Monthly Stipend… ಬಾಲ್ಯ ವಿವಾಹ ತಡೆಗೆ ಅಸ್ಸಾಂನ ಸರ್ಕಾರದಿಂದ ನೂತನ ಕ್ರಮ
Team Udayavani, Jun 12, 2024, 7:43 PM IST
ಗುವಹಾಟಿ: ಬಾಲ್ಯ ವಿವಾಹಕ್ಕೆ ಕಡಿವಾಣ ಹಾಕಲು ಅಸ್ಸಾಂ ಸರ್ಕಾರ ನೂತನ ಕ್ರಮಕ್ಕೆ ಮುಂದಾಗಿದ್ದು ಇದರಿಂದ ಹೆಣ್ಣು ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕೂ ನೆರವಾಗಲು ಸರಕಾರ ಮುಂದಾಗಿದೆ.
ಸಿಎಂ ಹಿಮಂತ್ ಬಿಸ್ವಾ ಶರ್ಮಾ ಸರಕಾರ ಅಸ್ಸಾಂ ನಲ್ಲಿ ಬಾಲ್ಯ ವಿವಾಹಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ರಾಜ್ಯದ ವಿದ್ಯಾರ್ಥಿನಿಯರಿಗೆ ಮಾಸಿಕ ವೇತನ ನೀಡುವುದಾಗಿ ಘೋಷಿಸಿದೆ.
ಈ ಕುರಿತು ಮಾಹಿತಿ ನೀಡಿದ ಸಿಎಂ ಶರ್ಮಾ, ಮುಂದಿನ 5 ವರ್ಷಗಳಲ್ಲಿ “ನಿಜುತ್ ಮೊಯಿನಾ’ ಯೋಜನೆಗಾಗಿ 1,500 ಕೋಟಿ ರೂ. ವೆಚ್ಚವಾಗಲಿದೆ. ಈ ಯೋಜನೆ ಅನ್ವಯ 5 ವರ್ಷಗಳಲ್ಲಿ 10 ಲಕ್ಷ ವಿದ್ಯಾರ್ಥಿನಿಯರಿಗೆ ಮಾಸಿಕ ವೇತನ ನೀಡಲಿದ್ದೇವೆ. 11ನೇ ತರಗತಿಯಿಂದ ಸ್ನಾತಕೋತ್ತರ ಪದವಿವರೆಗೆ ವ್ಯಾಸಂಗ ಮಾಡುವ ಎಲ್ಲ ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು ನೀಡಲಾಗುವುದು. 11, 12ನೇ ತರಗತಿಯವರಿಗೆ ತಿಂಗಳಿಗೆ 1,000ರೂ., ಪದವಿಗೆ 1,250 ರೂ. ಹಾಗೂ ಸ್ನಾತಕೋತ್ತರದವರಿಗೆ 2,500 ರೂ. ದೊರೆಯಲಿದೆ. ಈಗಾಗಲೇ ವಿವಾಹವಾಗಿರುವ, ಶಾಸಕ, ಸಂಸದರ ಮಕ್ಕಳು, ಖಾಸಗಿ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಈ ಯೋಜನೆ ಅನ್ವಯಿಸುವುದಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: ರಿಕ್ಷಾ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ: ಬೇಲೂರು ಮೂಲದ ಆರೋಪಿ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ
Suffocation: ಚಳಿಗೆಂದು ಹಾಕಿದ ಬೆಂಕಿ… ಬೆಳಗಾಗುವಷ್ಟರಲ್ಲಿ ದಂಪತಿಯ ಜೀವವೇ ಹೋಗಿತ್ತು…
IMF; ಜಗತ್ತಿಗೆ ಆರ್ಥಿಕ ಹಿಂಜರಿತ ಉಂಟಾದರೂ, ಭಾರತಕ್ಕೆ ಅಪಾಯ ಇಲ್ಲ
Russia ಸೇನೆಯಲ್ಲಿದ್ದ 16 ಭಾರತೀಯರು ನಾಪತ್ತೆ, 12 ಜನ ಸಾವು: ಕೇಂದ್ರ
ಬಾಲ್ಯ ವಿವಾಹ ಕಾನೂನು ಪರಿಶೀಲನೆ: ಸುಪ್ರೀಂ ಅಸ್ತು
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.