ICC T20 World Cup 2024 ಕೂಟದಿಂದಲೇ ಹೊರಬಿದ್ದ ಎರಡು ದಿಗ್ಗಜ ತಂಡಗಳು
Team Udayavani, Jun 14, 2024, 11:25 AM IST
ಟ್ರಿನಿಡಾಡ್: ಐಸಿಸಿ ಟಿ20 ವಿಶ್ವಕಪ್ 2024ರಲ್ಲಿ ಗ್ರೂಪ್ ಹಂತದಲ್ಲೆ ಎರಡು ತಂಡಗಳು ಅಧಿಕೃತವಾಗಿ ಹೊರಬಿದ್ದಿದೆ. 2021ರ ಫೈನಲಿಸ್ಟ್ ನ್ಯೂಜಿಲ್ಯಾಂಡ್ ಮತ್ತು 2014ರ ಚಾಂಪಿಯನ್ ಶ್ರೀಲಂಕಾ ಈ ಬಾರಿಯ ಕೂಟದಿಂದ ಅಧಿಕೃತವಾಗಿ ಹೊರಬಿದ್ದಿದೆ.
ಶುಕ್ರವಾರ ಬೆಳಗ್ಗೆ ಟ್ರಿನಿಡಾಡ್ ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡವು ಗೆಲುವು ಸಾಧಿಸುವ ಮೂಲಕ ನ್ಯೂಜಿಲ್ಯಾಂಡ್ ಹೊರ ಬೀಳುವುದು ಖಚಿತವಾಗಿದೆ. ಸಿ ಗುಂಪಿನಿಂದ ಅಫ್ಘಾನಿಸ್ತಾನ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಂದಿನ ಹಂತಕ್ಕೆ ಪ್ರವೇಶ ಪಡೆದಿದೆ.
ಕಿವೀಸ್ ತಂಡವು ಈವರೆಗೆ ಎರಡು ಪಂದ್ಯ ಮಾತ್ರ ಆಡಿದ್ದು, ಎರಡರಲ್ಲೂ ಸೋಲು ಕಂಡಿದೆ. ಇನ್ನು ಉಗಾಂಡ ಮತ್ತು ಪಪುವಾ ನ್ಯೂಗಿನಿ ವಿರುದ್ದ ಆಡಲಿದ್ದು ಅದು ಲೆಕ್ಕಭರ್ತಿಯ ಆಟವಾಗಲಿದೆ.
ಮತ್ತೊಂದೆಡೆ ಗುರುವಾರದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವು ನೆದರ್ಲ್ಯಾಂಡ್ ವಿರುದ್ದ ಗೆದ್ದ ಕಾರಣದಿಂದ ಶ್ರೀಲಂಕಾ ತಂಡದ ಅಭಿಯಾನ ಅಂತ್ಯವಾಗಿದೆ. ಲಂಕಾ ತಂಡವು ಮೂರು ಪಂದ್ಯವಾಡಿದ್ದು, ಎರಡರಲ್ಲಿ ಸೋಲು ಕಂಡಿದೆ. ನೇಪಾಳ ವಿರುದ್ದದ ಪಂದ್ಯ ಮಳೆಯ ಕಾರಣದಿಂದ ರದ್ದಾಗಿದೆ.
ಡಿ ಗುಂಪಿನಲ್ಲಿ ದಕ್ಷಿಣ ಆಫ್ರಿಕಾವು ಸೂಪರ್ 8 ಹಂತಕ್ಕೆ ಅಧಿಕೃತ ಪ್ರವೇಶ ಪಡೆದಿದೆ. ಉಳಿದಂತೆ ಬಾಂಗ್ಲಾದೇಶವು ಮುಂದಿನ ಹಂತಕ್ಕೆ ಹೋಗುವುದು ಬಹುತೇಕ ಖಚಿತ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC World Rankings: ಟೆಸ್ಟ್ ಬೌಲಿಂಗ್ ರ್ಯಾಂಕಿಂಗ್ ಬುಮ್ರಾ ಮರಳಿ ನಂ.1
Brand Value: ಬಾಲಿವುಡ್ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್ ಮೌಲ್ಯ!
IPL Auction: 27 ಕೋ. ರೂ. ಒಡೆಯ ರಿಷಭ್ ಪಂತ್ಗೆ ಸಿಗುವುದು 18.90 ಕೋಟಿ ಮಾತ್ರ!
IPL Auction: ಗುಜರಾತ್ ಟೈಟಾನ್ಸ್ ಪಾಲಾದ ಸಿರಾಜ್; ಆರ್ಸಿಬಿಗೆ ಹೃದಯಸ್ಪರ್ಶಿ ಸಂದೇಶ
Pro Kabbaddi: ಅಗ್ರಸ್ಥಾನಿ ಹರಿಯಾಣ 11ನೇ ವಿಕ್ರಮ; ಪುಣೇರಿ ಪಲ್ಟಾನ್ಗೆ ಸೋಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್ಯಾಂಕಿಂಗ್ ಬುಮ್ರಾ ಮರಳಿ ನಂ.1
Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ
Udupi: ಪೊಲೀಸ್ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.