Ghaziabad: ಮೂರೂ ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ: ಇಬ್ಬರು ಮಕ್ಕಳ ಸಹಿತ ಐವರು ಸಜೀವ ದಹನ

Team Udayavani, Jun 13, 2024, 11:03 AM IST

Ghaziabad: ಮೂರೂ ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ: ಇಬ್ಬರು ಮಕ್ಕಳ ಸಹಿತ ಐವರು ಸಜೀವ ದಹನ

ಗಾಜಿಯಾಬಾದ್‌: ಮೂರೂ ಅಂತಸ್ತಿನ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮಕ್ಕಳು, ಮಹಿಳೆಯರು ಸೇರಿದಂತೆ ಐದು ಮಂದಿ ಸಜೀವ ದಹನಗೊಂಡಿರುವ ಘಟನೆ ಗಾಜಿಯಾಬಾದ್‌ ನ ಲೋನಿ ಪ್ರದೇಶದಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ.

ಬುಧವಾರ ತಡರಾತ್ರಿ ಕಟ್ಟಡದ ತಳಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಬಳಿಕ ಬೆಂಕಿ ಇಡೀ ಕಟ್ಟಡಕ್ಕೆ ಆವರಿಸಿದೆ ಕಟ್ಟಡದ ಎರಡು ಹಾಗೂ ಮೂರನೇ ಮಹಡಿಯಲ್ಲಿದ್ದ ಜನರು ಹೊರಬರಲಾಗದೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನಲಾಗಿದೆ, ಮೃತರಲ್ಲಿ ಏಳು ತಿಂಗಳ ಹಸುಳೆ, ಏಳು ವರ್ಷದ ಬಾಲಕಿ, ಮಹಿಳೆಯರು, ವೃದ್ದರು ಸೇರಿದಂತೆ ಒಟ್ಟು ಐದು ಮಂದಿ ಸೇರಿದ್ದಾರೆ. ಅಗ್ನಿಶಾಮಕ ಸಿಬಂದಿ ಹಾಗೂ ಸ್ಥಳೀಯರ ಸಹಕಾರದಿಂದ ಬೆಂಕಿಯನ್ನು ನಂದಿಸಲಾಗಿದೆ, ಘಟನೆಯಲ್ಲಿ ಒಬ್ಬ ಮಹಿಳೆ ಮತ್ತು ಬಾಲಕಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಟ್ಟಡದಲ್ಲಿ ಸಂಗ್ರಹಿಸಿದ್ದ ಥರ್ಮಾಕೋಲ್, ಫೋಮ್‌ನಿಂದ ಬೆಂಕಿಯ ತೀವ್ರತೆ ಹೆಚ್ಚಾಗಿರುವ ಸಾಧ್ಯತೆ ಇದೆ ಎನ್ನಲಾಗಿದ್ದು ಬೆಂಕಿ ಅವಘಡ ಹೇಗೆ ಸಂಭವಿಸಿದೆ ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ, ಘಟನೆಯಲ್ಲಿ ಮೃತಪಟ್ಟವರ ಮಾಹಿತಿಯನ್ನು ಕಲೆಹಾಕುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಘಟನೆ ಸಂಬಂಧ ಮಾಹಿತಿ ನೀಡಿದ ಪ್ರತ್ಯಕ್ಷ ದರ್ಶಿಯೊಬ್ಬರು 3 ಅಂತಸ್ತಿನ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೊದಲು ನೆಲಮಹಡಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಇದರಿಂದಾಗಿ ಮನೆಯ ಸದಸ್ಯರು ಮನೆಯಿಂದ ಹೊರಬರಲಾಗದೆ ಸಿಲುಕಿಕೊಂಡಿದ್ದಾರೆ. ಅಲ್ಲದೆ ಮನೆಯ ಒಳಗಿಂದ ಮಹಿಳೆಯರು ತಮ್ಮನ್ನು ರಕ್ಷಣೆ ಮಾಡುವಂತೆ ಕಿರುಚುತ್ತಿದ್ದರು ಆದರೆ ನಾವು ಏನು ಮಾಡಲಾಗದ ಸ್ಥಿತಿಯಲ್ಲಿದ್ದೆವು ಬಳಿಕ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದೆವು ಇದಾದ ಬಳಿಕ ಅಗ್ನಿಶಾಮಕ ತಂಡ ಹಾಗು ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸಲಾಯಿತು. ಮನೆಯ ತಳ ಅಂತಸ್ಥಿನಲ್ಲಿ ಹೆಚ್ಚಿನ ಫೋಮ್ ಶೀಟ್‌ಗಳನ್ನು ಸಂಗ್ರಹಿಸಲಾಗಿತ್ತು ಜೊತೆಗೆ ಡಬ್ಬಗಳಲ್ಲಿ ಕೆಲವು ಕೆಮಿಕಲ್ ಕೂಡ ಇಡಲಾಗಿದ್ದು ಇದರಿಂದಾಗಿ ಬೆಂಕಿ ವೇಗವಾಗಿ ವ್ಯಾಪಿಸಿದೆ ಎಂದು ಹೇಳಿದ್ದಾರೆ.

ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಭರ್ಜರಿ ಏರಿಕೆ, 23,000 ಗಡಿದಾಟಿದ ನಿಫ್ಟಿ

ಟಾಪ್ ನ್ಯೂಸ್

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.