Jammu-Kashmir: ಮುಂದುವರೆದ ಎನ್‌ಕೌಂಟರ್.. ಓರ್ವ ಯೋಧನಿಗೆ ಗಾಯ, ಉಗ್ರರ ರೇಖಾಚಿತ್ರ ಬಿಡುಗಡೆ
ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ಬಹುಮಾನ
Team Udayavani, Jun 13, 2024, 8:43 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಮತ್ತೆ ಎನ್‌ಕೌಂಟರ್ ಮುಂದುವರೆದಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ.
ಕಳೆದ ಮೂರು ದಿನಗಳಲ್ಲಿ ಕೇಂದ್ರಾಡಳಿತ ಪ್ರದೇಶ ನಡೆದ ನಾಲ್ಕನೇ ಎನ್‌ಕೌಂಟರ್ ಇದಾಗಿದ್ದು, ಜಮ್ಮುವಿನ ದೋಡಾ ಪ್ರದೇಶದಲ್ಲಿ ನಡೆದ ಎರಡನೇ ಎನ್‌ಕೌಂಟರ್ ಇದಾಗಿದೆ ಎಂದು ಹೇಳಲಾಗಿದೆ.
ಜೂನ್ 9 ರಂದು ರಿಯಾಸಿಯಲ್ಲಿ ಭಯೋತ್ಪಾದಕರು ಯಾತ್ರಾರ್ಥಿಗಳಿದ್ದ ಬಸ್ಸಿನ ಮೇಲೆ ದಾಳಿ ನಡೆಸಿದ್ದರು, ಇದರಲ್ಲಿ ಒಂಬತ್ತು ಜನರು ಸಾವನ್ನಪ್ಪಿದರು. ಇದಾದ ಬಳಿಕ ಕಥುವಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆದಿತ್ತು, ಈತನ್ಮಧ್ಯೆ ಜಮ್ಮುವಿನ ದೋಡಾ ಜಿಲ್ಲೆಯ ಗಂಡೋ ಪ್ರದೇಶದಲ್ಲಿ ಮತ್ತೆ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಗಾಯಗೊಂಡಿದ್ದಾರೆ. ಘಟನೆ ಬಳಿಕ ಉಗ್ರರು ಸ್ಥಳದಿಂದ ಪರಾರಿಯಾಗಿದ್ದು ಭದ್ರತಾ ಸಿಬ್ಬಂದಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಭಲೇಸಾ ಗ್ರಾಮದ ದಟ್ಟ ಅರಣ್ಯ ಪ್ರದೇಶವಾದ ಕೋಟಾ ಟಾಪ್ ಪ್ರದೇಶದಲ್ಲಿ ರಾತ್ರಿ 7:40 ರ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ಎನ್‌ಕೌಂಟರ್ ನಡೆಯುತ್ತಿದೆ, ಭಯೋತ್ಪಾದಕರ ಪತ್ತೆಗೆ ಕಾರ್ಡನ್ ಕಾರ್ಯಾಚರಣೆಗಳನ್ನು ಬಲಪಡಿಸಲು ಹೆಚ್ಚಿನ ಭದ್ರತಾ ಸಿಬಂದಿಗಳನ್ನು ನಿಯೋಜಿಸಲಾಗಿದ್ದು ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ.
ಉಗ್ರರ ಮಾಹಿತಿ ನೀಡಿದವರಿಗೆ ಬಹುಮಾನ:
ಜಮ್ಮು ಮತ್ತು ಕಾಶ್ಮೀರ ಪೊಲೀಸರು ದೋಡಾ ಜಿಲ್ಲೆಯಲ್ಲಿ ಎರಡು ದಾಳಿಗಳಲ್ಲಿ ಭಾಗಿಯಾಗಿರುವ ನಾಲ್ವರು ಭಯೋತ್ಪಾದಕರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ್ದು ಅವರ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನವನ್ನು ಘೋಷಿಸಿದ್ದಾರೆ. ಪ್ರತಿ ಭಯೋತ್ಪಾದಕರ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ನಗದು ಬಹುಮಾನವನ್ನೂ ಘೋಷಿಸಲಾಗಿದೆ.
ಇದನ್ನೂ ಓದಿ: ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆ; ಭತ್ತ ಬೆಳೆಯುವ ರೈತರು ನೋಂದಾಯಿಸಲು ಸೂಚನೆ
@JmuKmrPolice District Doda RELEASES SKETCHES OF (04) TERRORISTS WHO ARE ROAMING IN UPPER REACHES OF BHADERWAH, THATHRI, GANDOH AND INVOLVED IN TERROR RELATED ACTIVITIES. J&K POLICE ANNOUNCES A CASH REWARD OF Rs 5 LACS FOR providing the INFORMATION OF EACH TERRORIST pic.twitter.com/p0JyqbcQr2
— DISTRICT POLICE DODA (@dpododa) June 12, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.