ಮೂಡುಬಿದಿರೆ:ಮಗುತನವಿದ್ದರೆ ಮಾತ್ರ ಮನುಷ್ಯರಾಗಲು ಸಾಧ್ಯ- ಅರುಣ್ ಸಾಗರ್
Team Udayavani, Jun 13, 2024, 2:32 PM IST
ಮೂಡುಬಿದಿರೆ: “ಮನುಷ್ಯ ತಾನೊಂದೆ ಕುಲಂ’ ಎಂಬ ಆದಿ ಕವಿ ಪಂಪನ ವಾಣಿಯಂತೆ, ಬಸವಣ್ಣನವರು ಹೇಳಿದಂತೆ ಇವನಾರವ ಇವನಾರವನೆಂದೆನಿಸದಿರಯ್ನಾ…’ ಎಂಬಂತೆ ನಮ್ಮೊಳಗೆ ಸಮತಾಭಾವವಿರಲಿ. ಮನಸ್ಸಿನೊಳಗೆ ಮಗುತನ ಇದ್ದರೆ ಮಾತ್ರ ದೊಡ್ಡ ಮನುಷ್ಯರಾಗಲು ಸಾಧ್ಯ. ಮನುಷ್ಯತ್ವದ ಮಹಲು ಕಟ್ಟುತ್ತಿರುವ ಮೋಹನ ಆಳ್ವರಂಥವರ ಜತೆಯಾಗೋಣ ಎಂದು ನಟ, ರಂಗಕರ್ಮಿ ಅರುಣ್ ಸಾಗರ್ ಹೇಳಿದರು.
ವಿದ್ಯಾಗಿರಿಯ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿಸಿರಿ) ವೇದಿಕೆಯಲ್ಲಿ ಮಂಗಳವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ
“ಆಳ್ವಾಸ್ ಟ್ರೆಡಿಶನಲ್ ಡೇ -2024’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಗುವಿಗೆ ಜ್ಞಾನ ನೀಡಿ ಹೃದಯ ಭಾವನೆ
ಅರಳಿಸುವುದು ಶಿಕ್ಷಣ. ಒಳ್ಳೆಯವರಾಗಿ ಬದುಕುವುದೇ ಸಂಸ್ಕೃತಿ. ಜೀವನದಲ್ಲಿ ಪಾಸು ಫೇಲ್ ಇಲ್ಲ, ಪ್ರತಿ ಕ್ಷಣವೂ ಪರೀಕ್ಷೆ.
ನಿಮ್ಮನ್ನು ನೀವು ಆಳುವವರಾಗಿ ಎಂದವರು ಕರೆ ನೀಡಿದರು.
ನಿರ್ದೇಶಕ ಇಂದ್ರಜಿತ್ ಲಂಕೇಶ್ ಮಾತನಾಡಿ, ಇಲ್ಲಿ ನಡೆಯುವ ಪ್ರತಿ ಕಾರ್ಯವೂ ಅನನ್ಯ. ನಾನು 8 ವರ್ಷಗಳ ಹಿಂದೆ ಆಳ್ವಾಸ್
ಗೆ ಬಂದಿದ್ದೇನೆ. ಈಗ ಬೃಹತ್ ಆಗಿ ಬೆಳೆದು ನಿಂತಿದೆ. ದೇಶದ ವಿದ್ಯಾರ್ಥಿ ಗಳನ್ನು ತನ್ನತ್ತ ಸೆಳೆಯುತ್ತಿದೆ ಎಂದರು.
ರೇಸರ್ ಅರವಿಂದ ಕೆ.ಪಿ., ನಟಿಯರಾದ ಚೈತ್ರಾ ಶೆಟ್ಟಿ, ವಿಜೇತಾ ಪೂಜಾರಿ, ನಟ ಮೈಮ್ ರಾಮದಾಸ್, ಆಳ್ವಾಸ್ ಶಿಕ್ಷಣ
ಪ್ರತಿಷ್ಠಾನನದ ಅಧ್ಯಕ್ಷ ಡಾ| ಎಂ.ಮೋಹನ ಆಳ್ವ, ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಉಪಸ್ಥಿತರಿದ್ದರು.
