10 ಪಾಲಿಕೆಯಲ್ಲಿ “ಕಾರ್ಪೋರೇಷನ್ ಶಾಲೆ: ಸಚಿವ ಬೈರತಿ ಸುರೇಶ್
Team Udayavani, Jun 12, 2024, 11:39 PM IST
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಇರುವಂತೆ ರಾಜ್ಯದ ಇತರ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲೂ “ಕಾರ್ಪೋರೇಷನ್ ಶಾಲೆ’ ತೆರೆಯುವ ಬಗ್ಗೆ ಸರಕಾರ ಚಿಂತನೆ ನಡೆಸಿದ್ದು, ಸಾಧ್ಯತಾ ವರದಿ ನೀಡುವಂತೆ ಅಧಿಕಾರಿಗಳಿಗೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸೂಚಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳ ಜತೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಈ ವೇಳೆ ಬಿಬಿಎಂಪಿ ಶಾಲೆಗಳ ಮಾದರಿಯಲ್ಲಿ ಉಳಿದ 10 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲೇಕೆ ಆಯಾ ಪಾಲಿಕೆಯಿಂದ ಶಾಲೆಗಳನ್ನು ಆರಂಭಿಸಬಾರದು? ಇದರಿಂದ ಬಡ ಮಕ್ಕಳಿಗೆ ಶಿಕ್ಷಣ ಕೊಡಬಹುದಲ್ಲವೇ? ಎಲ್ಲೆಲ್ಲಿ ಈ ರೀತಿಯ ಶಾಲೆಗಳನ್ನು ತೆರೆಯಲು ಸಾಧ್ಯವಿದೆ ಎನ್ನುವುದನ್ನು ಪರಿಶೀಲಿಸಿ ವರದಿ ನೀಡುವಂತೆ ಸಚಿವರು ಸೂಚಿಸಿದರು.
ಅಲ್ಲದೆ, ಸ್ಮಾರ್ಟ್ ಸಿಟಿ ಯೋಜನೆಯಡಿ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಕಾರ್ಪೋರೇಷನ್ ಶಾಲೆಗಳನ್ನು ತೆರೆಯಲು ಅವಕಾಶ ಇವೆಯೇ ಎಂಬುದನ್ನೂ ಪರಾಮರ್ಶಿಸಿ, ಸಾಧ್ಯತಾ ವರದಿ ಸಲ್ಲಿಸಿ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.