ನು ಎಲ್ಲೆಂದರಲ್ಲಿ ಬಿಸಾಡದೇ, ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.
ಮಹಾನಗರಪಾಲಿಕೆ, ಪುರಸಭೆ, ಪಟ್ಟಣ ಪಂಚಾಯತ್, ಗ್ರಾಮ ಪಂಚಾಯತ್ ಸೇರಿದಂತೆ ನಗರ, ಗ್ರಮೀಣ ಸ್ಥಳೀಯ ಸಂಸ್ಥೆಗಳು ಈ ಬಗ್ಗೆ ಮಾಂಸ ಮಾರಾಟಗಾರರಿಗೆ ತಿಳಿವಳಿಕೆ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿ.ಪಂ. ಸಿಇಒ ರಿಷಿ ಆನಂದ, ಎಸ್ಪಿ ಋಷಿಕೇಶ ಸೋನಾವಣೆ, ಎಎಸ್ಪಿ ಶಂಕರ ಮಾರಿಹಾಳ, ಪಶುಪಾಲನಾ ಮತ್ತು ಪಶವೈದ್ಯ ಸೇವಾ ಇಲಾಖೆಯ ಅಶೋಕ ಘೋಣಸಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಇದನ್ನೂ ಓದಿ: Indian Films: ಯುಕೆ ನ್ಯಾಷನಲ್ ಫಿಲ್ಮ್ ಅವಾರ್ಡ್ಸ್‌ಗೆ ಭಾರತದ ಎರಡು ಚಿತ್ರಗಳು ನಾಮಿನೇಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.