700ಕ್ಕೂ ಅಧಿಕ ವಿದ್ಯಾರ್ಥಿಗಳು ಕಲಾವಿದರಾಗಿ ರಂಜನೆ
ವಿದ್ಯಾಗಿರಿಯಲ್ಲಿ ಮಂಗಳವಾರ ಭಾರತದ ಸಾಂಪ್ರದಾಯಿಕ ಸಾಂಸ್ಕೃತಿಕ ಸೊಬಗಿನ ಅನಾವರಣವಾಯಿತು. ವಿದ್ಯಾರ್ಥಿಗಳು ದೇಶದ ವಿವಿಧ ಸಾಂಪ್ರದಾಯಿಕ ಉಡುಪುಗಳಲ್ಲಿ ಉಲ್ಲಾಸ, ಹುರುಪಿನಿಂದ ಓಡಾಡುತ್ತಿದ್ದರು. ಎಲ್ಲೆಲ್ಲೂ ಮಂದಹಾಸ, ಮುಗುಳ್ನಗು , ಸಂಭ್ರಮ. ಮಹಾರಾಷ್ಟ್ರ ,ಗುಜರಾತ್, ಈಶಾನ್ಯ ಭಾರತ, ಕೇರಳ, ಕರಾವಳಿ ಕರ್ನಾಟಕ, ಇತರೆ ಭಾರತ ಸೇರಿದಂತೆ ಆರು ತಂಡಗಳು ತಮ್ಮ ತವರೂರಿನ ಕಲಾ ಪ್ರಕಾರವನ್ನು ಪ್ರದರ್ಶಿಸಿದರು.
ಪುರುಷರದಲ್ಲದೆ ವಿಶೇಷವಾಗಿ ಹೆಣ್ಮಕ್ಕಳ ಪಿಲಿ ನಲಿಕೆ, ನಿಹಾಲ್ ತಾವ್ರೋ ಅವರ ಗಾಯನ, ವಿವಿಧ ರಾಜ್ಯಗಳ ಬೀದಿ ಬದಿಯ ಮನೋರಂಜನ ಆಟಗಳ ಪ್ರದರ್ಶನ, ಫೈರ್ ಡ್ಯಾನ್ಸ್, ಕನ್ನಡ ಕಾಮೆಡಿ, ಬೀಟ್ ಗುರು ತಂಡದ ಕಾರ್ಯಕ್ರಮ, ಆಹಾರ ಮೇಳ, ಕಲಾ ಪ್ರದರ್ಶನಗಳಿಂದ ಕಾರ್ಯಕ್ರಮ ಕಳೆಗಟ್ಟಿತು. ಏಳುನೂರಕ್ಕೂ ಅಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಕಲಾವಿದರಾಗಿ ವೀಕ್ಷಕರ ಮನಸೆಳೆದರು. ಸ್ಪರ್ಧಾ ಸ್ವರೂಪದ ಕಲಾಪಗಳಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.
ನಟ ಸಮರ್ಜಿತ್ ಲಂಕೇಶ್, ನಾಯಕಿ ಸಾನಿಯಾ ಅಯ್ಯರ್, ನಟಿ ಮಾನಸಿ ಸುಧೀರ್, ಸೃಜನಾ ಇದ್ದರು. ಗಾಯಕ ನಿಹಾಲ್ ತಾವ್ರೋ ಹಾಡಿ ರಂಜಿಸಿದರು. ನಿತೇಶ್ ಮಾರ್ನಾಡ್ ಸಭಾ ಕಲಾಪ, ಅವಿನಾಶ್ ಕಟೀಲು ಸಾಂಸ್ಕೃತಿಕ ಕಲಾಪ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.