Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Team Udayavani, Jun 13, 2024, 10:51 PM IST
ಮಂಗಳೂರು: ಪೊಲೀಸ್ ಕಮಿಷನರೆಟ್ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಂಜನಾಡಿ ಕಲ್ಕಟ್ಟ ನಿವಾಸಿ ಮಹಮ್ಮದ್ ಸಾದಿಕ್ (35) ಬಂಧಿತ ಆರೋಪಿ. ಆರೋಪಿಯ ವಿರುದ್ಧ ಕೊಣಾಜೆ ಠಾಣೆಯಲ್ಲಿ 3 ವಾರಂಟ್, ಉಳ್ಳಾಲದಲ್ಲಿ 1 ವಾರಂಟ್ ಇದೆ. ಈತ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಕಳೆದ 3 ವರ್ಷದಿಂದ ತಲೆಮರೆಸಿಕೊಂಡಿದ್ದು, ಕೋರ್ಟ್ ವಾರಂಟ್ ಹೊರಡಿಸಿತ್ತು. ಈತನಿಗೆ ಹುಡುಕಾಟ ನಡೆಸುತ್ತಿದ್ದ ಕಂಕನಾಡಿ ನಗರ ಠಾಣಾ ಪೊಲೀಸರು ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಕಾಸರಗೋಡಿನಲ್ಲಿ ಬಂಧಿಸಿದ್ದಾರೆ. ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಕಂಕನಾಡಿ ನಗರ ಠಾಣಾ ಇನ್ಸ್ಪೆಕ್ಟರ್ ಟಿ.ಡಿ. ನಾಗರಾಜ್, ಎಎಸ್ಐ ವೆಂಕಟೇಶ್ ಮತ್ತು ಸಿಬಂದಿ ಗಂಗಾಧರ್, ಶಿವಾನಂದ್ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.